ಚಿತ್ರದುರ್ಗ | ಯುವಪೀಳಿಗೆಗೆ ಪ್ರಜಾಪ್ರಭುತ್ವದ ಅರಿವು ಮುಖ್ಯ: ಸಿಇಓ ಡಾ ಆಕಾಶ್

Date:

ದೇಶದ ಯುವಪೀಳಿಗೆಯು ಸಂವಿಧಾನದ ಅರಿವು ಹಾಗೂ ಪ್ರಜಾಪ್ರಭುತ್ವದ ಮಹತ್ವ ಹಾಗೂ ನಮ್ಮ ದೇಶ ಸ್ವಾತಂತ್ರ್ಯ ಗಳಿಸಿದ ಬಗೆಯನ್ನು ಸಮಗ್ರವಾಗಿ ಅರಿತುಕೊಳ್ಳಬೇಕು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ (ಸಿಇಓ) ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎಸ್. ಆಕಾಶ್ ತಿಳಿಸಿದರು.

- Advertisement -
1002696673
Oplus_131072

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸೆಪ್ಟೆಂಬರ್ 15ರಂದು ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, “ಭಾರತ ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ದೇಶ. ಕಾರಣ ನಮ್ಮಲ್ಲಿನ ಜನಸಂಖ್ಯೆ. ದೇಶದ ಜನಸಂಖ್ಯೆ ಸುಮಾರು 140 ಕೋಟಿ ಇದ್ದು, ಮತದಾನದ ಹಕ್ಕು ಹೊಂದಿರುವ ಸುಮಾರು 100 ಕೋಟಿಗೂ ಹೆಚ್ಚು ಜನ ನಮ್ಮಲ್ಲಿದ್ದಾರೆ. ಜನರೇ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರವನ್ನು ಹೊಂದಿದ್ದಾರೆ. ಮತದಾನದ ಮೂಲಕ ನಾವು ಆಯ್ಕೆ ಮಾಡಿರುವ ನಾಯಕರೇ ನಮ್ಮನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಇಂತಹ ನಾಯಕರು ಯಾವ ರೀತಿ ಇರಬೇಕು ಎಂಬುದನ್ನು ಜನರೇ ನಿರ್ಧರಿಸುವುದರಿಂದ, ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ದೇಶದಲ್ಲಿ ಬಲಿಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಈ ಬಾರಿ ಪ್ರಜಾಪ್ರಭುತ್ವ ದಿನವನ್ನು “ನಮ್ಮ ಮತ- ನಮ್ಮ ಹಕ್ಕು” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದು, ಅಧಿಕೃತವಾಗಿ ಜಾರಿಗೊಂಡ ದಿನವಾದ ಜನವರಿ 26 ಅನ್ನು ನಾವು ಗಣರಾಜ್ಯ ದಿನವನ್ನಾಗಿ ಆಚರಿಸುತ್ತೇವೆ. ಯುವಪೀಳಿಗೆ ತಮ್ಮ ವಿಧ್ಯಾಭ್ಯಾಸದ ಅವಧಿಯಲ್ಲಿ ಸಂವಿಧಾನದಲ್ಲಿ ಅಡಕವಾಗಿರುವ ಅಂಶಗಳು, ದೇಶ, ರಾಜ್ಯದಲ್ಲಿನ ಪೌರನೀತಿಗಳ ಬಗ್ಗೆ ಸಮಗ್ರವಾದ ಅರಿವು ಹೊಂದಬೇಕು” ಎಂದು ಸಲಹೆ ನೀಡಿದರು.

1002696669

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಅವರು ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಜನಪರವಾಗಿರಬೇಕು. ಸರ್ಕಾರದ ಆಳ್ವಿಕೆ ಯಾವ ರೀತಿ ಇರಬೇಕು ಎನ್ನುವುದನ್ನು ಪ್ರಜೆಗಳೇ ನಿರ್ಧರಿಸಬೇಕು. ಆಗಿನ ಪ್ರಧಾನಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರು ಮತದಾನಕ್ಕೆ ಇದ್ದಂತಹ 21 ವರ್ಷ ವಯಸ್ಸಿನ ಅರ್ಹತೆಯ ಮಿತಿಯನ್ನು 18 ವರ್ಷಕ್ಕೆ ಇಳಿಸುವ ಮೂಲಕ ಯುವಜನರಿಗೆ ಮತದಾನದ ಹಕ್ಕನ್ನು ನೀಡಿದರು. ಚುನಾವಣೆ ಸಂದರ್ಭಗಳಲ್ಲಿ ಯುವ ಪೀಳಿಗೆ, ಸಮಾಜಮುಖಿ ಆಡಳಿತ ಮಾಡುವವರನ್ನು ನಿರ್ಭಯದಿಂದ ಮತದಾನ ಮಾಡುವ ಮೂಲಕ ಆಯ್ಕೆ ಮಾಡಬೇಕು” ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸಂವಿಧಾನದ ಪೀಠಿಕೆ, ಪ್ರತಿಜ್ಞಾ ವಿಧಿ ಬೋಧಿಸಿದರು. ಇದಕ್ಕೂ ಮುನ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

1002696670

ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ಮತ್ತು ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಸೈಕಲ್ ಹಾಗೂ ಬೈಕ್ ರ್ಯಾಲಿಯು ಮಹಾತ್ಮಾಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ, ಕನಕ ವೃತ್ತದ ಮೂಲಕ ಮತ್ತೆ ಪುನಃ ಜಿಲ್ಲಾಧಿಕಾರಿಗಳ ಕಚೇರಿವರೆಗೂ ನಡೆಯಿತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತ ಚಲಾವಣೆ ಕಳವಳಕಾರಿ: ಎಸ್ಪಿ ರಂಜಿತ್ ಕುಮಾರ್

ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ನಗರಸಭೆ ಅಧ್ಯಕ್ಷೆ ಎಂ.ಪಿ. ಅನಿತಾ ರಮೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಗಣ್ಯರಾದ ರಮೇಶ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ ತಹಶೀಲ್ದಾರ್ ಗೋವಿಂದರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...