ಚಿತ್ರದುರ್ಗ | ಭಾರತ ಸಂವಿಧಾನವು ಬುದ್ದ ಬಸವ ಅಂಬೇಡ್ಕರರ ಪರಿವರ್ತನೆ ಆಶಯದ ಫಲ

Date:

ಭಾರತ ಸಂವಿಧಾನವು ಬುದ್ದ, ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್ ಮೊದಲಾದ ಸಮಾಜದ ಪರಿವರ್ತನೆಗೆ, ದುಡಿದ ಪರಿವರ್ತನಕಾರರ ಒಟ್ಟು ಆಶಯವಾಗಿದೆ. ಇವರೆಲ್ಲರ ಫಲವೇ ನಮ್ಮ ಈ ದೇಶದ ಸಂವಿಧಾನ ಮತ್ತು ಕಾನೂನಾಗಿದೆ ಎಂದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಪರಿವರ್ತನ ವೇದಿಕೆ ಕಾರ್ಯಕ್ರಮದಲ್ಲಿ ವಕೀಲ ವಕೀಲರಾದ ಪಿ. ಎಚ್. ತಿಪ್ಪೇರುದ್ರಪ್ಪ ಅಭಿಪ್ರಾಯಪಟ್ಟರು.

- Advertisement -

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತಮ್ಮೆನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಜ ಪರಿವರ್ತನಾ ವೇದಿಕೆ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು “ಭಾರತ ದೇಶವು ಬಹು ವೈವಿಧ್ಯತೆ, ಬಹುಸಂಸ್ಕೃತಿಯನ್ನು ಒಳಗೊಂಡಿರುವ ದೇಶ, ವಿವಿಧತೆಯಲ್ಲಿ ಏಕತೆಯನ್ನು ಮೈಗೂಡಿಸಿಕೊಂಡಿರುವ ದೇಶ, ಬುದ್ದನ ಕರುಣೆ, ಪ್ರೀತಿ ಮೈತ್ರಿ, ಮಮತೆ, ಬಸವಣ್ಣನ ಕಾಯಕ ತತ್ವ, ಸಮಾನತೆಯ ತತ್ವ, ಇವುಗಳ ಐಕ್ಯವೇ ಭಾರತ ದೇಶದ ಸಂವಿಧಾನವಾಗಿದೆ” ಎಂದು ವಕೀಲರಾದ ಪಿ. ಎಚ್. ತಿಪ್ಪೇರುದ್ರಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1003328776

ಮುಖ್ಯ ಶಿಕ್ಷಕ ಶಿವಕುಮಾರ್ ಮಾತನಾಡಿ, “ಮಕ್ಕಳು ಕಾನೂನುಗಳನ್ನು ಗೌರವಿಸಬೇಕು. ಕಾನೂನುಗಳನ್ನು ನಾವು ರಕ್ಷಿಸಿದರೆ ಕಾನೂನು ನಮ್ಮನ್ನು ರಕ್ಷಿಸುತ್ತದೆ. ಕಾನೂನುಗಳೇ ನಮ್ಮಯ ಜೀವಾಳವಾಗಿವೆ. ಚೆನ್ನಾಗಿ ಓದಿ ತಂದೆ ತಾಯಿ, ಶಿಕ್ಷಕರಿಗೆ ಒಳ್ಳೆಯ ಕೀರ್ತಿ, ಗೌರವ ತರಬೇಕು, ಆಗ ಸಮಾಜ ನಮ್ಮನ್ನು ಗೌರವದಿಂದ ನೋಡುತ್ತದೆ. ಪೋಷಕರು ಶ್ರಮಪಟ್ಟು ನಮ್ಮನ್ನು ಓದಿಸುತ್ತಿದ್ದಾರೆ, ಹಾಗಾಗಿ ಅವರ ಬೆವರು ಮತ್ತು ಶ್ರಮಕ್ಕೆ ಮೋಸ ಮಾಡದೇ ಚೆನ್ನಾಗಿ ಓದಬೇಕು” ಎಂದು ಸಲಹೆ ನೀಡಿದರು.

1003328781

ಅಧ್ಯಕ್ಷ ಮರಿಸ್ವಾಮಿ ನಾಗಸಮುದ್ರ ಮಾತನಾಡಿ, “ಮರಳಿ ಸಮಾಜಕ್ಕೆ ಕೊಡಿ, ಎನ್ನುವ ಸಂದೇಶದ ಸಾಕ್ಷಾತ್ಕಾರಕ್ಕಾಗಿ ಪ್ರತಿ ಶಾಲೆ, ಕಾಲೇಜುಗಳಲ್ಲಿ ನಾವು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಕಾರ್ಯದರ್ಶಿ ಪರಮೇಶ್ ಮಾತನಾಡಿ, “ಇಂದು ನಾವೆಲ್ಲ ಭಾರತೀಯರು ಘನತೆ ಗೌರವ ನೆಮ್ಮದಿಯ ಬದುಕನ್ನು ಹೊಂದಿದ್ದೇವೆ ಎಂದರೆ ಅದು, ಈ ದೇಶದ ಸಂವಿಧಾನದಿಂದ ಸಾಧ್ಯವಾಗಿದೆ. ಹಾಗಾಗಿ ನಾವೆಲ್ಲರೂ ಇಂತಹ ಸ್ವಾಭಿಮಾನದ ಸ್ವಾವಲಂಬಿ ಬದುಕನ್ನು ಕಟ್ಟಿಕೊಟ್ಟಿರುವ ಈ ದೇಶದ ಸಂವಿಧಾನವನ್ನು ಹೆಚ್ಚು ಹೆಚ್ಚು ಆಧ್ಯಯನ ಮಾಡಬೇಕು. ಹೆಚ್ಚು ಹೆಚ್ಚು ಗೌರವಿಸಬೇಕು. ಪ್ರಜಾಪ್ರಭುತ್ವವೇ ನಮ್ಮ ಧರ್ಮವಾಗಬೇಕು, ಸಂವಿಧಾನವೇ ನಮ್ಮ ಧರ್ಮ ಗ್ರಂಥವಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು

1003328791

“ನಾವೆಲ್ಲರೂ ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸುವುದರ ಮೂಲಕ, ಅವರನ್ನು ಉತ್ತಮ ಪ್ರಜೆಗಳಾಗಿ ರೂಪಿಸಬೇಕಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಜೊತೆಗೆ ಪಡೆದುಕೊಂಡ ಶಿಕ್ಷಣ, ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಬುದ್ಧ, ಬಸವ, ಅಂಬೇಡ್ಕರ್ ಅವರ ಆದರ್ಶದ ದಾರಿಯಲ್ಲಿ ಬೆಳೆಸಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗಾಂಧಿ‌ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎನ್ನುವವರು ಅಧಿಕಾರದಲ್ಲಿ : ಎಬಿ ರಾಮಚಂದ್ರಪ್ಪ

ಈ ಕಾರ್ಯಕ್ರಮದಲ್ಲಿ ಪರಿವರ್ತನ ವೇದಿಕೆಯ ಗೌರವ ಅಧ್ಯಕ್ಷರಾದ ಭಂಗಿ ನಾಗರಾಜ್, ಜಿಲ್ಲಾ ಅಧ್ಯಕ್ಷರಾದ ಎಂ. ರುದ್ರಯ್ಯ, ಪೊಲೀಸ್ ಇಲಾಖೆಯ ತಿಮ್ಮಣ್ಣ, ಎಸ್. ಪರಮೇಶ್ ತಿಪ್ಪೇಸ್ವಾಮಿ ಮುಖ್ಯ ಶಿಕ್ಷಕರಾದ ಶಿವಕುಮಾ‌ರ್, ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕುಮಾರಸ್ವಾಮಿ, ಶಾಲಾ ಸಿಬ್ಬಂದಿ, ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.‌

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...