ಚಿತ್ರದುರ್ಗ | ಸ್ವಚ್ಛತೆ ಕೊರತೆ ಅನೈರ್ಮಲ್ಯ; ಕ್ರಮ ಕೈಗೊಳ್ಳದ ಗ್ರಾ. ಪಂ. ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

Date:

ವಾಲ್ಮೀಕಿ ಭವನ, ಆಂಜನೇಯ ದೇವಸ್ಥಾನ, ನೀರಿನ ತೊಟ್ಟಿ, ಊರಿನ ಚರಂಡಿಗಳು ಸೇರಿದಂತೆ ಸ್ವಚ್ಛತೆ ಇಲ್ಲದೇ ನೈರ್ಮಲ್ಯದ ಕೊರತೆ ಎದುರಿಸುತ್ತಿರುವ, ದುರ್ವಾಸನೆಯಿಂದ ಬೇಸತ್ತಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮತ್ತು ತಾಲೂಕು ಪಂಚಾಯತಿಗೆ ಮನವಿ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
WhatsApp Image 2025 09 28 at 9.33.22 PM 2

ಮನವಿ ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ʼʼದೊಡ್ಡ ಉಳಾರ್ತಿ ಗ್ರಾಮದ ವಾಲ್ಮೀಕಿ ಭವನದ ಹತ್ತಿರವಿರುವ ಬಾವಿಯಲ್ಲಿ ಗಿಡ ಬೆಳೆದು ಪಾಳು ಬಿದ್ದಿದ್ದು, ಬಾವಿಯಲ್ಲಿರುವ ನೀರು ಮಲಿನಗೊಂಡು ದುರ್ವಾಸನೆ ಬೀರುತ್ತಿದ್ದು, ಸುತ್ತಮುತ್ತ ಇರುವ ಮನೆಗಳು ವಾಸ ಮಾಡಲು ಕಷ್ಟವಾಗಿದೆ. ಅಲ್ಲದೆ ಗೊಲ್ಲರಹಟ್ಟಿಯ ಆಂಜನೇಯ ದೇವಸ್ಥಾನದಿಂದ ಕುಡಿಯುವ ನೀರಿನ ಘಟಕದ ಹತ್ತಿರದವರೆಗೂ ಚರಂಡಿ ಸ್ವಚ್ಛತೆ ಮಾಡದೆ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ಇದರಿಂದ ರಸ್ತೆಯಲ್ಲಿ ಕೊಳಚೆ ನೀರು ತುಂಬಿಕೊಂಡಿದ್ದು, ಸಾರ್ವಜನಿಕರಿಗೆ ರೋಗರುಜಿನದ ಭೀತಿ ಎದುರಾಗಿದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼʼಚಳ್ಳಕೆರೆ ರಸ್ತೆಯ ಹೋಟೆಲ್ ಬಳಿ ಇರುವ ನೀರಿನ ತೊಟ್ಟಿ ಮುರಿದು ಬಿದ್ದು ತಿಂಗಳಾಗುತ್ತಾ ಬಂದರೂ ಸರಿ ಮಾಡಿಸದೆ ಪಶುಪಕ್ಷಿ, ದನಕರುಗಳಿಗೆ ಕುಡಿಯಲು ನೀರು ಇಲ್ಲದೆ ಪರದಾಡುವಂತಾಗಿದೆ. ಅಲ್ಲದೆ ಸಾಕಷ್ಟು ದೂರು ನೀಡಿದರೂ, ಗ್ರಾಮದ ಚರಂಡಿಗಳನ್ನು ಸ್ವಚ್ಛತೆ ಮಾಡಿಸದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದು, ಇದರಿಂದ ಗ್ರಾಮದಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆʼʼ ಎಂದು ಕಿಡಿಕಾರಿದ್ದಾರೆ.

WhatsApp Image 2025 09 28 at 9.33.21 PM

ಈ ಕುರಿತು ಮಾತನಾಡಿದ ಗ್ರಾಮದ ಮುಖಂಡರು “ಬಾವಿಯನ್ನು ಮತ್ತು ಕುಡಿಯುವ ನೀರಿನ ಘಟಕದ ಬಳಿಯ ಚರಂಡಿ ಹಾಗೂ ಊರಿನ ಚರಂಡಿಗಳನ್ನು ಸ್ವಚ್ಚ ಮಾಡಿಸಲು ಹಲವು ಬಾರಿ ಮನವಿ ನೀಡಿದರೂ, ಗ್ರಾಮ ಪಂಚಾಯಿತಿಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸಿದ್ದಾರೆ. ಸ್ವಚ್ಛತೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಈ ಅಧಿಕಾರಿಗಳನ್ನು ಬೇರೆಡೆ ವರ್ಗಾವಣೆ ಮಾಡಿ ಉತ್ತಮ ಅಧಿಕಾರಿಗಳನ್ನು ನೇಮಿಸಬೇಕುʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾರಕ ಆಯುಧದೊಂದಿಗೆ ಓಡಾಟ: ಆತಂಕ ಭಯ ಹುಟ್ಟಿಸಿದ ವ್ಯಕ್ತಿ ಬಂಧಿಸಿದ ಪೊಲೀಸರು

ದೊಡ್ಡ ಉಳ್ಳಾರ್ತಿ ಗ್ರಾಮದ ಮಂಜುನಾಥ ಕೆ ಎಲ್, ಶ್ರೀನಿವಾಸ, ಓಬಳೇಶಪ್ಪ, ತಿಪ್ಪೇಸ್ವಾಮಿ, ಬೋರಯ್ಯ, ಶಿವಣ್ಣ, ಅಮಿತ್, ಲೋಹಿತ್ ಕುಮಾರ್, ಅಜಯ್ ಕುಮಾರ್, ರಾಮಣ್ಣ, ನಾಗರಾಜ, ಪಾಲನಾಯಕ, ತಿಪ್ಪೇಶ, ರಾಜಪ್ಪ, ಶಶಿಕುಮಾರ, ಮಂಜುನಾಥ ಬಿ, ಅಪ್ಪು, ನರಸಿಂಹ ವಿನೋದ್ ಶಿವಶಂಕರ್ ರಾಜಣ್ಣ ಎಚ್, ನರಸಿಂಹ ಪಾಟೀಲ್, ತಿಪ್ಪೇಸ್ವಾಮಿ ಟಿ, ರಮೇಶ, ಮಹಾಂತೇಶ, ಭೀಮಪ್ಪ, ಭರತೇಶ್, ಗೌರೀಶ್, ತಿಪ್ಪಯ್ಯ, ಮಂಜುನಾಥ, ರವಿತೇಜ ನಾಯಕ, ದರ್ಶನ್, ಪ್ರಕಾಶ್, ಹೇಮಣ್ಣ ಸೇರಿದಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...