ಚಿತ್ರದುರ್ಗ | ಇಂದಿರಾ ಕ್ಯಾಂಟೀನಿನಲ್ಲಿ ಆಹಾರ ಮೆನು ಕುರಿತು ದೂರು, ಪೌರಾಡಳಿತ ಸಚಿವರ ಭೇಟಿ,

Date:

ಚಿತ್ರದುರ್ಗದ ಪ್ರವಾಸಿ ಮಂದಿರದ ಇಂದಿರಾ ಕ್ಯಾಂಟೀನಿಗೆ ಪೌರಾಡಳಿತ ಸಚಿವ ರಹೀಂ ಖಾನ್ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಇಂದಿರಾ ಕ್ಯಾಂಟೀನಿನಲ್ಲಿ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ ಕುರಿತು ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಅಮಾನತು ಸೇರಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಎಚ್ಚರಿಸಿದರು.

- Advertisement -

ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಪಕ್ಕದ ಇಂದಿರಾ ಕ್ಯಾಂಟೀನ್‍ಗೆ ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಇಂದಿರಾ ಕ್ಯಾಂಟೀನ್‍ನಲ್ಲಿ ಸಮರ್ಪಕವಾಗಿ ಮೆನು ಪ್ರಕಾರ ಊಟ ಹಾಗೂ ಉಪಹಾರ ನೀಡುತ್ತಿಲ್ಲ. ಹೊಸ ಮೆನು ನಿಗದಿಪಡಿಸಿ, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬುದಾಗಿ ದೂರುಗಳು ಕೇಳಿಬಂದಿದ್ದವು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಅಮಾನತಿಗೆ ಕ್ರಮವಹಿಸಲಾಗುವುದು” ಎಂದು ಹೇಳಿದರು.

“ಇಂದಿರಾ ಕ್ಯಾಂಟೀನ್‍ನಲ್ಲಿ ಬೆಳಿಗಿನ ಉಪಹಾರಕ್ಕೆ ರೂ.5 ಹಾಗೂ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ರೂ.10 ದರ ನಿಗಧಿಪಡಿಸಲಾಗಿದೆ. ಆದಾಗ್ಯೂ ಸಹ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನದಾಗಿ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳಿವೆ, ಹಾಗಾಗಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು” ಎಂದ ಸಚಿವ ರಹೀಂ ಖಾನ್, ಕ್ಯಾಂಟೀನ್‍ನಲ್ಲಿ ಊಟಕ್ಕಾಗಿ ತಯಾರಾಗಿದ್ದ ಚಪಾತಿ, ಪಲ್ಯ, ಅನ್ನ ಸಾಂಬಾರ್ ಸವಿದು, ಊಟದ ಗುಣಮಟ್ಟ ಪರಿಶೀಲಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಲೆಮಾರಿ ಸುಡಗಾಡು ಸಿದ್ದರ ಕಾಲೋನಿಗೆ ಸೋಲಾರ್ ಲೈಟ್ ವಿತರಣೆ; ಕೇತೇಶ್ವರ ಶ್ರೀ ಶ್ಲಾಘನೆ.

ಈ ಸಂದರ್ಭದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ನಗರಸಭೆ ಅಧಿಕಾರಿಗಳು ಹಾಜರಿದ್ದರು.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ |ಮಾರಾಟಕ್ಕಿರುವ ಎತ್ತುಗಳನ್ನು ಕೊಳ್ಳುವವರು ದಿಕ್ಕಿಲ್ಲ; ರೈತರ ಪರದಾಟ

ಮಧ್ಯ ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಚಿತ್ರದುರ್ಗ ಜಿಲ್ಲೆಯ...

ಚಿತ್ರದುರ್ಗ | ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ : ಟಿಹೆಚ್‌ಇಒ ಬಿ. ಮೂಗಪ್ಪ

 ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದು...

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...