ಚಿತ್ರದುರ್ಗ | 500 ಕೋಟಿ ಮಹಿಳೆಯರು ಕೆಎಸ್‍ಆರ್‌ಟಿಸಿ ಉಚಿತ ಬಸ್ ಪ್ರಯಾಣ: ಸಂಭ್ರಮಾಚರಣೆ

Date:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ʼಶಕ್ತಿʼ ಯೋಜನೆಯಡಿ 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ನಡೆಯಿತು. ಮಹಿಳಾ ಫಲಾನುಭವಿಗಳಿಗೆ ಸಿಹಿ ವಿತರಿಸಿದ ಚಿತ್ರದುರ್ಗ ಶಾಸಕ ಕೆ ಸಿ ವೀರೇಂದ್ರ ಪಪ್ಪಿ 500 ಕೋಟಿ ಫಲಾನುಭವಿಗಳ ಮೈಲುಗಲ್ಲಿನ ಯಶಸ್ಸನ್ನು ಆಚರಿಸಿದರು.

- Advertisement -

ಚಿತ್ರದುರ್ಗ ನಗರದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಲಂಕೃತವಾಗಿರುವ ಬಸ್‍ಗೆ ಚಿತ್ರದುರ್ಗ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್ ಶಿವಣ್ಣ ಅವರು ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಮತ್ತು ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಹೂ ಹಾಗೂ ಸಿಹಿ ವಿತರಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1002316935

ಐದು ಗ್ಯಾರಂಟಿ ಯೋಜನೆಗಳ ಪೈಕಿ ʼಶಕ್ತಿʼ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದ 2023ರ ಜೂನ್ 11ರಿಂದ ಜಾರಿಗೊಳಿಸಿದ್ದು, ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ ಫಲಾನುಭವಿಗಳ ಸಂಖ್ಯೆ 500 ಕೊಟಿ ಗಡಿ ದಾಟಿದ್ದು, ಈ ಸಂಭ್ರಮವನ್ನು ಸಾಂಕೇತಿಕವಾಗಿ ರಾಜ್ಯದ ಜಿಲ್ಲಾ ಕೇಂದ್ರ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು ಸೇರಿದಂತೆ ಎಲ್ಲ ತಾಲೂಕುಗಳಲ್ಲಿನ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ, ಬಸ್ಸಿಗೆ ಪೂಜೆ ಸಲ್ಲಿಸಿ, ಸಾರಿಗೆ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ತ್ರೀಯರ ಸಮಾನ ಶಿಕ್ಷಣ, ಸ್ವಾತಂತ್ರ್ಯ ಇಲ್ಲದ ಸಮಾಜ, ದೇಶದ ಪ್ರಗತಿ ಸಾಧ್ಯವಿಲ್ಲ: ಸಚಿವ ಸಂತೋಷ್ ಲಾಡ್

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಹಾಗೂ ಬಿ.ಟಿ. ನಿರಂಜನ್, ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಅಬ್ದುಲ್ಲಾ ಷಾವಲಿ, ಇಂದಿರಾ, ಪಾಲೇಗೌಡ, ತಾಲ್ಲೂಕು ಸಮಿತಿ ಸದಸ್ಯರಾದ ರಾಜೇಶ್ ಮದುರೆ, ವಿ. ದಿನೇಶ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಸಾರಿಗೆ ಸಂಸ್ಥೆಯ ಸಿಬ್ಬಂದಿ, ವಿವಿಧ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮೂಹಿಕ ಅತ್ಯಾಚಾರಕ್ಕೆ ಮಹಿಳೆ ನೆರವಾಗಿದ್ದರೆ ಆಕೆಯೂ ಆರೋಪಿ: ದೆಹಲಿ ಹೈಕೋರ್ಟ್

ಮಹಿಳೆಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಪ್ರತ್ಯಕ್ಷವಾಗಿ ದೈಹಿಕ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...