ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

Date:

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

- Advertisement -

ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಬೆಳಿಗ್ಗೆ 7ರ ಸಮಯದಲ್ಲಿ ಸಂಭವಿಸಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್‌ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.

ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತದ ನಂತರ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು: ಕಿಮ್ಸ್​​ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಈ ಐವರು ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಯಲ್ಲಿ ನಡೆಯಲಿದ್ದ ಸ್ನೇಹಿತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ತೆರಳುತ್ತಿದ್ದರು ಎಂಬುದು ಮೂಲಗಳಿಂದ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ |ಮಾರಾಟಕ್ಕಿರುವ ಎತ್ತುಗಳನ್ನು ಕೊಳ್ಳುವವರು ದಿಕ್ಕಿಲ್ಲ; ರೈತರ ಪರದಾಟ

ಮಧ್ಯ ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಚಿತ್ರದುರ್ಗ ಜಿಲ್ಲೆಯ...

ಚಿತ್ರದುರ್ಗ | ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ : ಟಿಹೆಚ್‌ಇಒ ಬಿ. ಮೂಗಪ್ಪ

 ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದು...

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...