ಚಿತ್ರದುರ್ಗ| ಕಳಪೆ ಬೀಜ ರಸಗೊಬ್ಬರ ವಿತರಣೆ ರೈತರ ಬಗ್ಗೆ ನಿರ್ಲಕ್ಷ್ಯ; ಜಂಟಿ ನಿರ್ದೇಶಕರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ

Date:

ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗಳಿಂದ ರೈತರ ಬಗ್ಗೆ ನಿರ್ಲಕ್ಷ್ಯ ವರ್ತನೆ ಮತ್ತು ಕಳಪೆ ಬೀಜ ರಸಗೊಬ್ಬರ ವಿತರಣೆ ಬಗ್ಗೆ ದೂರು ನೀಡಲು ಕಚೇರಿಗೆ ಹೋದಾಗ ಅಸಭ್ಯವಾಗಿ ವರ್ತಿಸಿದ್ದು, ಇವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

- Advertisement -

“ಕಳೆದ 19, ಜೂನ್-2025 ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಮುಂದೆ ಕೃಷಿ ಇಲಾಖೆಯಿಂದ ವಿತರಿಸಿದ್ದ ಕಳಪೆ ಬೀಜ ರಸಗೊಬ್ಬರ ವಿತರಣೆ ಚಳುವಳಿಯನ್ನು ಮಾಡಲಾಗಿತ್ತು.‌ ಆದರೆ ಕೆಲವು ಸಂಘಟನೆಗಳು, ಚಳುವಳಿ ಮಾಡಿದವರನ್ನು ಗೂಂಡಾಗಳು ಎಂದು ಹೇಳಿದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಮುಖಂಡರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...
1002210678

ಜಂಟಿ ಕೃಷಿ ನಿರ್ದೇಶಕರು ಜಿಲ್ಲೆಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಒಂದೇ ಒಂದು ಗೊಬ್ಬರದ ಅಂಗಡಿಗಳಿಗೆ ಹೋಗಿ ಪರಿಶೀಲನೆ ಮಾಡಿಲ್ಲ. ಗೊಬ್ಬರ ಅಂಗಡಿಗಳ ಜೊತೆ ಒಡಂಬಡಿಕೆ ಮಾಡಿಕೊಂಡು ರೈತರನ್ನು ಅಲೆದಾಡಿಸುತ್ತಿದ್ದಾರೆ ಎಂದು ಬೇಡ ರೆಡ್ಡಿಹಳ್ಳಿ ಬಸವ ರೆಡ್ಡಿ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಶ್ರಮದ ಕಾರ್ಯಕ್ರಮಕ್ಕೆ ಟ್ರಸ್ಟ್ ಸದಸ್ಯರು ಭಾಗವಹಿಸಲು ಆಶ್ರಮ ರಕ್ಷಣಾ ಸಮಿತಿ ಆಕ್ಷೇಪ

ಸಭೆಯಲ್ಲಿ ಮುಖಂಡರಾದ ಜಿಲ್ಲಾಧ್ಯಕ್ಷರಾದ ಡಿ ಎಸ್ ಹಳ್ಳಿ ಮಲ್ಲಿಕಾರ್ಜುನ್, ಕಾರ್ಯದರ್ಶಿಗಳಾದ ಮರ್ಲ್ಲಹಳ್ಳಿ ರವಿಕುಮಾರ್, ಬಾಗೇನಾಳ್ ತಿಪ್ಪೇಸ್ವಾಮಿ, ಎಸ್ ಆರ್ ತಿಮ್ಮಯ್ಯ, ಭದ್ರಾ ಮೇಲ್ದಂಡೆ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ್, ಮುದ್ದಾಪುರ ನಾಗಣ್ಣ, ಎಲ್ ಬಸವರಾಜಪ್ಪ, ಹಳಿಯೂರು ಸಿದ್ದಣ್ಣ, ರಾಮರೆಡ್ಡಿ, ರಾಜಣ್ಣ, ಬಾಗೇನಾಳ್ ಬಸಪ್ಪ, ಲಕ್ಷ್ಮಿಕಾಂತ್, ಸೂರಪ್ಪ ನಾಯಕ, ಟಿ ವೆಂಕಟೇಶ್, ತಿಮ್ಮೇಶ್, ತಿರುಮಲಾಪುರ ಸಿದ್ದರಾಮಣ್ಣ, ಆಡನೂರು ಶಿವಕುಮಾರ್, ವೀರಣ್ಣ ಹೊಸಳ್ಳಿ ಮುಂತಾದ ಮುಖಂಡರುಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...