ಚಿತ್ರದುರ್ಗ | ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ; ಪ್ರತ್ಯೇಕ ಭೂಮಿಗೆ ಸಮುದಾಯದ ಆಗ್ರಹ

Date:

ಹಿರಿಯೂರು ತಾಲೂಕಿನ ವಾಣಿವಿಲಾಸಪುರ ರಸ್ತೆಯಲ್ಲಿರುವ ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ ಇರುವ ಕಾರಣ ಮಂಗಳವಾರ (ಜ.02) ರಾತ್ರಿ ಮೃತಪಟ್ಟ ವ್ಯಕ್ತಿಯೊಬ್ಬರನ್ನು ಪೊಲೀಸ್ ಭದ್ರತೆಯಲ್ಲಿ ಬುಧವಾರ (ಜ.03) ಸಂಜೆ ಅಂತ್ಯಸಂಸ್ಕಾರ ನಡೆಸಲಾಯಿತು.

ಉಪ್ಪಾರಹಟ್ಟಿಯಲ್ಲಿ ಮಂಗಳವಾರ ರಾತ್ರಿ ಕಲ್ಲಪ್ಪ ಅವರು ಮೃತಪಟ್ಟಿದ್ದರು. ಪ್ರತ್ಯೇಕ ರುದ್ರಭೂಮಿ ಇಲ್ಲದ ಕಾರಣಕ್ಕೆ ಕಲ್ಲಪ್ಪ ಅವರ ಅಂತ್ಯಕ್ರಿಯೆಗೆ ಸ್ಥಳೀಯರು ಅವಕಾಶಕೊಟ್ಟಿರಲಿಲ್ಲ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಹಾಗೂ ಉಪ್ಪಾರ ಜನಾಂಗದವರು ರುದ್ರಭೂಮಿ ಸಮಸ್ಯೆಗೆ ಜಿಲ್ಲಾಧಿಕಾರಿ ಮಧ್ಯ ಪ್ರವೇಶ ಮಾಡಿ ಪರಿಹರಿಸಬೇಕು ಎಂದು ಪಟ್ಟು ಹಿಡಿದಿದ್ದರು.

ಗ್ರಾಮಕ್ಕೆ ಭೇಟಿ ನೀಡಿದ್ದ ತಹಸೀಲ್ದಾರ್ ರಾಜೇಶ್ ಕುಮಾರ್ ಮೃತರ ಸಂಬಂಧಿಕರ ಮನ ಒಲಿಸಲು ಪ್ರಯತ್ನಿಸಿದರೂ ಆಗಲಿಲ್ಲ. ಅಂತಿಮವಾಗಿ ಪೊಲೀಸ್ ಭದ್ರತೆಯಲ್ಲಿ ಮೊದಲು ಅಂತ್ಯಸಂಸ್ಕಾರ ಮಾಡುತ್ತಿದ್ದ ಜಾಗದಲ್ಲಿಯೇ ಅಂತ್ಯಕ್ರಿಯೆ ಮಾಡಿಸಿ, ವಾರದೊಳಗೆ ರುದ್ರಭೂಮಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉಪಾರಹಟ್ಟಿ ಗ್ರಾಮದಲ್ಲಿ ಉಪ್ಪಾರ ಸಮುದಾಯಕ್ಕೆ ಸೇರಿದ ನೂರು ಮನೆಗಳಿದ್ದು, ಸುಮಾರು 600ಕ್ಕೂ ಹೆಚ್ಚು ಜನರಿದ್ದಾರೆ. ಹಟ್ಟಿಯಲ್ಲಿರುವ ಯಾರಿಗೂ ಒಂದಿಂಚು ಭೂಮಿ ಇಲ್ಲ. ಕೂಲಿಯೇ ಎಲ್ಲರಿಗೂ ಬದುಕಿನ ಆಧಾರ. ಹಟ್ಟಿಯಲ್ಲಿ ಯಾರಾದರೂ ಮರಣ ಹೊಂದಿದರೆ ಶವಸಂಸ್ಕಾರ ಮಾಡಲು ಒಂದಡಿ ಜಾಗವಿಲ್ಲ. ಸತ್ತವರನ್ನು ನೆಮ್ಮದಿಯಿಂದ ಅಂತ್ಯಸಂಸ್ಕಾರ ಮಾಡಲು ಜಾಗ ಕೇಳುವುದೇ ತಪ್ಪಾ ಎಂಬ ಪ್ರಶ್ನೆ ಗ್ರಾಮಸ್ಥರದ್ದು.

ಈಗಾಗಲೇ ಯರದಕಟ್ಟೆ ಗೋಮಾಳದ ಸರ್ವೆ ನಂ.19ರಲ್ಲಿ 1.17ಎಕರೆ ಜಮೀನನ್ನು ರುದ್ರಭೂಮಿಗೆ ಮಂಜೂರು ಮಾಡಿ ಪಹಣಿ ಬಂದಿದ್ದು, ಒಂದು ವರ್ಷ ಕಳೆದಿದೆ. ಅಲ್ಲಿಂದ ಇಲ್ಲಿಯವರೆಗೆ ಸುಮಾರು ಏಳೆಂಟು ಮಂದಿ ಮರಣ ಹೊಂದಿದ್ದಾರೆ. ಆದಾಗ್ಯೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲು ಅಲ್ಲಿನ ಸ್ಥಳೀಯರು ಬಿಡುತ್ತಿಲ್ಲ. ಆದ್ದರಿಂದ ವಿ.ವಿ.ಪುರ ರಸ್ತೆಯ ಪಕ್ಕದಲ್ಲಿಯೇ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ.

ಉಪ್ಪಾರಹಟ್ಟಿ ಗ್ರಾಮಕ್ಕೆ ರುದ್ರಭೂಮಿ ನೀಡುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ. ಜಿಲ್ಲಾಧಿಕಾರಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥ ಪಡಿಸಬೇಕು. ಸಚಿವ ಡಿ. ಸುಧಾಕರ್ ರುದ್ರಭೂಮಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ಉಪ್ಪಾರ ಜನಾಂಗದ ಮುಖಂಡ ನಾಗರಾಜ್ ಉಪ್ಪಾರ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...