ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ

Date:

ಅಂಗನವಾಡಿ ಕಾರ್ಯಕರ್ತೆಯರ ಸಂಘಟಿಸಿದ ಮುಂದಾಳು, ಸಿಐಟಿಯು ಸಂಘಟನೆ ನಾಯಕಿ ಎಸ್‌.ವರಲಕ್ಷ್ಮಿಯವರನ್ನು ಪ್ರತಿಷ್ಠಿತ ರೈತ ನಾಯಕ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಇಪ್ಪತ್ತೈದು ಸಾವಿರ ರು ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಡಿಸೆಂಬರ್ ತಿಂಗಳಲ್ಲಿ ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಪ್ರತಿಷ್ಠಾನದ ಮುಖಂಡರು ತಿಳಿಸಿದ್ದಾರೆ.

- Advertisement -

“ಕಳೆದ ವರ್ಷ ಅಗಲಿದ ಚಿತ್ರದುರ್ಗ ಜಿಲ್ಲೆಯವರಾದ ಹಿರಿಯ ರೈತ ಹೋರಾಟಗಾರ ಟಿ.ನುಲೇನೂರು ಶಂಕರಪ್ಪ ಅವರ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಾಗಿದ್ದು   ಸಾಮಾಜಿಕ, ರೈತ, ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರಿಗೆ ರಾಜ್ಯಮಟ್ಟದಲ್ಲಿ ಪ್ರತಿ ವರ್ಷ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಪ್ರಥಮ ವರ್ಷದಲ್ಲಿ ಮಹಿಳಾ ಹೋರಾಟಗಾರ್ತಿಗೆ  ಪ್ರಶಸ್ತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ” ಎಂದು ಪ್ರತಿಷ್ಠಾನದ ಪರವಾಗಿ ಡಾ.ರವಿಶಂಕರ್ ನುಲೇನೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...
1003111279

ಎಸ್ ವರಲಕ್ಷ್ಮಿ ಅವರು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ವೀರಕಪುತ್ರ ಗ್ರಾಮದವರು. ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಮಡಿಕೆ ತಯಾರಿಕೆ ಅವರ ಕುಟುಂಬದ ಕುಲಕಸುಬು. ಒಂದು ಹೊತ್ತಿನ ಊಟಕ್ಕೂ ಇಡೀ ಕುಟುಂಬ ದುಡಿಯಬೇಕಾಗಿದ್ದ ಸ್ಥಿತಿಯ ಕಾರಣ ಪದವಿ ವಿದ್ಯಾಭ್ಯಾಸ ಗಗನಕುಸುಮವಾಗಿತ್ತು. ಚೆನ್ನಾಗಿ ಓದಿ ಅಪ್ಪ-ಅಮ್ಮನ ಕಷ್ಟ ನಿವಾರಿಸಬೇಕೆಂದುಕೊಂಡಿದ್ದ  ವರಲಕ್ಷ್ಮಿ ಅವರ ಕನಸು ನನಸಾಗಲಿಲ್ಲ. ಆದರೆ, ಬಡತನವನ್ನು ಮೀರಬೇಕೆಂಬ ಮಹತ್ವಾಕಾಂಕ್ಷೆ, ಛಲ ಅವರನ್ನು ದಿಟ್ಟ ಹೋರಾಟಗಾರ್ತಿಯಾಗಿ ರೂಪಿಸಿತು.

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ರಂಗಾಯಣದ ಕಲಾವಿದರಿಂದ ‘ಅಮೀರಬಾಯಿ ಕರ್ನಾಟಕಿ’ ಕೃತಿ ಪ್ರೇರಿತ ‘ಪ್ರತಿಗಂಧರ್ವ’ ನಾಟಕ

ಬರಗಾಲದ ಕಾರಣ ವರಲಕ್ಷ್ಮಿ ಅವರ ಕುಟುಂಬವು ತಾಯಿಯವರ ತವರುಮನೆ ಬೆಂಗಳೂರಿನ ಕುಂಬಳುಗೋಡಿಗೆ ಬಂದು ನೆಲೆಸಿತು. ಹಣದ ತೊಂದರೆ ಇದ್ದ ಕಾರಣ ವರಲಕ್ಷ್ಮಿ ಅವರು ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ಅಲ್ಲಿಂದ ಯೂನಿಯನ್‌ ಸಂಪರ್ಕಕ್ಕೆ ಬಂದರು.  ನಾನಾ ಹೋರಾಟಗಳಲ್ಲಿ ಭಾಗಿಯಾದ ಅವರು ಜೈಲುವಾಸವನ್ನೂ ಅನುಭವಿಸಿದರು. ಕೆಲಸ ಬಿಟ್ಟು ಪೂರ್ಣಾವಧಿಗೆ ಚಳವಳಿಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದರು. ಅಂಗನವಾಡಿ ಕಾರ್ಯಕರ್ತೆಯರನ್ನು ಸಂಘಟಿಸುವ ಜವಾಬ್ದಾರಿ ಹೊತ್ತರು. 40 ಸಾವಿರ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಗೌರವಧನ ಹೆಚ್ಚಳಕ್ಕೆ ಹೋರಾಡಿ ಯಶಸ್ಸು ಕಂಡಿದ್ದು ಮರೆಯಲಾಗದ ಸಾಧನೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಕೋಲಾರ | ಪಶು ವೈದ್ಯರ ಖಾಲಿ ಹುದ್ದೆ ಭರ್ತಿಗೆ ರೈತಸಂಘ ಆಗ್ರಹ

ಪಶು ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...