ಚಿತ್ರದುರ್ಗ | ಫೇಸ್ಬುಕ್ ನಲ್ಲಿ ಗಣೇಶ ವಿಸರ್ಜನೆಗೆ ಡಿಜೆ ಬಳಕೆ ಸುಳ್ಳು ಸುದ್ದಿ: ಪ್ರಕರಣ ದಾಖಲಿಸಿದ ಪೊಲೀಸರು

Date:

ಅತಿಯಾದ ಉನ್ಮಾದದಿಂದ ಸಾರ್ವಜನಿಕ ಉತ್ಸವಗಳಲ್ಲಿ ಅಷ್ಟು ಡಿಜೆ, ಇಷ್ಟು ಡಿಜೆ ಬರಲಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಹಾಕಿದರೆ ಜೋಕೆ! ಕೇಸು ಬೀಳಲಿದೆ ಎಚ್ಚರ! ರಾಜ್ಯದಾದ್ಯಂತ ಡಿಜೆ ನಿಷೇಧ ಸದ್ದು ಮಾಡುತ್ತಿರುವ ಬೆನ್ನಲ್ಲೇ ಚಿತ್ರದುರ್ಗ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಶೋಭಾಯಾತ್ರೆಯಲ್ಲಿ ಒಂಬತ್ತು ಡಿಜೆ (DJ) ಭಾಗವಹಿಸಲಿವೆ ಎಂದು ಸಾಮಾಜಿಕ ಜಾಲತಾಣ ಫೇಸ್ಬುಕ್ ಪೋಸ್ಟ್ ನಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯ ವಿರುದ್ದ ಮೊಳಕಾಲ್ಮೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.‌

- Advertisement -

ಆ‌ರ್.ಮಂಜುನಾಥ ಅಲಿಯಾಸ್ ಮಂಜ ಎನ್ನುವ ವ್ಯಕ್ತಿಯ ವಿರುದ್ಧ ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತ ‘manju achar prince’ ಎಂಬ ಫೇಸ್ಬುಕ್ ಐಡಿಯಲ್ಲಿ 2025 ಸೆಪ್ಟೆಂಬರ್ 08ರಂದು ಬೆಳಗ್ಗೆ 11 ಗಂಟೆಯ ಸಮಯದಲ್ಲಿ “ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಚಿತ್ರದುರ್ಗ ಬೃಹತ್ ಶೋಭಾಯಾತ್ರೆ, 2025 ಸೆ. 13ಕ್ಕೆ ಶನಿವಾರ ಪ್ರಪಥಮ ಬಾರಿ ಚಿತ್ರದುರ್ಗದ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಘರ್ಜಿಸಲು ಮುಂಬೈ, ಬೆಳಗಾವಿ, ಹುಬ್ಬಳ್ಳಿ, ಹಾಗೂ ಇನ್ನೂ ಹೆಸರಾಂತ 9 DJ ಗಳು ಭಾಗವಹಿಸಲಿವೆ ಎಂದು ಪೋಸ್ಟ್ ಹಾಕಿದ್ದು, ಸಾರ್ವಜನಿಕವಾಗಿ ‌ಸುಳ್ಳು ಸುದ್ದಿ ಮತ್ತು ಡಿಜೆ ಬಳಕೆ ಪ್ರಚೋದನೆಗೆ ಕುಮ್ಮಕ್ಕು ನೀಡಿದಂತಾಗಿದೆ ಎಂದು ಆರೋಪಿಸಿ ಕೇಸು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
1002659210
Oplus_131072

ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವಂತೆ ಪ್ರಚೋದನಾಕಾರಿ ಪೋಸ್ಟ್ ಮಾಡಿರುವುದರಿಂದ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತೆ ಕ್ರಮವಾಗಿ ಸದರಿ ಮಂಜುನಾಥನ ವಿರುದ್ಧ ಮೊಳಕಾಲೂರು ಪೊಲೀಸ್ ಠಾಣೆಯಲ್ಲಿ ಪಿಎಆರ್ ನಂಬರ್ 25/2025 ಕಲಂ.126(2)ಬಿ.ಎನ್.ಎಸ್.ಎಸ್-2023 ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೀದಿ ನಾಯಿ ದಾಳಿಗೆ ವೃದ್ಧ, ನಾಲ್ವರು ಮಕ್ಕಳಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಚಿತ್ರದುರ್ಗ ಜಿಲ್ಲಾಧಿಕಾರಿ ಸೆ.01 ರಿಂದ ಸೆ.15 2025 ರವರೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯಲಿರುವ ಗಣಪತಿ ಶೋಭಾಯಾತ್ರೆ, ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಜಿಲ್ಲಾದ್ಯಂತ ಡಿಜೆ ಸಿಸ್ಟಂ/ ಅತಿಹೆಚ್ಚು ಶಬ್ದ ಹೊರಡಿಸುವ ಉಪಕರಣಗಳನ್ನು ಬಳಸದಂತೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಕಡೆ ಗಣೇಶ ವಿಸರ್ಜನೆ ಸಮಯದಲ್ಲಿ ದೇಶೀಯ ಸಾಂಸ್ಕೃತಿಕ ಕಲೆಗಳ ಡೊಳ್ಳು, ತಮಟೆ, ವೀರಗಾಸೆ, ಮದ್ದಳೆ, ಯಕ್ಷಗಾನ, ಕೋಲಾಟ, ಬೊಂಬೆ ಕುಣಿತಗಳಂತಹ ಸಾಂಪ್ರದಾಯಿಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಸಾಂಪ್ರದಾಯಿಕ, ಸಾಂಸ್ಕೃತಿಕ ಕಲೆಗಳ ಪುನರುತ್ಥಾನವೂ ಸಾದ್ಯವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...