ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

Date:

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ ನೈರ್ಮಲ್ಯ ಯೋಜನೆಗೆ ಬಿಡುಗಡೆಯಾದ ಸುಮಾರು ₹7 ಕೋಟಿ ಅನುದಾನದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಬೇಕು. 80 ಕಾಮಗಾರಿಗಳಲ್ಲಿ ಕೇವಲ 28 ಕಡತಗಳು ಮಾತ್ರ ಲಭ್ಯವಿದ್ದು, ಈ ಕುರಿತು ತನಿಖೆಗೆ ಆದೇಶಿಸಿ ಗಂಭೀರ ಕ್ರಮಕ್ಕೆ ಮುಂದಾಗಬೇಕು ಎಂದು ವಕೀಲರಾದ ಡಾ. ಕೆ.ಎ. ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

- Advertisement -

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗಕ್ಕೆ ಒಟ್ಟು ನಾಲ್ಕು ಹಂತಗಳಲ್ಲಿ ಆರು ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ₹7 ಕೋಟಿ ಬಿಡುಗಡೆ ಮಾಡಿದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಬಗ್ಗೆ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೇಳಿದಾಗ ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ. ನಂತರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ ತನಿಖೆಗೆ ಒಳಪಡಿಸುವಂತೆ ದೂರು ನೀಡಲಾಗಿದೆ. ಅಧೀಕ್ಷಕ ಅಭಿಯಂತರರು, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಯಿಸಿ ಸೂಕ್ತ ಕ್ರಮ ವಹಿಸಿ ಕಚೇರಿಗೆ ವರದಿ ಸಲ್ಲಿಸಲು ಹಾಗೂ ವಿಚಾರಣೆ ನಡೆಸಿ ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ ದಾಖಲೆಗಳನ್ನು ನೀಡುವಂತೆ ಆದೇಶ ನೀಡಲಾಗಿತ್ತು. ಅದರಂತೆ ಉಪವಿಭಾಗಗಳಿಗೆ ಭೇಟಿ ನೀಡಿದಾಗ, ಚಿತ್ರದುರ್ಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ 28 ಕಾಮಗಾರಿಗಳ ಕಡತಗಳನ್ನು ಮಾತ್ರ ತೋರಿಸಲಾಗಿದೆ. ಉಳಿದ ಕಾಮಗಾರಿಗಳ ಕಡತಗಳು ಕಚೇರಿಯಲ್ಲಿ ಲಭ್ಯವಿಲ್ಲ ಎಂದು ದೃಢೀಕರಣ ನೀಡಲಾಗಿದೆ ಎನ್ನಲಾಗಿದೆ.

ಕಾರ್ಯಪಾಲಕ ಅಭಿಯಂತರರು ಮಾಹಿತಿ ಕೊಡುವಲ್ಲಿ ಹಾಗೂ ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದು, ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಆರು ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಈ ಹಿಂದೆ ಇದ್ದ ಕಾರ್ಯಪಾಲಕ ಅಭಿಯಂತರರು ಹಾಗೂ ಹಾಲಿ ಕಾರ್ಯಪಾಲಕ ಅಭಿಯಂತರರಾದ ರಮನಾಥ್ ಜೈನ್ ಅವರ ವಿರುದ್ಧ ಕರ್ತವ್ಯಲೋಪದಡಿ ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆಯ ಇಬ್ಬರು ಕಲಾ ಸಾಧಕರಿಗೆ ರಾಜೋತ್ಸವ ಪ್ರಶಸ್ತಿ

ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...