ಚಿತ್ರದುರ್ಗ | ವೇದಾವತಿ ನದಿಯ ಸೇತುವೆ ಬಿರುಕು: ಗ್ರಾಮಸ್ಥರಲ್ಲಿ ಆತಂಕ

Date:

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರನಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಬಿರುಕು ಮೂಡಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.

- Advertisement -

ಈ ಸೇತುವೆಯು 10ಕ್ಕೂ ಹೆಚ್ಚು ಗ್ರಾಮಗಳಿಗೆ ಚಳ್ಳಕೆರೆ, ಹಿರಿಯೂರು, ಪರಶುರಾಮಪುರ ಹಾಗೂ ನೆರೆಯ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿದಿನ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಸೇತುವೆ ಬಿರುಕು ಬಿಟ್ಟಿರುವುದರಿಂದ ತೊಂದರೆ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಭಾಗದ ಕೆರೆಗಳಿಂದ 10 ಚಕ್ರದ ಲಾರಿಗಳಲ್ಲಿ ಮಣ್ಣು ಸಾಗಾಟ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಸೇತುವೆ ಕುಸಿದರೆ ವಿವಿಧ ಭಾಗಗಳಿಗೆ ತೆರಳುವ ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಬಿರುಕು ಮೂಡಿರುವ ಸೇತುವೆಯ ಮೇಲೆ ಸಂಚಾರ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಮತ್ತು ವಿವಿಧ ಕೆಲಸಕ್ಕೆ ಹೊರಟಿರುವವರು ಸುಮಾರು 10 ಕಿ.ಮೀ ದೂರದ ಬದಲಿ ಮಾರ್ಗವನ್ನು ಬಳಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...