ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಆಯೋಜಿಸಿರುವ ಬಸವ ಸಂಸ್ಕೃತಿ ಅಭಿಯಾನ ಇಂದು ಚಿತ್ರದುರ್ಗದಲ್ಲಿ ನಡೆಯಬೇಕಿತ್ತು, ಶರಣ ಸಂಸ್ಕೃತಿ ಉತ್ಸವದಲ್ಲಿ ಒಂದು ದಿನ ಆಯೋಜಿಸುವ ಕಾರಣದಿಂದ ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ.

ಚಿತ್ರದುರ್ಗದಲ್ಲಿ ಪ್ರತಿ ಬಾರಿಯಂತೆ ಮುರುಘಾ ಮಠದ ದಸರಾ ಅಂಗವಾಗಿ ಶರಣ ಸಂಸ್ಕೃತಿ ಉತ್ಸವ ಸೆಪ್ಟೆಂಬರ್ 25ರಿಂದ ಅಕ್ಟೋಬರ್ 3ರವರೆಗೆ ನಡೆಯಲಿದೆ. ಇದರೊಂದಿಗೆ ಬಸವ ಸಂಸ್ಕೃತಿ ಅಭಿಯಾನ ಕೂಡ ಸೆಪ್ಟೆಂಬರ್ 28ಕ್ಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 28 ರಂದು ಬಸವ ಸಂಸ್ಕೃತಿ ಅಭಿಯಾನ ಹಾಗೂ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಐದು ಸಾವಿರ ಶರಣ-ಶರಣೆಯರ ಕಂಠಸಿರಿಯಿಂದ ಸಾಮೂಹಿಕ ವಚನಗಾನ ‘ವಚನ ಝೇಂಕಾರ’ ಕಾರ್ಯಕ್ರಮವೂ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ
ಹಿಂದಿನ ವೇಳಾಪಟ್ಟಿಯಂತೆ ಸೆಪ್ಟೆಂಬರ್ 28ಕ್ಕೆ ಅಭಿಯಾನ ಚಿಕ್ಕಬಳ್ಳಾಪುರದಲ್ಲಿ ನಿಗದಿಯಾಗಿತ್ತು. ಅಲ್ಲಿ ನಡೆಯಬೇಕಿದ್ದ ಅಭಿಯಾನದ ಮುಂದಿನ ದಿನಾಂ ಇನ್ನೆಷ್ಟೇ ನಿರ್ಧಾರವಾಗಬೇಕಿದೆ. ನಾಳೆ ಸೆಪ್ಟೆಂಬರ್ 29ಕ್ಕೆ ಶಿವಮೊಗ್ಗದಲ್ಲಿ ನಡೆಯಲಿದೆ.