ಚಿತ್ರದುರ್ಗ | ಎಲ್ಲ ಸಮಸ್ಯೆಗಳಿಗೆ ಕೇಂದ್ರದ ಕಡೆ ಬೊಟ್ಟು‌ ಮಾಡುತ್ತಿದೆ ಕಾಂಗ್ರೆಸ್

Date:

ರಾಜ್ಯದಲ್ಲಿನ ಎಲ್ಲ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದ ಕಡೆ ಬೊಟ್ಟು ತೋರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಲ್ಲೇನು ಕತ್ತೆ ಕಾಯುತ್ತಿದೆಯಾ? ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದ್ದಾರೆ.

- Advertisement -

ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲ ರಾಜ್ಯದೆಲ್ಲೇಡೆ ಭೀಕರವಾಗಿ ತಾಂಡವ ಆಡುತ್ತಿದೆ. ಇದರ ಬಗ್ಗೆ ಪ್ರವಾಸ ಮಾಡಿ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವುದನ್ನು ಬಿಟ್ಟು ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರ ನಮಗೆ ಸ್ಪಂದಿಸುತ್ತಿಲ್ಲ, ಹಣ ನೀಡುತ್ತಿಲ್ಲ ಎಂದು ಆರೋಪಿಸುವ ಕೆಲಸ ಮಾಡುವುದಾದರೆ, 6.5ಕೋಟಿ ಜನರಿಂದ ಆಯ್ಕೆಯಾಗಿ ರಾಜ್ಯದಲ್ಲಿ ಸರ್ಕಾರ ನಡೆಸುತ್ತಿರುವ ಕಾಂಗ್ರೇಸ್‌ನವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ರಾಜ್ಯದ 31ಜಿಲ್ಲೆಗಳಲ್ಲಿ ಭೀಕರ ಬರ ಪರಿಸ್ಥಿತಿ ಆವರಿಸಿದ್ದು, ಇದನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸಂಪೂರ್ಣ ಹಳಿ ತಪ್ಪಿರುವ ಕಾಂಗ್ರೆಸ್ ರೈತರ ಸಮಸ್ಯೆಗಳನ್ನು ಆಲಿಸದೆ ಅಧಿಕಾರಕ್ಕಾಗಿ ದಿನನಿತ್ಯ ಬಡಿದಾಟ ಮಾಡುತ್ತಿದೆ. ಸಚಿವರು ಕೇವಲ ಅಧಿಕಾರ ಹಂಚಿಕೆಯ, ಚಿಂತನೆಯಲ್ಲೇ ತೊಡಗಿದ್ದಾರೆ. ಇದರಿಂದ ಅವರನ್ನು ಬಡಿದೆಬ್ಬಿಸುವ ಕೆಲಸ ಮಾಡಲು ಭಾರತೀಯ ಜನತಾ ಪಕ್ಷ ಪ್ರತಿ 7ತಂಡಗಳನ್ನು ಮಾಡಿಕೊಂಡು, ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ ಅಲ್ಲಿನ ರೈತರು, ಕೂಲಿಕಾರ್ಮಿಕರ, ಜನ ಸಾಮಾನ್ಯರ ಕಷ್ಟಗಳನ್ನು ಆಲಿಸಿ ಅವುಗಳನ್ನು ಶೀಘ್ರವೇ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ಕೆಲವನ್ನು ಮಾಡಲಿದೆ ಎಂದರು.

ಬಿಜೆಪಿ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ತಂಡ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದು, ತಂಡದಲ್ಲಿ ಶಾಸಕ ಎಂ.ಚಂದ್ರಪ್ಪ, ಕೆ.ಎಸ್. ನವೀನ್, ಮಾಜಿ ಶಾಸಕರಾದ ಜಿ. ಎಚ್. ತಿಪ್ಪಾರೆಡ್ಡಿ, ಬಿ.ಪಿ. ಹರೀಶ್, ರಾಮಚಂದ್ರ ಸೇರಿದಂತೆ ಇತರರು ಇದ್ದು, ಇಂದು(ನ.06) ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಿಂದ ಪ್ರವಾಸ ಕೈಗೊಳ್ಳಲಿದ್ದೆವೆ.

ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಯಡಿಯೂರಪ್ಪ ನವರ ಬಿಜೆಪಿ ಸರ್ಕಾರದಲ್ಲಿ ರಾಜ್ಯದಲ್ಲಿ ಬರ ಘೋಷಣೆ ಆಗುತ್ತಿದ್ದಂತೆಯೇ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡುತ್ತಿತ್ತು. ಆದರೆ, ಸಿದ್ದರಾಮಯ್ಯ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ಎಲ್ಲವನ್ನು ಕೇಂದ್ರಕ್ಕೆ ಕೇಳಿ ಎಂದರೆ ರಾಜ್ಯದ ಜನ ಮತ ಹಾಕಿರುವುದು ಏಕೆ ? ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಸಂಪುಟದಲ್ಲಿ ಖಾತೆಗಳಿಗೆ ಸಂಬಂಧ ಪಡದ ವ್ಯಕ್ತಿಗಳನ್ನು ಸಚಿವರನ್ನು ಮಾಡಿದ್ದಾರೆ. ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಅವರ ಸಮಸ್ಯೆ ಏನು ಎಂಬುದೆ ಅರಿತಿಲ್ಲ. ಬೆಂಗಳೂರಲ್ಲಿ ಸಾವಿರಾರು ಕೋಟಿ ಹೊಂದಿರುವ ವ್ಯಕ್ತಿಯನ್ನು ಮಂತ್ರಿ ಮಾಡಿದ್ದಾರೆ ಅಂತಹ ಮಂತ್ರಿ ಆ ಸ್ಥಾನಕ್ಕೆ ಸೂಕ್ತ ಅಲ್ಲ ಎಂದು ಆರೋಪಿಸಿದರು.

ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರದ ಕಡೆ ಕೈ ತೋರಿಸುವುದು ಎಷ್ಟು ಸರಿ. ಕೇಂದ್ರದ ಹಣ ಬಂದಾಗ ನೀಡಲಿದೆ. ಅದಕ್ಕೂ ಮೊದಲು ತಮ್ಮ ಪಾಲಿನ ಹಣವನ್ನು ನೀಡಲಿ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾದ್ಯಕ್ಷ ಮುರುಳಿ, ವೆಂಕಟೇಶ್ ಯಾದವ್, ನರೇಂದ್ರ, ದಗ್ಗೆ ಶಿವಪ್ರಕಾಶ್‌, ನಾಗರಾಜ್ ಬೇದ್ರೆ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...