ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ

Date:

ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನಗೊಳಿಸಿ, ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರು ತಲುಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಹೇಳಿದರು.

- Advertisement -

ಚಿತ್ರದುರ್ಗ ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಈಗಾಗಲೇ 3 ಟಿಎಂಸಿ ನೀರು ಹರಿಸಲಾಗಿದ್ದು, ಶೀಘ್ರದಲ್ಲೇ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

1004317850

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ತೆಂಗು ಮತ್ತು ಅಡಿಕೆ ತೋಟಗಳು ಒಣಗುತ್ತಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ. ಚಿತ್ರದುರ್ಗ ಶಾಖಾ ಕಾಲುವೆಯ ಮೂಲಕ ಹರಿಸಲಾದ ನೀರು ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕಿನ ಕೆಲವು ಕೆರೆಗಳನ್ನು ತಲುಪಿದೆ. ಆದರೆ ಚಳ್ಳಕೆರೆ ಮತ್ತು ಹಿರಿಯೂರು ತಾಲೂಕಿನ ಕೊನೆಯ ಭಾಗದ ಕೆರೆಗಳಿಗೆ ಇನ್ನೂ ನೀರು ತಲುಪಬೇಕಿದೆ ಎಂದರು.

ಈ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಿಗೆ ಮನವಿ ಸಲ್ಲಿಸಿ ಅನುಮೋದನೆ ಪಡೆಯಲಾಗಿದೆ. ಶೀಘ್ರವೇ ನೀರು ಹರಿಯುವ ವಿಶ್ವಾಸವಿದೆ ಎಂದು ತಿಳಿಸಿದರು.

ಬೆಳೆದು ನಿಂತಿರುವ ತೋಟಗಳನ್ನು ಉಳಿಸಿಕೊಳ್ಳುವುದು ಸರ್ಕಾರದ ಮುಂದಿರುವ ಸವಾಲಾಗಿದೆ. ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಚಿತ್ರದುರ್ಗ ಜಿಲ್ಲೆಯ ಕುಡಿಯುವ ನೀರಿನ ಅಭಾವದ ಗಂಭೀರ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

1004317849

ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಸನ್ನದ್ಧವಾಗಿದೆ. ರಾಜ್ಯದ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಧಿಕಾರಿಗಳ ತಂಡ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ್ದು, ಕೇಂದ್ರ ಸರ್ಕಾರದಿಂದ ₹7,148 ಕೋಟಿ ಪರಿಹಾರಧನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಬರ ಪರಿಹಾರಕ್ಕಾಗಿ ₹227 ಕೋಟಿ ಅನುದಾನ ಕೋರಲಾಗಿದೆ ಎಂದರು.

ಬರದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದೊಂದಿಗೆ ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗೂ ಶ್ರಮಿಸಲಾಗುತ್ತಿದೆ. ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ನೀಡಲಾಗಿದ್ದು, ಉದ್ಯೋಗ ಸೃಷ್ಟಿ ಮತ್ತು ಕೌಶಲ್ಯಾಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ವಿಶಾಲ ಕರ್ನಾಟಕದ ಏಕೀಕರಣದಂತೆ ಕನ್ನಡಿಗರ ಮನಸ್ಸುಗಳ ಏಕೀಕರಣವೂ ಆಗಬೇಕಿದೆ ಎಂದು ಸಚಿವರು ಹೇಳಿದರು.

1004317848

ನಾಡು-ನುಡಿಯ ಅಭಿಮಾನ ಪ್ರತಿಯೊಬ್ಬರಲ್ಲೂ ಇರಬೇಕು. ವಿದ್ಯಾರ್ಥಿಗಳು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಮರೆಯಬಾರದು. ಹೆತ್ತ ತಾಯಿ ಹಾಗೂ ಮಾತೃಭಾಷೆ ಕನ್ನಡ ನಮಗೆ ಎಂದಿಗೂ ಪೂಜನೀಯ. ಕನ್ನಡವನ್ನು ಉಳಿಸಿ, ಬೆಳೆಸಿ, ಪ್ರೀತಿಸುವ ಶಪಥವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.

ಹಿಂದಿ ಹೊರತುಪಡಿಸಿದರೆ ದೇಶದಲ್ಲಿಯೇ ಅತಿ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಭಾಷೆಗೆ ಲಭಿಸಿರುವುದು ಹೆಮ್ಮೆಯ ಸಂಗತಿ. ಇದು ಕನ್ನಡ ಸಾಹಿತ್ಯ ಮತ್ತು ಭಾಷೆಯ ಶ್ರೇಷ್ಠತೆಗೆ ಸಾಕ್ಷಿಯಾಗಿದೆ. ನಾವು ಎಲ್ಲೇ ಇರಲಿ, ಮಾತೃಭಾಷೆಯಾದ ಕನ್ನಡವನ್ನು ಪ್ರೀತಿಸಿ ಗೌರವಿಸಬೇಕು ಎಂದು ತಿಳಿಸಿದರು.

ಮಕ್ಕಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ಪೂರೈಸುವುದರಿಂದ ಉದ್ಯೋಗ ಮತ್ತು ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಯಾವುದೇ ಅಡ್ಡಿಯಾಗುವುದಿಲ್ಲ. ಗ್ರಾಮೀಣ ಭಾಗದ ಅನೇಕ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

1004317847

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸಚಿವ ಟಿ.ರಘುಮೂರ್ತಿ ಸನ್ಮಾನಿಸಿ ಗೌರವಿಸಿದರು.

ನಗರದ ಸರ್ಕಾರಿ ಕೋಟೆ ಪ್ರೌಢಶಾಲೆ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಮಹಾರಾಣಿ ಶಾಲೆ ಹಾಗೂ ಗಾರ್ಡಿಯನ್ ಏಂಜಲ್ಸ್ ಶಾಲೆಯ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಮಹತ್ವ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಇದಕ್ಕೂ ಮುನ್ನ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರ, ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳೊಂದಿಗೆ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಶೀಲ್ದಾರ್ ಬೀಬೀ ಫಾತೀಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯೂರು ಉಪಚುನಾವಣೆ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿ ವಹಿಸಬೇಕು : ಬಿ. ಕೆ. ಹರಿಪ್ರಸಾದ್

ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಪಕ್ಷದ ಪ್ರತಿಯೊಬ್ಬ ಮುಖಂಡರು ಹಾಗೂ...

ಚಿತ್ರದುರ್ಗ | ಸಾಮಾಜಿಕ ಜಾಲತಾಣಗಳ ಅತಿಬಳಕೆ ಯುವಜನರ ನೆಮ್ಮದಿಗೆ ಧಕ್ಕೆ: ಗಜೇಂದ್ರ

 ಕೃತಕ ಬುದ್ಧಿಮತ್ತೆ (ಎಐ) ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇಂದಿನ ತಂತ್ರಜ್ಞಾನ...

ಚಿತ್ರದುರ್ಗ | ನಿವೃತ್ತಿಯಲ್ಲೂ ಆಡಳಿತ ತರಬೇತಿ ಸೇವೆ : ವಿ. ಮಲ್ಲೇಶಪ್ಪ ಅವರಿಗೆ ಸನ್ಮಾನ

 ನಿವೃತ್ತಿಯ ನಂತರವೂ ತಮ್ಮ ಜ್ಞಾನ ಮತ್ತು ಅನುಭವವನ್ನು ಸರ್ಕಾರಿ ಅಧಿಕಾರಿ ಹಾಗೂ...

ಚಿತ್ರದುರ್ಗ | ಐಟಿಐ ಪಾಸಾದವರಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗ ಕಲ್ಪಿಸಿ : ಡಿಸಿ ರಮ್ಯ ಸೂಚನೆ

ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕ್ರಮ...