ಚಿತ್ರದುರ್ಗ | ಕುಂಚಿಟಿಗರಿಗೆ ಒಬಿಸಿ ಮೀಸಲಾತಿಗೆ ಆಗ್ರಹ; ಜಯಚಂದ್ರ ವಿರುದ್ಧ ಕಪ್ಪು ಪಟ್ಟಿ ಧರಿಸಿ ‘ಕರಾಳ ದಿನ’ ಆಚರಣೆ

Date:

ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಆದರೂ, ಸಮುದಾಯದಿಂದ ಗೆದ್ದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ ಅವರು ಸಮುದಾಯಕ್ಕೆ ಒಬಿಸಿ ಮೀಸಲಾತಿ ಕೊಡಿಸುವ ಯಾವುದೇ ಪ್ರಯತ್ನವನ್ನು ಮಾಡುತ್ತಿಲ್ಲ ಎಂದು ಸಮುದಾಯ ಮುಖಂಡರು ಆರೋಪಿಸಿದ್ದಾರೆ. ಜಯಚಂದ್ರ ವಿರುದ್ಧ ಕಪ್ಪು ಪಟ್ಟಿ ಧರಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಮುದಾಯದ ಮುಖಂಡ ಕಸವನಹಳ್ಳಿ ರಮೇಶ್, “ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು. ಆದರೆ, ರಾಜಕಾರಣಿಗಳು ಕಳೆದ 27 ವರ್ಷಗಳಿಂದ ವ್ಯವಸ್ಥಿತವಾಗಿ ಕುಂಚಿಟಿಗರಿಗೆ ನಂಬಿಕೆ ದ್ರೋಹ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಕುಂಚಿಟಿಗ ಸಮುದಾಯವನ್ನು ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡಬಾರದು. ಕುಂಚಿಟಿಗರಿಗೆ ಕೇಂದ್ರ ಒಬಿಸಿ ಮೀಸಲಾತಿ ಕೊಡಬೇಕು ಎಂದು ಶಿಫಾರಸು ಮಾಡಲಾಗಿದೆ. ಕುಂಚಿಟಿಗ ಸಮುದಾಯದ ರಾಜಕಾರಣಿ ಟಿಬಿ ಜಯಚಂದ್ರರಿಗೆ ಮೀಸಲಾತಿ ಬಗ್ಗೆ ಪದೇ-ಪದೇ ಏಳುತ್ತಲೇ ಇದ್ದೇವೆ. ಆದರೆ, ಅವರದೇ ಸರ್ಕಾರದಲ್ಲಿ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಒಬಿಸಿ ಮೀಸಲಾತಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳಿಸಿರುವುದು ದುರಂತದ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಒಕ್ಕಲಿಗ ಸಮುದಾಯಕ್ಕೆ ಸಮನಾದ ಇತರೆ 9 ಜಾತಿಗಳಿಗೆ ಗ್ರಾಮೀಣ ಮತ್ತು ನಗರ ಎಂದು ತಾರತಮ್ಯ ಮಾಡದೆ ಒಬಿಸಿ ಮೀಸಲಾತಿ ಕೊಡಲಾಗಿದೆ. ಆದರೆ, ಕುಂಚಿಟಿಗರಿಗೆ ಮಾತ್ರ ತಾರತಮ್ಯ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಒಬಿಸಿ ಮೀಸಲಾತಿ ಕೈತಪ್ಪಿ ಕುಂಚಿಟಿಗರಿಗೆ ಇಡಬ್ಲ್ಯೂಎಸ್‌ ಮೀಸಲಾತಿ ಜಾರಿಯಲ್ಲಿದೆ. ಇನ್ನು ಮುಂದೆ ನಗರ ಕುಂಚಿಟಿಗರಿಗೆ ಇಡಬ್ಲ್ಯೂಎಸ್‌ ಮೀಸಲಾತಿ ಕೂಡ ಕೈ ಬಿಟ್ಟು ಹೋಗಿ ಜನರಲ್ ಮೆರಿಟ್‌ನಲ್ಲಿ ಬರುತ್ತಾರೆ. ಟಿ.ಬಿ ಜಯಚಂದ್ರ ಅವರು ಸಮುದಾಯದ ಬಗ್ಗೆ ಪರಿಶೀಲನೆ ನಡೆಸಿ, ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಒಬಿಸಿ ನೀಡುವಂತೆ ಹೇಳಿರುವ ಶಿಫಾರಸನ್ನು ಹಿಂಪಡೆದು, ಎಲ್ಲ ಕುಂಚಿಟಿಗರಿಗೂ ಒಬಿಸಿ ಮೀಸಲಾತಿ ಸಿಗುವಂತೆ ಶಿಫಾರಸು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಕುಂಚಿಟಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹುಲಿರಂಗನಾಥ್, ಗೌರವಾಧ್ಯಕ್ಷ ಯಳನಾಡು ಗಿರಿಸ್ವಾಮಿ,ಪ್ರಧಾನ ಕಾರ್ಯದರ್ಶಿ ವಿ ಕುಬೇರಪ್ಪ,ಉಪಾಧ್ಯಕ್ಷ ಮಲ್ಲಪ್ಪನ ಹಳ್ಳಿ ಜೋಗೇಶ್ ದೇವರಕೊಟ್ಟ ರಂಗಸ್ವಾಮಿ, ಹುಚ್ಚವನಹಳ್ಳಿ ಅವಿನಾಶ್,ಪೆಪ್ಸಿ ಹನುಮಂತರಾಯ, ಕುಲಶಾಸ್ತ್ರ ಅಧ್ಯಯನಕಾರ ಎಸ್ ವಿ ರಂಗನಾಥ್,ಆಪ್ಟಿಕಲ್ಸ್ ರಾಜೇಶ್,ಚಿಲ್ಲಳ್ಳಿ ಚಿದಾನಂದಪ್ಪ,ಬೆಳ್ಳುಳ್ಳಿ ಶಿವಣ್ಣಸೇರಿದಂತೆ ಮತ್ತಿತರರ ಕುಂಚಿಟಿಗ ಮುಖಂಡರು ಉಪಸ್ಥಿತರಿದ್ಧರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...