ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

Date:

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಇಂದು ಮಹಿಳೆಯರ ಬದುಕಿಗೆ ಆಸರೆಯಾಗಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

- Advertisement -

ಚಿತ್ರದುರ್ಗ ನಗರದ ಜಿಲ್ಲಾ ವಾಲ್ಮೀಕಿ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಿಷನ್ ಶಕ್ತಿ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
2023ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳೆಯರನ್ನು ಕೇಂದ್ರಬಿಂದುವಾಗಿಟ್ಟುಕೊಂಡು ನಮ್ಮ ಸರ್ಕಾರ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮಿ ಯೋಜನೆಯಡಿ ರೂ.2,000 ಹಣ, ಯುವ ಜನತೆಗೆ ಯುವನಿಧಿ, ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದಂತಹ ಯೋಜನೆಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಿವೆ. ಇಂತಹ ಕೆಲಸಗಳು ಸರ್ಕಾರದ ಮೂಲಕ ಸಾಧ್ಯವೇ ಎಂಬ ಅನುಮಾನ ಮೊದಲಿತ್ತು, ಆದರೆ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಮಹಿಳೆ ಎಂದರೆ ಶಕ್ತಿಯ ಸ್ವರೂಪಿ ಎಂಬುದನ್ನು ನಮ್ಮ ಪುರಾಣಗಳು ಮತ್ತು ಇತಿಹಾಸ ಸಾರುತ್ತಾ ಬಂದಿವೆ. ಆದಿಪರಾಶಕ್ತಿ, ಚಾಮುಂಡೇಶ್ವರಿಯಂತಹ ಶಕ್ತಿ ದೇವತೆಗಳನ್ನು ನಾವು ಆರಾಧಿಸುತ್ತೇವೆ. ಮಹಿಳೆಯರಿಗೆ ಗೌರವ ನೀಡುವ ಸಂಸ್ಕøತಿ ನಮ್ಮ ದೇಶದ್ದು. ಮನೆಯ ದೀಪ ಬೆಳಗುವ ಶಕ್ತಿ ಮಹಿಳೆಯ ಕೈಯಲ್ಲಿದೆ. ಸಂಸಾರದಲ್ಲಿ ಶಾಂತಿ ನೆಲೆಸಲು ಮಹಿಳೆಯೇ ಕಾರಣ ಎಂದು ಅಭಿಪ್ರಾಯಪಟ್ಟರು

ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರು 18 ವರ್ಷಗಳ ಕಾಲ ದೇಶವನ್ನು ಮುನ್ನಡೆಸಿ ಬಡವರ ಪರವಾದ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅವರ ದಾರಿಯಲ್ಲೇ ಸಾಗುತ್ತಿರುವ ನಮ್ಮ ಸರ್ಕಾರವು ಬಡವರ ಪರ ಯೋಜನೆಗಳಿಗೆ ಮೊದಲ ಆದ್ಯತೆ ನೀಡುತ್ತಿದೆ ಎಂದು ಸಚಿವರು ಸ್ಮರಿಸಿದರು.
ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಮಾತನಾಡಿ, ಮಹಿಳೆಯರು ಸಾಧನೆ ಮಾಡಲು ಸೌಲಭ್ಯಗಳು, ಹಣವಿದ್ದರೆ ಸಾಲದು. ಆಚಲವಾದ ಇಚ್ಛಾಶಕ್ತಿ ಇರಬೇಕು. ಚಿತ್ರದುರ್ಗ ಇತಿಹಾಸದಲ್ಲಿ ಒನಕೆ ಓಬವ್ವ ಸಾಮಾನ್ಯ ಮಹಿಳೆಯಾಗಿದ್ದರೂ ಅಸಾಮಾನ್ಯ ಇಚ್ಛಾಶಕ್ತಿಯಿಂದ ಇತಿಹಾಸ ನಿರ್ಮಿಸಿದರು ಎಂದು ತಿಳಿಸಿದರು.

IMG 20260314 WA0078

ಮಹಿಳೆಗೆ ಶಿಕ್ಷಣ ದೊರೆತಾಗ ಕುಟುಂಬದ ಶಕ್ತಿ ವೃದ್ಧಿಯಾಗುತ್ತದೆ. ಸೊಸೆಯಾದವರು ಅತ್ತೆ-ಮಾವಂದಿರನ್ನು ಹೆತ್ತ ತಂದೆ-ತಾಯಿಯಂತೆ ಗೌರವಿಸಿದರೆ ಕುಟುಂಬ ಹಾಗೂ ಸಮಾಜದಲ್ಲಿ ನೆಮ್ಮದಿ ನೆಲೆಸುತ್ತದೆ. ಮಾನವೀಯ ಮೌಲ್ಯಗಳ ಜೊತೆಗೆ ಶಿಕ್ಷಣ ಪಡೆದಾಗ ಮಹಿಳಾ ಸಬಲೀಕರಣಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ನಮ್ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಗೃಹಲಕ್ಷ್ಮೀ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ನೀಡಲಾಗಿದೆ. ಈ ಯೋಜನೆಗಳ ಫಲಾನುಭವಿಗಳು ಮಹಿಳೆಯರೇ ಆಗಿರುವುದರಿಂದ ಕುಟುಂಬದಲ್ಲಿ ಅವರ ಪಾತ್ರ ಹಿರಿದಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಜಿಲ್ಲೆಯ ಶೇ.100ರಷ್ಟು ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳ ಲಾಭ ತಲುಪುತ್ತಿರುವುದು ಸಂತಸದ ವಿಷಯ. ಸರ್ಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬ ಬಡವರಿಗೂ ತಲುಪಿಸುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆ ಶ್ಘಾಘನೀಯ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, “ಸ್ತ್ರಿ” ಈ ಜಗತ್ತಿನ ಅತ್ಯಂತ ಅದ್ಭುತವಾದ ಸೃಷ್ಠಿ. ಮತ್ತೊಂದು ಜೀವನಕ್ಕೆ ಜೀವ ನೀಡುವ ಏಕೈಕ ಮತ್ತು ಅದ್ಭುತ ಶಕ್ತಿ ಪ್ರಕೃತಿಯಲ್ಲಿ ಮಹಿಳೆಗೆ ಮಾತ್ರ ಇದೆ ಎಂದು ತಿಳಿಸಿದ ಅವರು, ಮಹಿಳೆಯರ ಬಗ್ಗೆ ಕೇವಲ ಅನುಕಂಪ ತೋರುವುದಷ್ಟೇ ಅಲ್ಲದೇ, ಅವರಿಗೆ ಸಮಾಜದಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ, ಮಾಜಿ ದೇವದಾಸಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ, ಮಹಿಳಾ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕೆಡಿಪಿ ಸದಸ್ಯರಾದ ಸುನಂದಾ, ಸಂತೋಷ್, ಜಿಲ್ಲಾ ಗ್ಯಾರಂಟಿ ಯೋಜನೆ ಸದಸ್ಯೆ ಇಂದಿರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್, ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ನೆರ್ಲಗಿ ಪೌಂಡೇಷನ್ ಅಧ್ಯಕ್ಷೆ ಮಮತಾ ನೆರ್ಲಗಿ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯೂರು ಉಪಚುನಾವಣೆ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿ ವಹಿಸಬೇಕು : ಬಿ. ಕೆ. ಹರಿಪ್ರಸಾದ್

ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಪಕ್ಷದ ಪ್ರತಿಯೊಬ್ಬ ಮುಖಂಡರು ಹಾಗೂ...

ಚಿತ್ರದುರ್ಗ | ಸಾಮಾಜಿಕ ಜಾಲತಾಣಗಳ ಅತಿಬಳಕೆ ಯುವಜನರ ನೆಮ್ಮದಿಗೆ ಧಕ್ಕೆ: ಗಜೇಂದ್ರ

 ಕೃತಕ ಬುದ್ಧಿಮತ್ತೆ (ಎಐ) ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇಂದಿನ ತಂತ್ರಜ್ಞಾನ...

ಚಿತ್ರದುರ್ಗ | ನಿವೃತ್ತಿಯಲ್ಲೂ ಆಡಳಿತ ತರಬೇತಿ ಸೇವೆ : ವಿ. ಮಲ್ಲೇಶಪ್ಪ ಅವರಿಗೆ ಸನ್ಮಾನ

 ನಿವೃತ್ತಿಯ ನಂತರವೂ ತಮ್ಮ ಜ್ಞಾನ ಮತ್ತು ಅನುಭವವನ್ನು ಸರ್ಕಾರಿ ಅಧಿಕಾರಿ ಹಾಗೂ...

ಚಿತ್ರದುರ್ಗ | ಐಟಿಐ ಪಾಸಾದವರಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗ ಕಲ್ಪಿಸಿ : ಡಿಸಿ ರಮ್ಯ ಸೂಚನೆ

ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕ್ರಮ...