ಚಿತ್ರದುರ್ಗ | ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಸಬಲೀಕರಣ; ಸಚಿವ ಡಿ.ಸುಧಾಕರ್ ಅಭಿಮತ

Date:

Advertisements

“ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು, ನಿರ್ಗತಿಕರು, ಬಡವರು, ಕೆಳವರ್ಗದವರು, ಸಮಾಜದ ಅಂಚಿನಲ್ಲಿರುವವರು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಾಯಕವಾಗಿವೆ” ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಚಿತ್ರದುರ್ಗ ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾದ 79ನೇ ಸ್ವಾತಂತ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು “ಪಂಚ ಗ್ಯಾರಂಟಿಗಳು ಪ್ರತಿಯೊಬ್ಬರೂ ಸಮಾಜದಲ್ಲಿ ಘನತೆಯಿಂದ ಬದುಕಲು ದಾರಿ ಮಾಡಿಕೊಟ್ಟಿವೆ. ರಾಷ್ಟ್ರಕವಿ ಕುವೆಂಪು ಅವರ “ಬಡತನವ ಬುಡಮಟ್ಟ ಕೀಳಬನ್ನಿ” ಎನ್ನುವ ಆಶಯವನ್ನು ಸಾಕರಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ. ಬಡತನ ನಿವಾರಣೆ, ಉದ್ಯೋಗ ಅವಕಾಶ ಹೆಚ್ಚಿಸಲು ಪ್ರನಾಳಿಕೆಯಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿ ಮಾಡಿ ಸರ್ಕಾರ ನುಡಿದಂತೆ ನಡೆದಿದೆ” ಎಂದು ಸಚಿವ ಡಿ.ಸುಧಾಕರ್ ಹೇಳಿದರು.

1002516000

“ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿಯೋಜನೆ, ಗೃಹಜ್ಯೋತಿ, ಯುವನಿಧಿ ಯೋಜನೆಗಳು ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,78,367 ಫಲಾನುಭವಿಗಳಿದ್ದು, ಈವರೆಗೆ ಒಟ್ಟು ರೂ.343.87 ಕೋಟಿ ವ್ಯಯ ಮಾಡಲಾಗಿದೆ. ಮಹಿಳೆಯರ ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಮೇ 2025ರ ಅಂತ್ಯದವರೆಗೆ ಒಟ್ಟು 3,87,490 ಫಲಾನುಭವಿಗಳಿಗೆ ರೂ.1,398 ಕೋಟಿ ರೂಪಾಯಿಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ. ಈ ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಿದ ಫಲವಾಗಿ ಜಿಲ್ಲೆಯಲ್ಲಿ 28 ಜನ ಲಿಂಗತ್ವ ಅಲ್ಪಸಂಖ್ಯಾತರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ” ಎಂದು ತಿಳಿಸಿದರು.

Advertisements
1002515999

ಶಕ್ತಿ ಯೋಜನೆಯಡಿ ಜಿಲ್ಲಾ ವಿಭಾಗದ ಸರ್ಕಾರಿ ಬಸ್‍ಗಳಲ್ಲಿ 5 ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದಾರೆ. ಯೋಜನೆಗೆ ಜಿಲ್ಲೆಯಲ್ಲಿ ಒಟ್ಟು ರೂ. 208 ಕೋಟಿ ರೂಪಾಯಿ ಖರ್ಚುಮಾಡಲಾಗಿದೆ ಎಂದು ಸಚಿವ ಡಿ.ಸುಧಾಕರ್ ಮಾಹಿತಿ ನೀಡಿದರು.

1002515997

“ಜಿಲ್ಲೆಯಲ್ಲಿ ಜನವಸತಿ ಇರುವ 296 ಗ್ರಾಮಗಳಿಗೆ ಕಂದಾಯ ಗ್ರಾಮದ ಮಾನ್ಯತೆ ನೀಡಿ ವಾಸಿಸುವ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡಲಾಗುವುದು. ಈಗಾಗಲೇ 5174 ಫಲಾನುಭವಿಗಳನ್ನು ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ 7976 ಹಕ್ಕು ಪತ್ರಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ.
ಮಹತ್ವಾಂಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆಯು ಸಾಕಾರಗೊಳ್ಳುವ ದಿನಗಳು ಸಮೀಪಿಸುತ್ತಿವೆ. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸುವಂತೆ ಈಗಾಗಲೇ ಶಿಫಾರಸ್ಸು ಮಾಡಲಾಗಿರುತ್ತದೆ. ಈ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗ, ಹೊಳಲ್ಕೆರೆ ತಾಲ್ಲೂಕುಗಳಡಿಯಲ್ಲಿನ ಒಟ್ಟು 73,946 ಹೆಕ್ಟೇರ್ ಪ್ರದೇಶಕ್ಕೆ ಹನಿನೀರಾವರಿ ಮೂಲಕ ನೀರೊದಗಿಸಲು ಹಾಗೂ 86 ಕೆರೆಗಳಿಗೆ ಕುಡಿಯುವ ನೀರು ಪೂರೈಸಲು ರೂ. 2677 ಕೋಟಿಗಳ ವೆಚ್ಚದಲ್ಲಿ 06 ಪ್ಯಾಕೇಜ್‍ಗಳಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬರದ ನಾಡು ಚಿತ್ರದುರ್ಗ, ಕೃಷಿಯ ನಾಡಾಗಿ ಬದಲಾಗಿಸಲು ನಮ್ಮ ಸರ್ಕಾರ ಕಂಕಣಬದ್ಧವಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ ಅದರಲ್ಲೂ ಗ್ರಾಮೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ” ಎಂದು ತಿಳಿಸಿದರು.

1002515998

“ಸಂಧ್ಯಾ ಸುರಕ್ಷಾ ಯೋಜನೆಯಡಿ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲ ಚೇತನ ಮಾಶಾಸನ ಜೊತೆಗೆ ಮಾತೃಪೂರ್ಣ ಯೋಜನೆ, ಪೋಷಣೆ ಅಭಿಯಾನ ಯೋಜನೆ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ, ಸ್ವಾಧಾರ ಯೋಜನೆ, ಸಾಂತ್ವನ ಯೋಜನೆಗಳ ಮುಖಾಂತರ ಎಲ್ಲ ವರ್ಗದವರ ಏಳಿಗೆಗಾಗಿ ನಮ್ಮ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ” ಎಂದು ಸಚಿವ ಡಿ.ಸುಧಾಕರ್ ಅಭಿಪ್ರಾಯಪಟ್ಟರು.

1002515994

ನಾಗರಿಕ ಪೊಲೀಸ್, ಸಶಸ್ತ್ರ ಪೊಲೀಸ್, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ, ಸೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಹಲವು ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಇದೇ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿದ ಚಳ್ಳಕೆರೆ ತಾಲ್ಲೂಕಿನ ಜಂಬಯ್ಯನಹಟ್ಟಿಯ ರೇಖಾ ಹಾಗೂ ಚಿತ್ರದುರ್ಗ ನಗರಸಭೆಯ ಪೌರಕಾರ್ಮಿಕರ ಪರವಾಗಿ ಪ್ರಮೀಳಾ ಹಾಗೂ ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.

1002515996

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೋಟೆ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿ ವಿದ್ಯಾರ್ಥಿಗಳು ಪಹಲ್ಗಾಮ್ ಉಗ್ರರ ದಾಳಿ ಹಾಗೂ ಇದಕ್ಕಾಗಿ ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆ ಕುರಿತ ನೃತ್ಯ ರೂಪಕ ಪ್ರಸ್ತುತ ಪಡಿಸಿದರು. ಎಸ್.ಜೆ.ಎಂ. ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಹರ್ ಘರ್ ತಿರಂಗಾ ನೃತ್ಯ ಪ್ರದರ್ಶಿಸಿದರು. ಡಿ.ಎಸ್.ಹಳ್ಳಿಯ ಜ್ಞಾನ ಪೂರ್ಣ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ರೈತರು, ವಿಜ್ಞಾನಿಗಳು,ಯೋಧರು, ಕ್ರೀಡಾಪಟುಗಳು ಕೊಡುಗೆಯ ಮಹತ್ವ ಸಾರುವ ನೃತ್ಯ ರೂಪಕ ಪ್ರಸ್ತುತ ಪಡಿಸಿದರು.

1002515993

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ವಾತಂತ್ರ್ಯೋತ್ಸವ ದಿನ ಒಳಮೀಸಲಾತಿ ವಿಳಂಬ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ಆಕ್ರೋಶ; ದಲಿತ ಮುಖಂಡರ ಬಂಧನ

ಸ್ವಾತಂತ್ರ್ಯೋತ್ಸವದಲ್ಲಿ ಸಂಸದ ಗೋವಿಂದ ಎಂ.ಕಾರಜೋಳ, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆಕಾಶವಾಣಿಯ ಡಾ. ನವೀನ್ ಮಸ್ಕಲ್ ಹಾಗೂ ಸಂಗೀತ ಶಿಕ್ಷಕಿ ಜಗದೀಶ್ವರಿ ಹಿರೇಮಠ ಉಪಸ್ಥಿತರಿದ್ದರು.
 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X