ಚಿತ್ರದುರ್ಗ | ಶುದ್ದ ನೀರಿನ ಘಟಕ ಕಾಮಗಾರಿಗೆ ಭೂಮಿ ಪೂಜೆ

Date:

‌ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯ ನೀರಿನ ಸಂಪರ್ಕವನ್ನು ಹೊಸದಾಗಿ ನಿರ್ಮಿಸುವ ಯೋಜನೆಗೆ ಸರ್ಕಾರ ನಿರ್ಧರಿಸಿದ್ದು, ಸಂಪೂರ್ಣವಾಗಿ ಹೊಸದಾದ ಸಂಗ್ರಹ ಟ್ಯಾಂಕ್, ನೀರಿನ ಸಂಪರ್ಕ ಶುದ್ಧ ಕುಡಿಯುವ ನೀರಿನ ಘಟಕ ನೀಡಿ ನಿರ್ವಹಣೆ ಮಾಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.

- Advertisement -

ನಗರದ ಕವಾಡಿಗರ ಹಟ್ಟಿಯಲ್ಲಿ ಮಂಗಳವಾರ ನಗರಸಭೆ ಮತ್ತು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಪೈಪ್‌ಲೈನ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಗರಸಭೆಯ ₹3.07 ಕೋಟಿ ಅನುದಾನದಲ್ಲಿ, ಇಡೀ ಕವಾಡಿಗರಹಟ್ಟಿಗೆ ಹೊಸದಾಗಿ ಪೈಪ್‌ಲೈನ್ ಅಳವಡಿಕೆ, ಮನೆ ಮನೆಗೆ ಹೊಸ ನಳದ ಸಂಪರ್ಕ, 2.5 ಲಕ್ಷ ಲೀಟರ್ ಸಾಮರ್ಥ್ಯವಿರುವ ಓವರ್ ಹೆಡ್ ಟ್ಯಾಂಕ್ ಹಾಗೂ ಹಿರೇಕಂದವಾಡಿ ನೀರು ಶುದ್ದೀಕರಣ ಘಟಕದ ರಿಪೇರಿ ಕಾಮಗಾರಿಗಳನ್ನು ಮಾಡಲಾಗುವುದು” ಎಂದರು.

“ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ₹16.50 ಲಕ್ಷ ಅನುದಾನದಲ್ಲಿ, ಕವಾಡಿಗರಹಟ್ಟಿಯಲ್ಲಿ ಹೊಸ ಬೋರವೆಲ್ ಕೊರೆಯುವುದರೊಂದಿಗೆ, 1000 ಲೀಟರ್ ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಹಾಗೂ 5 ವರ್ಷ ಘಟಕದ ನಿರ್ವಹಣೆಯನ್ನು ಇಲಾಖೆಯೇ ಮಾಡಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಭೂ ಹಗರಣ ಪ್ರಕರಣ; ಗಂಭೀರವಾಗಿ ಪರಿಗಣಿಸಿದ ಸರ್ಕಾರ

ಇದೇ ಸಂದರ್ಭದಲ್ಲಿ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್ ಅವರು ಕಳೆದ 31 ದಿನಗಳಿಂದ ನಿರಂತರವಾಗಿ ಜನರಿಗೆ ಆರೋಗ್ಯ ಸೇವೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದಿಸಿ ಮಾಹಿತಿ ಪಡೆದಕೊಂಡರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಕೆ ಸಿ ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...

ಮೊಳಕಾಲ್ಮೂರು | ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ರೈತ ಸಂಘ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್...

ಹಿರಿಯೂರು | ಕಲ್ಲುವಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆ

 ಕಲ್ಲುವಳ್ಳಿ ಭಾಗದ ರೈತರು ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ವಾಣಿವಿಲಾಸ...