ಚಿತ್ರದುರ್ಗ | ದಲಿತ ಕಾಲೋನಿಯ ಮೂಲಸೌಕರ್ಯ ಅಭಿವೃದ್ಧಿಗೆ ದಸಂಸ ಪ್ರತಿಭಟನೆ

Date:

ದಲಿತ ಕಾಲೋನಿಯ ಜನತೆ ಹಲವಾರು ವರ್ಷಗಳಿಂದ ಸಿಸಿ ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಹಲವಾರು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ಹಲವು ಬಾರಿ ಮನವಿ ಮಾಡಿದರೂ ಮೂಲಸೌಕರ್ಯ ಕಲ್ಪಿಸದ ಗ್ರಾಮ ಪಂಚಾಯತಿ ವಿರುದ್ಧ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮದ್ದೂರು ಗ್ರಾಮದ ದಲಿತರು ಗ್ರಾಮ ಪಂಚಾಯತ್ ಆವರಣದಲ್ಲಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

- Advertisement -
1002716372

ಇದೇವೇಳೆ ದಸಂಸ ಮುಖಂಡ ನವೀನ್ ಮದ್ದೇರು ಮಾತನಾಡಿ, “ಹೊಳಲ್ಕೆರೆ ತಾಲೂಕು ಮದ್ದೂರು ಗ್ರಾಮದ ದಲಿತ ಕಾಲೋನಿಯ ಜನರು ದನಗಳಿಗೆ ನೀರಿನ ತೊಟ್ಟಿ, ಕುಡಿಯುವ ನೀರು, ವಿದ್ಯುತ್, ಚರಂಡಿ ವ್ಯವಸ್ಥೆ, ಸಿಸಿ ರಸ್ತೆ, ಸ್ಮಶಾನಕ್ಕೆ ರಸ್ತೆ, ಸ್ಮಶಾನ ಅಭಿವೃದ್ಧಿ ಇಲ್ಲದೆ ಜೀವನ ಸಾಗಿಸುತ್ತಿದ್ದು, ಹಲವಾರು ಬಾರಿ ಗ್ರಾಮ ಪಂಚಾಯಿತಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದರೂ ನಿರ್ಲಕ್ಷಿಸಿದ್ದಾರೆ. ದಲಿತ ಕಾಲೋನಿಯ ಜನರನ್ನು ನಿರ್ಲಕ್ಷದಿಂದ ಗುಲಾಮರಂತೆ ಕಾಣುತ್ತಿರುವುದು ವಿಪರ್ಯಾಸ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
1002716371

“ಈ ಕೂಡಲೇ ದಲಿತ ಕಾಲೋನಿಗೆ ಅಗತ್ಯ ಮೂಲಸೌಕರ್ಯಗಳಾದ ಶುದ್ಧ ಕುಡಿಯುವ ನೀರಿನ ಘಟಕ, ಸಿಸಿ ರಸ್ತೆ, ಸ್ಮಶಾನ ಅಭಿವೃದ್ಧಿ, ಚರಂಡಿ ವ್ಯವಸ್ಥೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ಸಿ ಸಿ ಕ್ಯಾಮೆರಾ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಅಹೋರಾತ್ರಿ ಧರಣಿಯನ್ನು ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆಸ್ಪತ್ರೆ ಸ್ನಾನದ ಕೋಣೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ರಕ್ಷಿಸಿ ಆರೈಕೆ ನೀಡಿದ ಸಿಬ್ಬಂದಿ

ಪ್ರತಿಭಟನೆಯಲ್ಲಿ ಗ್ರಾಮದ ನಾಗವೇಣಿ ಸುಚಿತ್ರ ಕವಿತಾ ವೇದಾವತಿ, ಚಂದನ್ ಅರ್ಪಿತಾ ಪದ್ಮಾ ಪ್ರೇಮ ಗಿರಿಜಾ ನೇತ್ರಮ್ಮ ಧನುಷ್,ಪಾಪು ಹನುಮಂತ, ಮೂರ್ತಪ್ಪ, ಮನು, ಶಿವು, ರಘು, ಮಾರುತೇಶ್, ರಂಗಸ್ವಾಮಿ, ನಾಗರಾಜ ಸೇರಿದಂತೆ ಅನೇಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...