ಚಿತ್ರದುರ್ಗ | ಅನಾವೃಷ್ಟಿಗೆ ಶೇಂಗಾ ತೊಗರಿ ಹತ್ತಿ ನಾಶ: ಉತ್ತರ ಕರ್ನಾಟಕದ ಮಾದರಿ ಪರಿಹಾರಕ್ಕೆ ರೈತ ಸಂಘ ಆಗ್ರಹ

Date:

ಬರದ ನಾಡಾಗಿರುವ ಮೊಳಕಾಲ್ಮೂರಿನಲ್ಲಿ ತೊಗರಿ, ಶೇಂಗಾ, ಹತ್ತಿ ಸೇರಿದಂತೆ ರೈತ ಬೆಳೆದಿರುವ ಹಲವು ಬೆಳೆಗಳು ಮಳೆ ಇಲ್ಲದೆ ಅನಾವೃಷ್ಟಿಗೆ ಒಣಗಿ ಹೋಗಿದ್ದು ರೈತ ಭಾರಿ ಸಂಕಷ್ಟಕ್ಕೀಡಾಗಿದ್ದಾನೆ. ಉತ್ತರ ಕರ್ನಾಟಕದ ಜನರ ಬೆಳೆ ನಷ್ಟಕ್ಕೆ ವಿಮೆ ಪರಿಹಾರ ಮತ್ತು ಬೆಳೆ ಸಾಲ ಮನ್ನಾಕ್ಕೆ ಬೆಳೆಪರಿಹಾರ ಘೋಷಣೆ ಮಾಡಿದಂತೆ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೆಳೆ ನಷ್ಟವಾಗಿರುವ ರೈತರ ಸಾಲ ಮನ್ನಾ ಮತ್ತು ಬೆಳೆ ವಿಮೆ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಘಟಕ ಮೊಳಕಾಲ್ಮುರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಿತು.

- Advertisement -
1002742472

ಈ ವೇಳೆ ಮಾತಾಡಿದ ರೈತ ಮುಖಂಡರು, “ಬರದ ನಾಡು ಮೊಳಕಾಲ್ಮೂರಿನಲ್ಲಿ ಸತತ ಬರದಿಂದ ಮಳೆ ಇಲ್ಲದೆ ಈ ಬಾರಿ ಬೆಳೆದಿದ್ದ ಶೇಂಗಾ, ತೊಗರಿ ಹತ್ತಿ ಸಂಪೂರ್ಣ ಒಣಗಿ ಹೋಗಿದ್ದು, ಪ್ರತಿ ಎಕರೆಗೆ 50,000 ರೂ. ದಂತೆ ಬೆಳೆ ಪರಿಹಾರ ಘೋಷಣೆ ಮಾಡಬೇಕು. ಅಧಿಕಾರಿಗಳು ಖುದ್ದಾಗಿ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು.‌ ಎಲ್ಲೋ ಕುಳಿತು ಒಂದು ಕಡೆ ಸರ್ವೇ ಮಾಡಿ ಅವೈಜ್ಞಾನಿಕ ವರದಿ ನೀಡಬಾರದು. ಕಳೆದ ಬಾರಿ ಒಂದು ಪಂಚಾಯತಿಗೆ ಮಾತ್ರ ಬೆಳೆ ಪರಿಹಾರ ದೊರೆತಿದ್ದು ಬೇರೆ ಕಡೆ ನಷ್ಟವಾದೆಡೆ ಪರಿಹಾರ ದೊರೆತಿರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1002742468

“ಕಳೆದ ಬಾರಿ ಅಕಾಲಿಕ ಅತಿವೃಷ್ಟಿಯಿಂದಾಗಿ ಮೆಕ್ಕೆಜೋಳ ಸಂಪೂರ್ಣ ಹಾಳಾಗಿದ್ದು, ಅಧಿಕಾರಿಗಳ ತಪ್ಪಿನಿಂದಾಗಿ ಬೆಳೆ ಪರಿಹಾರಕ್ಕೆ ಸರ್ವೇ ನಂಬರ್ ಗಳು ದಾಖಲಾಗದೆ ರೈತರು ನಷ್ಟ ಅನುಭವಿಸಿದ್ದರು. ಈ ಬಾರಿ ಹಾಗಾಗದಂತೆ ಎಚ್ಚರವಹಿಸಿ ಕಳೆದ ಬಾರಿಯ ನಷ್ಟವನ್ನು ಅಧಿಕಾರಿಗಳಿಂದ ವಸೂಲಿ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಕೇಂದ್ರ ಸರ್ಕಾರ ಘೋಷಿಸಿರುವ ಫಸಲ್ ಭೀಮಾ ಯೋಜನೆಯಲ್ಲಿ ಷರತ್ತುಗಳನ್ನು ವಿಧಿಸಿರುವುದರಿಂದ ಲಾಭಕ್ಕಿಂತವೇ ನಷ್ಟವೇ ಹೆಚ್ಚಾಗಿದ್ದು, ರೈತರು ವಂತಿಗೆ ತುಂಬುವಲ್ಲಿ, ಬೆಳೆವಿಮೆ ಪರಿಹಾರ ಪಡೆಯುವಲ್ಲಿ ಹಿಂದೆ ಸರಿಯುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಬೆಳೆಗೆ ಪೂರಕವಾಗಿ ಅನುಕೂಲಕರ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ತರುವಂತೆ ಒತ್ತಾಯಿಸುತ್ತಿದ್ದೇವೆ. ಈ ಬಾರಿ ರೈತರು ಯೂರಿಯಾ ಆಭಾವದಿಂದ ಸಂಕಷ್ಟಕ್ಕೆ ಗುರಿಯಾಗಿದ್ದು, ತಕ್ಷಣವೇ ಯೂರಿಯ ಪೂರೈಕೆಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

1002742467

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡ ರೆಡ್ಡಿಹಳ್ಳಿ ಬಸವ ರೆಡ್ಡಿ, ಜಿಲ್ಲಾಧ್ಯಕ್ಷ ಮರ್ಲ್ಲಹಳ್ಳಿ ರವಿಕುಮಾರ್, ತಾಲೂಕು ಅಧ್ಯಕ್ಷ ಸೂರಮ್ಮನಹಳ್ಳಿ ರಾಜಣ್ಣ, ಜಿಲ್ಲಾ ಉಪಾಧ್ಯಕ್ಷ ಹಿರೇಹಳ್ಳಿ ತಿಪ್ಪೇಸ್ವಾಮಿ, ಕಾರ್ಯದರ್ಶಿಗಳಾದ ಈರಣ್ಣ, ಕೋಟಿ ಈರಣ್ಣ, ಮುಖಂಡರಾದ ಎಸ್ ಟಿ ಚಂದ್ರಣ್ಣ, ಈರಣ್ಣ, ಮುಕ್ಕಣ್ಣ, ಮಹಾಲಿಂಗಪ್ಪ, ನಿಂಗಣ್ಣ, ನಾಗರಾಜ, ಶಿವಪ್ಪ, ಮಹೇಶ, ಪಾಶೆಟ್ಟಿ ಪಾಪಯ್ಯ ,ರಾಮಾಂಜನಿ ಬೊಮ್ಮಲಿಂಗನಹಳ್ಳಿ, ರಮೇಶ, ವೆಂಕಟೇಶ, ದಾಸಪ್ಪ, ಶ್ರೀನಿವಾಸ, ಶಿವಮೂರ್ತಿ, ಕಲ್ಲಣ್ಣ, ನಾಗಭೂಷಣ, ಕೃಷ್ಣಮೂರ್ತಿ, ರಾಜಶೇಖರ ನಾಯ್ಕ, ಶಶಿಕುಮಾರ, ಎಲ್ಲಣ್ಣ, ತಿಪ್ಪೇಶಿ, ತಿಪ್ಪೇಸ್ವಾಮಿ ಆಚಾರಿ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...