ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

Date:

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು, ಚಿರತೆ ದಾಳಿಗೆ ಮಹಿಳೆಗೆ ಹೆಚ್ಚಿನ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ.

- Advertisement -

ಭಾನುವಾರ ಮುಂಜಾನೆ ಎಂದಿನಂತೆ ಹೊಲಕ್ಕೆ ಹೋಗಿದ್ದ ತನುಜಾ ಗಂಡ ತಿಪ್ಪೇಸ್ವಾಮಿ ಹಾಗೂ ಇತರೆ 10 ಜನರು ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವಾಗ ತನುಜಾ ಮೇಲೆ ಇದ್ದಕ್ಕಿದ್ದಂತೆ ಒಂದು ಚಿರತೆ ಹಾಗೂ ಎರಡು ಮರಿಗಳು ದಾಳಿ ನಡೆಸಿವೆ.‌ ಮಹಿಳೆ ಕೂಗಾಟ ಕೇಳಿ ಪಕ್ಕದಲ್ಲಿದ್ದವರು ಸಹಾಯಕ್ಕೆ ಓಡಿಬಂದ ಹಿನ್ನೆಲೆಯಲ್ಲಿ ಚಿರತೆ ಓಡಿಹೋಗಿವೆ.‌ ಚಿರತೆ ದಾಳಿಗೊಳಗಾದ ಮಹಿಳೆ ತನುಜ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಚಿರತೆ ದಾಳಿ ನಡೆಸಿದ ಹಿನ್ನಲೆಯಲ್ಲಿ ತಲೆ, ಮೈ, ಕೈ, ಮುಖ ಸಂಪೂರ್ಣವಾಗಿ ರಕ್ತ ಸುರಿದು ಗಾಯಗೊಂಡಿದ್ದು ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1002523398

ಅರಣ್ಯ ಇಲಾಖೆ ವಿರುದ್ಧ ಸ್ಥಳೀಯ ಆಕ್ರೋಶ;
ಹೊಳಲ್ಕೆರೆ ತಾಲ್ಲೂಕು ಗಿಲಿಕೇನಹಳ್ಳಿ ಸೇರಿ ಸುತ್ತಮುತ್ತಲ ಗ್ರಾಮದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದೆ ಎಂದು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿ ಸತೀಶ್ ಇವರಿಗೆ ಸಾಕಷ್ಟು ಬಾರಿ ಮಾಹಿತಿ ನೀಡಿ ಚಿರತೆಗಳನ್ನು ನಿಯಂತ್ರಿಸುವಂತೆ ಹಾಗೂ ಜನ ಹಾಗೂ ಜಾನುವಾರುಗಳ ಮೇಲೆ ದಾಳಿ ನಡೆಸದಂತೆ ಎಚ್ಚರಿಕೆಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಸಾಕಷ್ಟು ಮಾಹಿತಿ ನೀಡಿದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಚಿರತೆಗಳ ಹಾವಳಿ ಹೆಚ್ಚಾಗಿದೆ. ಚಿರತೆ ಹಾಗೂ ಕರಡಿಗಳು ಜೀವಹಾನಿ ಮಾಡುವ ಮೊದಲೇ ನಿಯಂತ್ರಣ ಮಾಡಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ದಾಳಿಗೆ ತುತ್ತಾಗಿರುವ ಮಹಿಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕುರಿಗಾಹಿಯಿಂದ ಧ್ವಜಾರೋಹಣ; ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ

ಹೊಳಲ್ಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಚೇತನ್, ಸೇರಿದಂತೆ ಇತರರು ಹೊಳಲ್ಕೆರೆ ತಾಲೂಕ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಚಿತ್ರದುರ್ಗ | ನಿವೃತ್ತಿಯಲ್ಲೂ ಆಡಳಿತ ತರಬೇತಿ ಸೇವೆ : ವಿ. ಮಲ್ಲೇಶಪ್ಪ ಅವರಿಗೆ ಸನ್ಮಾನ

 ನಿವೃತ್ತಿಯ ನಂತರವೂ ತಮ್ಮ ಜ್ಞಾನ ಮತ್ತು ಅನುಭವವನ್ನು ಸರ್ಕಾರಿ ಅಧಿಕಾರಿ ಹಾಗೂ...