ಚಾಲಕನ ನಿಯಂತ್ರಣ ಕಳೆದುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಒಂದು ರಸ್ತೆ ಬದಿಯಲ್ಲಿದ್ದ ನಾಮಫಲಕಕ್ಕೆ ಅಪ್ಪಳಿಸಿದ್ದು, ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನೆಡೆದಿದೆ.
ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಖಂಡೇನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ರಸ್ತೆ ಪಕ್ಕದ ನಾಮಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಯಾದಗಿರಿ ಯಿಂದ ಬಳ್ಳಾರಿ, ಚಳ್ಳಕೆರೆ ಮಾರ್ಗದಲ್ಲಿ ಬೆಂಗಳೂರಿಗೆ ಬಸ್ಸು ತೆರಳುತ್ತಿತ್ತು ಎನ್ನಲಾಗಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮುಂಬಾಗ ಕುಳಿತಿದ್ದ, ಬಸ್ಸಿನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತ ವ್ಯಕ್ತಿಯನ್ನು ಶಹಾಪುರದ ಶಿವಪ್ಪ ಎಂದು ಗುರುತಿಸಲಾಗಿದೆ. 26 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಳ್ಳಕೆರೆ ತಾಲ್ಲೂಕು, ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹರಿದ ನೆತ್ತರು, ರೌಡಿಶೀಟರ್ ಬರ್ಬರ ಕೊಲೆ.
ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ವಿಚಾರಣೆ ಮುಂದುವರಿದಿದೆ.