ಚಿತ್ರದುರ್ಗ | ಪಹಣಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಿಕೊಳ್ಳಿ : ಜಿಲ್ಲಾಧಿಕಾರಿ ಟಿ. ವೆಂಕಟೇಶ್

Date:

      ರಾಜ್ಯಾದ್ಯಂತ ಸ್ವಯಂ ಚಾಲಿತ ಮ್ಯುಟೇಷನ್ ವ್ಯವಸ್ಥೆಯನ್ನು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಗುರುವಾರದಂದು ಚಾಲನೆ ನೀಡಿದ್ದು, ಈ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು, ತಮ್ಮ ತಮ್ಮ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್  ಮನವಿ ಮಾಡಿದ್ದಾರೆ.

- Advertisement -

     ಈ ಹಿಂದೆ ಎಲ್ಲಾ 7 ದಿನಗಳ ಹಾಗೂ 15 ದಿನಗಳ ನೋಟೀಸು ಅವಧಿ ಹೊಂದಿರುವ ಮುಟೇಶನ್ ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ಸಂಬಂಧಪಟ್ಟ ರಾಜಸ ನಿರೀಕ್ಷಕರು ಖುದ್ದಾಗಿ ಡಿಜಿಟಲ್ ಸಹಿ ಮೂಲಕ ಅನುಮೋದನೆ ನೀಡುವ ಅವಶ್ಯಕತೆ ಇತ್ತು. ಇದರಿಂದಾಗಿ ಮ್ಯುಟೇಶನ್ ಅನುಮೋದನೆಗೆ ಹೆಚ್ಚಿನ ಸಮಯ ತಗಲುತ್ತಿತ್ತು. ಅನಗತ್ಯ ವಿಳಂಬವನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯದಲ್ಲಿ ಸ್ವಯಂ ಚಾಲಿನ ಮ್ಯುಟೇಷನ್‍ಗೆ ಹೊಸ ಪದ್ಧತಿಯನ್ನು ಫೆ. 24 ಗುರುವಾರದಿಂದ ಜಾರಿಗೆ ತರಲಾಗಿದೆ. ಎಲ್ಲಾ 7 ದಿನಗಳ ಹಾಗೂ 15 ದಿನಗಳ ನೋಟೀಸು ಅವಧಿ ಹೊಂದಿರುವ ಮ್ಯುಟೇಷನ್‍ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ತಂತ್ರಾಂಶದ ಮೂಲ- ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ ಸರ್ವರ್ ಸಹಿ ಮೂಲಕ ಸ್ವಯಂಚಾಲಿತವಾಗಿ ಅನುಮೋದನೆಯಾಗುವಂತೆ ಭೂಮಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

      07 ಕೆಲಸದ ದಿನಗಳು ಅಥವಾ 15 ಕೆಲಸದ ದಿನಗಳ ನೋಟೀಸ್ ಅವಧಿಯೊಳಗೆ ಕಂದಾಯ ನಿರೀಕ್ಷಕರು (ಸರ್ಕಾರಿ ಆಕ್ಷೇಪ) ಅಥವಾ ಸಾರ್ವಜನಿಕರ ಯಾವುದೇ ತಕರಾರು ನೀಡಿದ್ದಲ್ಲಿ, ಈ ಮ್ಯುಟೇಷನ್ ಅನ್ನು ಪೂರ್ಣಗೊಳಿಸದ ಆರ್.ಸಿ.ಸಿ.ಎಂ.ಎಸ್ ತಂತ್ರಾಂಶದ ತಹಶೀಲ್ದಾರರ ನ್ಯಾಯಾಲಯಕ್ಕೆ ಅಂತಹ ಪ್ರಕರಣವನ್ನು ವರ್ಗಾಯಿಸಲಾಗುತ್ತದೆ. ತಹಶೀಲ್ದಾರರ ನಿರ್ಧಾರದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.

     ಈ ಹಿಂದೆ ಮ್ಯುಟೇಷನ್ ಗಳಿಗೆ ಆಕ್ಷೇಪಣೆ ಇದ್ದಲ್ಲಿ ಅಥವಾ ಅನುಮೋದನೆ ನೀಡಬೇಕಾದಲ್ಲಿ ರಾಜಸ್ವ ನಿರೀಕ್ಷಕರು ತಾಲ್ಲೂಕು ಕಛೇರಿಗಳಿಗೆ ಬಂದು ಸಲ್ಲಿಸಬೇಕಾಗಿತ್ತು. ಆದರೆ ಪ್ರಸ್ತುತ, ರಾಜಸ್ವ ನಿರೀಕ್ಷಕರಿಗೆ ಲಾಗಿನ್ ನೀಡಲಾಗಿದ್ದು, ಯಾವುದೇ ಸ್ಥಳದಿಂದ ಆಕ್ಷೇಪಣೆ ಸಲ್ಲಿಸಲು ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ ಹಾಗೂ ಅನುಮೋದನೆಯಾಗುತ್ತದೆ.

     ಭೂಮಿ ತಂತ್ರಾಂಶದಲ್ಲಿ ಸರ್ಕಾರಿ ಜಮೀನುಗಳು, ಸರ್ಕಾರಿ ನಿಬಂಧನೆ ಇರುವ ಜಮೀನುಗಳು ಹಾಗೂ ಪಿಟಿಸಿಎಲ್ ವ್ಯಾಪ್ತಿಗೆ ಬರುವ ಜಮೀನುಗಳನ್ನು ಫ್ಲಾಗ್ ಮಾಡಲಾಗಿದ್ದು, ಅಂತಹ ಜಮೀನುಗಳನ್ನು ನೋಂದಣಿ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ಇಂತಹ ಜಮೀನುಗಳು ಸ್ವಯಂಚಾಲಿತ ಮ್ಯುಟೇಷನ್ ವ್ಯಾಪ್ತಿಗೆ ಬರುವುದಿಲ್ಲ.

     ಮ್ಯುಟೇಷನ್ ಪೂರ್ಣಗೊಂಡ ನಂತರ ಸಂಬಂಧಪಟ್ಟವರಿಗೆ ಎಸ್. ಎಂ. ಎಸ್. ಸಂದೇಶ ಮೂಲಕ ಮಾಹಿತಿಯನ್ನು ನೀಡಲಾಗುತ್ತಿದೆ ಮತ್ತು ಸಂಬಂಧಿಸಿದ ನೋಟೀಸುಗಳನ್ನು ಇ-ಚಾವಡಿ ಮೂಲಕ ತಂತ್ರಾಂಶದಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಮಧ್ಯವರ್ತಿಗಳು ಜನರನ್ನು ದುರುಪಯೋಗಪಡಿಸಿಕೊಳ್ಳದಂತೆ, ನೆಮ್ಮದಿಯಿಂದ ಬದುಕಲು ಆಗುತ್ತದೆ. ಜನರಿಗೆ ಅನಗತ್ಯ ಹೊರೆ ಕಡಿಮೆ ಮಾಡಿ, ಸರ್ಕಾರಿ ಸೇವೆಗಳ ಸರಳೀಕರಣ ಮತ್ತು ಸುಲಲಿತವಾಗಿ ಜನರ ಮನೆಬಾಗಿಲಿಗೆ ಸೇವೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಕಂದಾಯ ಇಲಾಖೆಯಿಂದ ರಾಜಸ್ವ ನಿರೀಕ್ಷಕರುಗಳಿಗೆ ಕ್ರೋಮ್‍ಬುಕ್‍ನ್ನು ಏಪ್ರಿಲ್‍ನಿಂದ ನೀಡಲು ವ್ಯವಸ್ಥೆ ಮಾಡಲಾಗುತ್ತಿದ್ದು ಇನ್ನು ಮುಂದೆ ಕಂದಾಯ ಇಲಾಖೆಯ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ.

     ಸರ್ಕಾರದ ಈ ಮಹತ್ವಾಕಾಂಕ್ಷೆ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಮತ್ತು ತಮ್ಮ ತಮ್ಮ ಜಮೀನುಗಳ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸುವುದು ಅತ್ಯವಶ್ಯಕವಾಗಿದ್ದು, ಸಾರ್ವಜನಿಕರು ಗ್ರಾಮ ಆಡಳಿತ ಅಧಿಕಾರಿ /ರಾಜಸ್ಥ ನಿರೀಕ್ಷಕರು / ನಾಡಕಛೇರಿ/ ತಾಲ್ಲೂಕು ಕಛೇರಿಯಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ...

ಚಿತ್ರದುರ್ಗ |ಮಾರಾಟಕ್ಕಿರುವ ಎತ್ತುಗಳನ್ನು ಕೊಳ್ಳುವವರು ದಿಕ್ಕಿಲ್ಲ; ರೈತರ ಪರದಾಟ

ಮಧ್ಯ ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಚಿತ್ರದುರ್ಗ ಜಿಲ್ಲೆಯ...

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...