ಚಿತ್ರದುರ್ಗ | ಜಾತಿ, ಭಾಷೆ, ಧರ್ಮದ ಸಂಕೋಲೆಯಿಂದ ಹೊರಬಂದು ನಾಗರೀಕರಾಗಿದ್ದೇವೆಯೇ: ಚಿಂತಕ ಹರಿರಾಮ್

Date:

“ನಾವು ನಾಗರಿಕ ಪ್ರಪಂಚದಲ್ಲಿ ಬದುಕುತ್ತೇವೆ ಎಂದುಕೊಳ್ಳುತ್ತಿದ್ದೇವೆ. ಆದರೆ ಮಾನಸಿಕವಾಗಿ ನಾಗರೀಕರಾಗಿದ್ದೇವೆಯೇ? ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ. ನಾವು ಇನ್ನೂ ಜಾತಿ, ಭಾಷೆ, ಧರ್ಮ ಇವುಗಳ ಸಂಕೋಲೆ, ಆಲೋಚನೆಗಳಲ್ಲಿ ಸಿಲುಕಿ ಕೊಂಡಿದ್ದೇವೆ. ಇವುಗಳನ್ನು ಮೀರಿ ನಾವು ಹೊರಬಂದು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ವ್ಯಕ್ತಿಯ ಆಲೋಚನೆ ಬದಲಾದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಬದಲಾಗಲು ಸಾಧ್ಯ” ಎಂದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರಿನ ಸಮಾಜ ಪರಿವರ್ತನಾ ವೇದಿಕೆ ಕಾರ್ಯಕ್ರಮದಲ್ಲಿ ವಕೀಲ, ಚಿಂತಕ ಹರಿರಾಮ್ ಅಭಿಪ್ರಾಯಪಟ್ಟರು.

- Advertisement -

ಮೊಳಕಾಲ್ಮೂರು ಸಮಾಜ ಪರಿವರ್ತನಾ ವೇದಿಕೆಯು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪ್ರಥಮ ದರ್ಜೆ ಪದವಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ “ಭೀಮೋತ್ಸವ ಹಾಗೂ ಸಾಧಕರು, ಸಮಾಜ ಸೇವಕರಿಗೆ ಸೇವಾ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 2025” ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಸ್ವಾತಂತ್ರ್ಯ ಪಡೆದ 70 ವರ್ಷದ ನಂತರ ಶೋಷಿತ ವರ್ಗಗಳ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸುತ್ತಿದ್ದೇವೆ.‌ ಈಗ ಅನುಕೂಲ ಪಡೆದುಕೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಕಾರಣ ನಮ್ಮಲ್ಲಿನ ಜ್ಞಾನ ಹೆಚ್ಚಾಗಿರುವುದು, ಅವಕಾಶಗಳು ಹೆಚ್ಚುತ್ತಿರುವುದು. ಸಮಾಜವನ್ನು ಉತ್ತಮಗೊಳಿಸುವ ಆಲೋಚನೆಗಳಿಂದ ನಾವು ಮಕ್ಕಳನ್ನು ಶಾಲೆಗೆ ಕಳಿಸುತ್ತಿದ್ದೇವೆ. ಅದಕ್ಕೆ ಕಾರಣ ಶಿಕ್ಷಣ. ಶಿಕ್ಷಣದಿಂದ ಮಾತ್ರ ಎಲ್ಲಾ ಸಮಾಜದ ಬದಲಾವಣೆ ಸಾಧ್ಯವಾಗಲಿದೆ” ಎಂದು ತಿಳಿಸಿದರು.

“ಶೋಷಿತ ದಲಿತ ವರ್ಗದ ಈ ತಲೆಮಾರಿನ ಮಕ್ಕಳು ಮಾತ್ರ ಉನ್ನತ ಶಿಕ್ಷಣ, ಕೆಲಸ ಪಡೆಯಲು ಸಾಧ್ಯವಾಗಿದೆ. ಹಿಂದಿನ ತಲೆಮಾರುಗಳು ಶಿಕ್ಷಣದಿಂದ ವಂಚಿತರಾಗಿದ್ದರು. ಹಾಗಾಗಿ ಅವಕಾಶವನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು” ಎಂದು ಸಲಹೆ ನೀಡಿದರು.

WhatsApp Image 2025 10 27 at 11.03.11 AM 2

“ಅಂಬೇಡ್ಕರ್ ಹೇಳುವಂತೆ ವಿದ್ಯಾರ್ಥಿಗಳು ಎರಡು ವಿಷಯಗಳನ್ನು ಮೈಗೂಡಿಸಿಕೊಳ್ಳಬೇಕು. ಯಾವುದೇ ವಿದ್ಯಾರ್ಥಿಯು ಕಲಿಕೆ ಸಮಯದಲ್ಲಿ ನಾನು ಯಾವುದೇ ವ್ಯಕ್ತಿಗಿಂತ ಬುದ್ಧಿಶಕ್ತಿ, ಮಾನಸಿಕ ಸಾಮರ್ಥ್ಯದಲ್ಲಿ ಕಡಿಮೆ ಇಲ್ಲ ಎಂದು ತಿಳಿದು ಉತ್ತಮ ಶಿಕ್ಷಣ ಪಡೆಯಬೇಕು. ಮತ್ತು ಉತ್ತಮ ಶಿಕ್ಷಣದ ನಂತರ ಉತ್ತಮ ಸ್ಥಾನಮಾನಕ್ಕೆ ಹೋದಾಗ ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವ ಮತ್ತು ಶೋಷಿತರನ್ನು ಮೇಲೆತ್ತುವ ಕೆಲಸ ಮಾಡಬೇಕು” ಎಂದರು.

WhatsApp Image 2025 10 27 at 10.59.31 AM

“ಇಂದು ಕೇವಲ ಶೇ. 12 ರಿಂದ 14 ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣ ಅಥವಾ ಸಂಪೂರ್ಣ ಶಿಕ್ಷಣದ ಅವಕಾಶವಿದೆ. ಉನ್ನತ ಶಿಕ್ಷಣ ಅಥವಾ ಉದ್ಯೋಗ ಪಡೆಯುವ ಅವಕಾಶಗಳಲ್ಲಿ ಇಂದು ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಅವುಗಳನ್ನು ಎದುರಿಸುವ ಸಾಮರ್ಥ್ಯವನ್ನು ನೈಪುಣ್ಯತೆಯನ್ನು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಪ್ರಾರಂಭದಿಂದಲೇ ಬೆಳೆಸಿಕೊಳ್ಳಬೇಕಿದೆ. ಈ ಪೈಪೋಟಿಗೆ ತಯಾರಿ ಮತ್ತು ಮನಸ್ಸಿಗೆ ಸಿದ್ಧತೆ ಅಗತ್ಯ. ಅದಕ್ಕೆ ತಕ್ಕಂತೆ ನೀವು ಉತ್ತಮ ಸಂವಹನ, ಭಾಷೆ ಕಲಿಕೆ, ಇದರಲ್ಲಿ ಇಂಗ್ಲೀಷ್ ಕಲಿಕೆ ಅತ್ಯವಶ್ಯಕವಾಗಿದೆ” ಎಂದು ಅಭಿಪ್ರಾಯಪಟ್ಟರು

ಸಮಾಜದಲ್ಲಿ ಉತ್ತಮವಾಗಿ ಕಲಿತು ಎಲ್ಲರಿಗೂ “ಸಮಾನವಾಗಿ ಗೌರವಿಸಿ, ಸಮಾನ ಅವಕಾಶ ನೀಡಿದಾಗ ಮಾತ್ರ ನೀವು ಉತ್ತಮ ವಿದ್ಯಾರ್ಥಿಗಳಾಗಲು ಸಾಧ್ಯ. ಪ್ರತಿಭಾವಂತರನ್ನು ಗುರುತಿಸುವ ಕೆಲಸ ಆಗಬೇಕಿದೆ.‌ ಈ ಕೆಲಸ ಮಾಡುತ್ತಿರುವ ಸಮಾಜ ಪರಿವರ್ತನಾ ವೇದಿಕೆಯ ತಂಡದ ಕೆಲಸ ಶ್ಲಾಘನೀಯ” ಎಂದು ಅಭಿಪ್ರಾಯಪಟ್ಟರು.

ಬೇಡರೆಡ್ಡಿಹಳ್ಳಿ ಬಸವ ರೆಡ್ಡಿ ಮಾತನಾಡಿ “ಈ ಹಿಂದೆ ಹಳ್ಳಿಗಳ ಶೋಷಿತ ಜನರಿಗೆ ಅವಕಾಶಗಳನ್ನು ನಿರಾಕರಿಸಲಾಗಿತ್ತು. ಸಂವಿಧಾನವನ್ನು ನಮ್ಮಿಂದ ಮುಚ್ಚಿಡಲಾಗಿತ್ತು. ಹಳ್ಳಿಗಳ ಜನ ಮತ್ತು ಶೋಷಿತರಿಗೆ ಅಂಬೇಡ್ಕರ್ ಮತ್ತು ಸಂವಿಧಾನದ ಪರಿಚಯಿಸಿದ್ದು ದಲಿತ ಚಳುವಳಿ, ರೈತ ಚಳುವಳಿ ಮತ್ತು ಕಾರ್ಮಿಕ ಚಳುವಳಿಗಳು. ಇಂದು ನಾವು ಬೀದಿಯಲ್ಲಿ ನಿಂತು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ ಎಂದರೆ ಅದಕ್ಕೆ ಮೂಲ ಕಾರಣ ಅಂಬೇಡ್ಕರ್ ಮತ್ತು ಸಂವಿಧಾನ” ಎಂದು ಅಭಿಪ್ರಾಯಪಟ್ಟರು.

ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಯೋಗೇಶ್ ಬಾಬು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ಬುದ್ಧ ಬಸವ ಅಂಬೇಡ್ಕರ್ ಸಮಾಜಕ್ಕೆ ಸಮಾನತೆಯ ದಾರಿ ತೋರಿಸಿದ್ದಾರೆ. ಸಮಾಜದ ಪರಿವರ್ತನೆಗೆ ಕಾರಣರಾಗಿದ್ದಾರೆ. ಇಂದು ನಾವು ಹೊರಗೆ ಬಂದು ವಿದ್ಯಾಭ್ಯಾಸ ಪಡೆದು ಮಾತನಾಡುತ್ತಿರುವ ಅವಕಾಶ ನೀಡಿರುವುದು ಅಂಬೇಡ್ಕರ್ ಆದಿಯಾಗಿ ಈ ಮಹನೀಯರು” ಎಂದು ಅಭಿಪ್ರಾಯಪಟ್ಟರು.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರಾಜಕಾರಣಿಗಳಿಗೆ ಕಿವುಡುತನ ಹೆಚ್ಚು, ಕೇಳಿಸಲು ಹೋರಾಟ ಮಾಡಿ: ಬಸವಕುಮಾರ ಶ್ರೀ

ಕಾರ್ಯಕ್ರಮದಲ್ಲಿ ಉತ್ತಮ ಅಂಕ ಪಡೆದ ಹತ್ತನೇ ತರಗತಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...