ಸಾಲ ತೀರಿಸಲಾಗದೆ ಸಾಲಬಾಧೆಯ ಆತಂಕದಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಡೇಕುಂಟೆ ಗ್ರಾಮದಲ್ಲಿ ವರದಿಯಾಗಿದೆ.
ಚಳ್ಳಕೆರೆ ತಾಲೂಕಿನ ಜಡೆಕುಂಟೆ ಗ್ರಾಮದ ರೈತ ಮಹಾಲಿಂಗಪ್ಪ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತನಾಗಿದ್ದು ವ್ಯವಸಾಯ ಮತ್ತು ಬೆಳೆಗಾಗಿ ಸಾಲ ಮಾಡಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅತಿ ಹೆಚ್ಚು ಸಾಲದಿಂದ ಆತಂಕಗೊಂಡ ರೈತನಿಗೆ ಸಮರ್ಪಕವಾಗಿ ಬೆಳೆ ಬಾರದೆ, ಫಸಲು ಕೂಡ ಕೈಕೊಟ್ಟಿತ್ತು. ಇದರಿಂದ ಇತ್ತೀಚೆಗೆ ರೈತ ಮಹಾಲಿಂಗಪ್ಪ ಚಿಂತಿತನಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ವ್ಯವಸಾಯಕ್ಕಾಗಿ ಕೈಸಾಲ, ಬ್ಯಾಂಕ್ ಸಾಲವನ್ನು ಮಾಡಿಕೊಂಡಿದ್ದು ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಸಾಲದ ಕಾಟದಿಂದ ಜಿಗುಪ್ಸೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮ ಪಂಚಾಯಿತಿ ಅಕ್ರಮಗಳ ತನಿಖೆ, ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹ.
