ಚಿತ್ರದುರ್ಗ | ರೈತ ಕಾರ್ಮಿಕ ಹೃದಯಾಘಾತಕ್ಕೆ ಬಲಿ, ಆರೋಗ್ಯ ಸುಧಾರಣಾ ಕ್ರಮಕ್ಕೆ ನಾಗರಿಕರ ಆಗ್ರಹ

Date:

ಕೂಲಿ ಕೆಲಸಕ್ಕೆ ತೆರಳಿದ್ದ ರೈತ ಕಾರ್ಮಿಕನೊಬ್ಬ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ವೇಳೆ ಹಠಾತ್ತನೆ ಹೃದಯಾಘಾತ ಅಥವಾ ಹೃದಯ ಸ್ಥಂಭನಕ್ಕೆ ಒಳಗಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು 55 ವರ್ಷ ವಯಸ್ಸಿನ ಹನುಮಂತಪ್ಪ ತಂದೆ ಓಬಣ್ಣ ಎನ್ನಲಾಗಿದ್ದು, ಹಲವಾರು ವರ್ಷಗಳಿಂದ ಈತ ರೈತ ಕೂಲಿ ಕಾರ್ಮಿಕನಾಗಿದ್ದು, ರೈತರ ಜಮೀನುಗಳಲ್ಲಿ ಕೂಲಿ, ಮತ್ತು ರೈತರ ತೋಟಗಳಲ್ಲಿ ಅಡಿಕೆ, ತೆಂಗು ಸೇರಿದಂತೆ ವಿವಿಧ ಮರಗಳಿದ ಫಸಲನ್ನು ಕಟಾವು ಮಾಡುವ ಕಾರ್ಯನಿರ್ವಹಿಸುತ್ತಿದ್ದ ಎಂದು ಗ್ರಾಮದ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಎಂದಿನಂತೆ ಸಹಜವಾಗಿ ಇಂದು ಕೂಡ ತೋಟದ ಉತ್ಪನ್ನಗಳ ಕಟಾವಿಗೆ ಹೋಗಿ, ಮರಳಿ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮರಳಿ ಬಂದಿದ್ದು, ಆಯಾಸಗೊಂಡು ನೀರನ್ನು ಕೇಳಿದ್ದಾನೆ. ಕುಟುಂಬದ ಸದಸ್ಯರು ಕೊಟ್ಟ ನೀರನ್ನು ಕುಡಿದು ಒಂದೆರಡು ನಿಮಿಷಗಳ ನಂತರ ಎದೆ ಹಿಡಿದುಕೊಂಡು ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಈದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿದ ಗ್ರಾಮದ ಮುಖಂಡ ಜಿವಿ ದಿನೇಶ್, “ಮೃತ ವ್ಯಕ್ತಿ ಹನುಮಂತಪ್ಪ ರೈತರ ತೋಟಗಳಲ್ಲಿ ಪಸಲು ಕೊಯ್ಯುವ ಕೊನೆಕಾರಿಕೆ ಕೆಲಸ ಮಾಡುತ್ತಿದ್ದು, ಎಂದಿನಂತೆ ಇಂದು ಕೂಡ ಕೆಲಸಕ್ಕೆ ಹೋಗಿ ವಾಪಸ್ ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಆಯಾಸದಿಂದ ಎದೆ ಹಿಡಿದುಕೊಂಡು ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ಕುಟುಂಬದ ಆಪ್ತರು ತಿಳಿಸಿದರು. ರಾಜ್ಯದಲ್ಲಿ ದಿನೇ ದಿನೇ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರ ಈ ಕೂಡಲೇ ಗಮನ ಹರಿಸಬೇಕಿದೆ. ಆರೋಗ್ಯ ಇಲಾಖೆ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು” ಎಂದು ಮನವಿ ಮಾಡಿದರು.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಧಮ್ಮ ಕೇಂದ್ರದಲ್ಲಿ ಸಂವಿಧಾನ ಮತ್ತು ಅಲ್ಪಸಂಖ್ಯಾತ ಮಹಿಳೆಯರ ಹಕ್ಕುಗಳ ಕುರಿತು ಕಾರ್ಯಕ್ರಮ

ಇತ್ತೀಚೆಗೆ ತಾನೇ ಚಳ್ಳಕೆರೆ ತಾಲೂಕಿನ ಸೊಲ್ಲಾಪುರ ನಾಯಕನಹಟ್ಟಿ ಗ್ರಾಮದ 35ವರ್ಷ ವಯಸ್ಸಿನ ಯುವಕನೋರ್ವ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...