ಚಿತ್ರದುರ್ಗ | ಹೊಳಲ್ಕೆರೆ ಪುರಸಭೆ ಸದಸ್ಯರ ಬೆಂಬಲಿಗರ ನಡುವೆ ಮಾರಾಮಾರಿ

Date:

ಪುರಸಭೆ ಸದಸ್ಯರು ಮತ್ತು ಅವರ ಬೆಂಬಲಿಗರು ಕೋಲು, ದೊಣ್ಣೆಗಳಿಂದ ಹೊಡೆದಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.

- Advertisement -

ಕಳೆದ ಕೆಲವು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆ ವೈಷಮ್ಯ ಮುಂದುವರೆದಿತ್ತು. ಇದೀಗ, ನೀರಿನ ಟ್ಯಾಂಕ್‌ ನೆಲಸಮ ಮಾಡುವ ವಿಚಾರಕ್ಕೆ ಪುರಸಭೆ ಸದಸ್ಯ ಕೆ.ಸಿ ರಮೇಶ್ ಮತ್ತು ಸುಧಾ ಬಸವರಾಜ್ ಅವರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪಟ್ಟಣದ ಗೃಹಮಂಡಳಿ ಲೇಔಟ್​ನಲ್ಲಿ ನೀರಿನ ಟ್ಯಾಂಕ್ ನೆಲಸಮ ಮಾಡುವ ವಿಚಾರಕ್ಕೆ ಗಲಾಟೆ ನಡೆಸಿದೆ. ಗಲಾಟೆಯಲ್ಲಿ ಉಭಯ ಸದಸ್ಯರ ಬೆಂಬಲಿಗರು ಹೊಡೆದಾಡಿಕೊಂಡಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೃಹಮಂಡಳಿ ಲೇಔಟ್​ನಲ್ಲಿರುವ ನೀರಿನ ಟ್ಯಾಂಕ್ ನೆಲಸಮ ಮಾಡುವ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಸ್ಥಳದಲ್ಲಿ ತಹಶೀಲ್ದಾರ್ ಮತ್ತು ಪುರಸಭೆ ಅಧಿಕಾರಿಗಳು ಇರುವುದನ್ನೂ ಲೆಕ್ಕಿಸದೆ ಹೊಡೆದಾಡಿಕೊಂಡಿದ್ದಾರೆ.

ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಇಬ್ಬರು ಸದಸ್ಯರು ಎದುರಾಗಿ ಗುಂಪುಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಕೆ.ಸಿ.ರಮೇಶ್ ಅವರು ಬಿಜೆಪಿಯಿಂದ ಸ್ಪರ್ಧಿಸಿ ಪುರಸಭೆಗೆ ಆಯ್ಕೆಯಾಗಿದ್ದರು. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಇದರಿಂದಾಗಿ, ಬಿಜೆಪಿ ಸದಸ್ಯ ದುಧಾ ಬಸವರಾಜ್ ಮತ್ತು ರಮೇಶ್ ಬಡುವೆ ಅಸಮಾಧಾನವಿತ್ತು. ಅದು ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...