ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

Date:

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ ನೋಡಿರಲಿಲ್ಲ ಎಂದು ರೈತರು ಆತಂಕ ವ್ಯಕ್ತಪಡಿಸಿದರು.‌

- Advertisement -
1002496635

ಇದುವರೆಗೂ ಹವಾಮಾನದ ಕಾರಣದಿಂದ, ಮಳೆಯ ಕಣ್ಣಾಮುಚ್ಚಾಲೆ ಆಟದಿಂದಾಗಿ ಬಿತ್ತನೆ ಕಾರ್ಯ ಕುಂಠಿತವಾಗಿತ್ತು. ಕಳೆದ ತಿಂಗಳು ಜುಲೈ ಅಂತ್ಯದಲ್ಲಿ ಉತ್ತಮ ಮಳೆ ಆರಂಭವಾಗಿದ್ದು ಸಾಕಷ್ಟು ರೈತರು ಬಿತ್ತನೆ ಕಾರ್ಯ ಕೈಗೊಂಡಿದ್ದು ಪ್ರಗತಿಯಲ್ಲಿದೆ.‌ ಜುಲೈ ಕೊನೆಯಲ್ಲಿ ಬಿತ್ತನೆ ಮಾಡಿದ ರೈತರಿಗೆ ಈಗ ರಸಗೊಬ್ಬರ ಯೂರಿಯಾ ಅವಶ್ಯಕತೆ ಇದ್ದು ಸಾಕಷ್ಟು ಯೂರಿಯಾ ದಾಸ್ತಾನು ಇಲ್ಲದ ಕಾರಣ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಗೊಬ್ಬರ ಸಿಗುತ್ತದೋ ಇಲ್ಲವೋ ಎಂದು ಗೊಂದಲ ಉಂಟಾಗಿದೆ ಎಂದು ಸರತಿಯಲ್ಲಿ ನಿಂತು ಕಾಯುತ್ತಿರುವ ರೈತರು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....
1002496627
ಗೊಬ್ಬರಕ್ಕಾಗಿ ರೈತರ ನೂಕು ನೂಗ್ಗಲು

ಜನತಾ ಬಜಾರ್ ಹಾಗೂ ಇತರೆಡೆ ಅಂಗಡಿಗಳಲ್ಲಿದ್ದ ಅಲ್ಪಸ್ವಲ್ಪ ರಸಗೊಬ್ಬರವನ್ನು ಪೊಲೀಸ್ ಸರ್ಪಗಾವಲಿನಲ್ಲಿ ವಿತರಣೆ ಮಾಡಲಾಯಿತು. ಚಳ್ಳಕೆರೆಯಲ್ಲಿ ಗೊಬ್ಬರ ಕೊರತೆಯಿಂದ ಜನತಾ ಬಜಾರ್ ನಲ್ಲಿ ರೈತರು ಕಾದು ಕುಳಿತಿದ್ದರು.

ಕಳೆದ ಎರಡು ತಿಂಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಎದುರಾಗಿದ್ದು, ತೀವ್ರ ಪ್ರತಿಭಟನೆಗಳು ನಡೆದವು. ಕೆಲವೆಡೆ ರಸ್ತೆ ತಡೆ, ಕೃಷಿ ಇಲಾಖೆಗೆ ಬೀಗ ಜಡಿದು ರೈತ ಮುಖಂಡರು ಬಿಸಿ ಮುಟ್ಟಿಸಿದ್ದರು. ಆಗ ಚಳ್ಳಕೆರೆ ತಾಲೂಕಿನಲ್ಲಿ ಗೊಬ್ಬರದ ಅವಶ್ಯಕತೆ ಇಲ್ಲದೆ ಶಾಂತವಾಗಿತ್ತು. ಜುಲೈನಲ್ಲಿ ಉತ್ತಮ ಹವಾಮಾನ, ಮಳೆ ನಂತರ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ಸಮಯದಲ್ಲಿ ಬೆಳೆಗಳಿಗೆ ಬೆಳವಣಿಗೆಗೆ ಪೋಷಕಾಂಶಭರಿತ ಯೂರಿಯಾ ಅಗತ್ಯ ಹೆಚ್ಚು. ಆದರೆ ಸಾಕಷ್ಟು ಗೊಬ್ಬರ ಸರಬರಾಜು ಇಲ್ಲದೇ ಗೊಬ್ಬರ ಅಂಗಡಿ ಮುಂಬಾಗ ರೈತರು ನೂಕುನುಗ್ಗಲು ಎದುರಾಗಿದೆ.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

ಈ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ಪತ್ರಕರ್ತ ಮುರಳಿ ಮತ್ತು ಕರವೇ ಮುಖಂಡ ಭೋಜರಾಜ್,”ಇತಿಹಾಸದಲ್ಲಿ ಇದೇ ಮೊದಲು ಗೊಬ್ಬರ ಕೊರತೆ ಚಳ್ಳಕೆರೆ ತಾಲೂಕಿನಲ್ಲಿ ಉಂಟಾಗಿದೆ ಎನ್ನಬಹುದು. ಬೇರೆ ಭಾಗಗಳಲ್ಲಿ ರಸಗೊಬ್ಬರ ಕೊರತೆ ಸುದ್ದಿ ಇದೆ ಎಂದು ಸುದ್ದಿ ಓದುತ್ತಿದ್ದೆವು. ಆದರೆ ಮಂಗಳವಾರ ಬೆಳ್ಳಂಬೆಳಗ್ಗೆ ಗೊಬ್ಬರ ಸಿಗದೇ ರೈತರು ಪರದಾಡುವ, ನೂಕಾಟ, ವಾಗ್ಯುದ್ದ ನಡೆದುದನ್ನು ಕಣ್ಣಾರೆ ಕಂಡಿದ್ದೇವೆ.‌ ರೈತರಿಗೆ ಅಗತ್ಯವಾದ ರಸಗೊಬ್ಬರವನ್ನು ಕೂಡಲೇ ಕೃಷಿ ಇಲಾಖೆ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...