ಚಿತ್ರದುರ್ಗ | ಅತಿವೃಷ್ಟಿ, ಪ್ರಕೃತಿ ವಿಕೋಪಕ್ಕೆ ಬೆಳೆ ವಿಮೆ, ಬೀಜ ರಸಗೊಬ್ಬರ ಬೆಲೆ ನಿಯಂತ್ರಣಕ್ಕೆ ರೈತ ಸಂಘ ಒತ್ತಾಯ

Date:

Advertisements

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಪ್ರಕೃತಿ ವಿಕೋಪ, ವಾತಾವರಣದಲ್ಲಿ ತೇವಾಂಶ ಹೆಚ್ಚಳದಿಂದ ರೋಗಗಳು ಬರುತ್ತಿದೆ.‌ ಬೆಳೆ ವಿಮೆ ಪಾವತಿಸಲಾದ ಎಲ್ಲಾ ರೈತರಿಗೆ ವಿಮಾ ಮೊತ್ತ ಪಾವತಿಸಬೇಕು.‌ ತೆಂಗು ನಾರಿನ ಅಭಿವೃದ್ಧಿ ನಿಗಮ ಮತ್ತು ಇತರೆಡೆಗಳಲ್ಲಿ ಕಳಪೆ ರಸಗೊಬ್ಬರ, ಬೀಜ, ಕೀಟನಾಶಕ ವಿತರಣೆಯಾಗುತ್ತಿದ್ದು, ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದ್ದು , ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಚಿತ್ರದುರ್ಗ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಿಗೆ ಮನವಿಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.

1002377050

“ಹೊಸದುರ್ಗ ತಾಲೂಕಿನಲ್ಲಿ ತೆಂಗು ಅಭಿವೃದ್ಧಿ ಯೋಜನೆಯಲ್ಲಿ ವಿತರಿಸುತ್ತಿರುವ ಗೊಬ್ಬರ ಹಾಗೂ ಕೀಟನಾಶಕ ಕಳಪೆಯಾಗಿದ್ದು ಮತ್ತು ರೈತರಿಗೆ ವಿತರಿಸದೆ ಹಣ ಪಡೆದಿರುತ್ತಾರೆ ಮತ್ತು ಜಿಲ್ಲೆಯ ತಾಲೂಕುಗಳಲ್ಲಿ ಗೊಬ್ಬರ, ಬೀಜ ಹಾಗೂ ಪರಿಕರಗಳು ಬಹಳಷ್ಟು ಕಳಪೆ ಹಾಗೂ ದುಬಾರಿ ಬೆಲೆಗೆ ಮಾರಾಟವಾಗುತ್ತಿದ್ದು, ನಕಲಿ ದಾಖಲೆ ಸೃಷ್ಟಿಸಿ ಬಿಲ್ ಮಾಡಲಾಗುತ್ತದೆ” ಎಂದು ಆರೋಪಿಸಿದರು.

“ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತನಿಖೆ ನಡೆಸಿ ತಪ್ಪಿತಸ್ಥ ಕಂಪನಿ ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವಾರದೊಳಗಾಗಿ ಅಡಿಕೆ ಬೆಳೆಗೆ ವಿಮಾ ಮೊತ್ತ ಪಾವತಿಸದೇ ಇದ್ದರೇ ತಮ್ಮ ಇಲಾಖೆ ಮುಂಭಾಗದಲ್ಲಿ 06 ತಾಲ್ಲೂಕಿನ ರೈತರೊಂದಿಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುವುದು” ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ಯೂರಿಯಾ ರಸಗೊಬ್ಬರ ಅಭಾವ; ರೈತರ ಬೆಳೆಗಳಿಗೆ ಅಗತ್ಯ ಗೊಬ್ಬರ ಒದಗಿಸಲು ರೈತ ಸಂಘ ಆಗ್ರಹ

ಈ ಪ್ರತಿಭಟನೆಯಲ್ಲಿ ರಂಗಸ್ವಾಮಿ, ಹೊಳಲ್ಕೆರೆ ರಂಗಣ್ಣ, ಜಯಣ್ಣ, ವೀರಭದ್ರಪ್ಪ, ಹಿರಿಯೂರು ಸಿದ್ರಾಮಣ್ಣ, ಸಣ್ಣ ತಿಮ್ಮಣ್ಣ, ಗಿರೀಶ್, ಚಳ್ಳಕೆರೆ ಶ್ರೀಕಂಠ ಮೂರ್ತಿ, ತಿಪ್ಪೇಸ್ವಾಮಿ, ಚನ್ನಕೇಶವ, ಹೊಸದುರ್ಗ ರಾಮಣ್ಣ, ಪ್ರಸನ್ನ, ಈರಣ್ಣ, ರಾಮಣ್ಣ, ಮೀಸೆ ಗೌಡ ಹಾಗೂ ಇನ್ನಿತರ ರೈತ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X