ಚಿತ್ರದುರ್ಗ | ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ತಿದ್ದುಪಡಿ ಮಸೂದೆ ಹಿಂಪಡೆಯಲಿ: ಕೆ ಆರ್ ಎಸ್

Date:

“ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ವ್ಯಾಪಕವಾಗಿ ಹಣವನ್ನು ದೋಚಲಾಗುತ್ತಿದೆ ಎನ್ನುವ ಕಾರಣ ನೀಡಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಕೇಂದ್ರ ಸರ್ಕಾರದಿಂದ ಅನುದಾನ ಪಡೆಯುವಲ್ಲಿ, ಯೋಜನೆಗಳಲ್ಲಿ ನಿರಂತರವಾಗಿ ಅನ್ಯಾಯಕ್ಕೊಳಗಾಗುತ್ತಿರುವ ಕರ್ನಾಟಕಕ್ಕೆ ಈ ತಿದ್ದುಪಡಿಯು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಹಿನ್ನೆಡೆಯನ್ನು ಮಾಡುತ್ತದೆ. ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ತಿದ್ದುಪಡಿ ಮಾಡಿ ವಿಜಿ ರಾಮ್ ಜಿ ಮಸೂದೆ ಜಾರಿಗೆ ತರುವುದನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆ ಆರ್ ಎಸ್) ಪಕ್ಷದ ಚಿತ್ರದುರ್ಗ ಘಟಕ ಆಗ್ರಹಿಸಿದೆ.

- Advertisement -

ಚಿತ್ರದುರ್ಗದಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಮಹೇಶ್ ನಗರಂಗೆರೆ, “ಸಂಪೂರ್ಣ ಕೇಂದ್ರ ಪ್ರಾಯೋಜಿತ ಯೋಜನೆಗೆ ಕೇಂದ್ರ ಸರ್ಕಾರ ತನ್ನ ಅನುದಾನ ಕಡಿತ ಮಾಡಿ ರಾಜ್ಯಗಳ ಮೇಲೆ ಹೊರೆ ಹಾಕುವುದರಿಂದ ಭ್ರಷ್ಟಾಚಾರ ಕಡಿಮೆಯಾಗುವುದಿಲ್ಲ. ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳೂ ಸೇರಿ ವಿರೋಧ ಪಕ್ಷಗಳ ಭಾಗವಹಿಸುವಿಕೆ ಬಹಿರಂಗ ಸತ್ಯವಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...
1003335643
Oplus_131072

“ದೇಶದ ಬಹುತೇಕ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವುದು ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು, ಅಂದರೆ, ತನ್ನದೇ ಪಕ್ಷದವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದಿದ್ದರೂ, ಭ್ರಷ್ಟಾಚಾರ ತನಿಖೆಗೆ ತನಿಖಾ ಸಂಸ್ಥೆಗಳನ್ನು ಬಳಸುವ ಬದಲು, ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಬಳಸಲಾಗುತ್ತಿದೆ” ಎಂದು ಅವರು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನರೇಗಾ ಬದಲಿಗೆ ವಿಜಿ ರಾಮ್ ಜಿ ಮಸೂದೆಗೆ ಗ್ರಾಮಿಣ ಕೂಲಿಕಾರರ ಸಂಘಟನೆ ವಿರೋಧ

“ಉದ್ಯೋಗ ಖಾತ್ರಿ ಮತ್ತು ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ನೀಡಬೇಕಾದ ತನ್ನ ಪಾಲಿನ ಅನುದಾನದ ಬಿಡುಗಡೆಯಲ್ಲಿ ನಿರಂತರವಾಗಿ ವಿಳಂಬ ಮಾಡಿ, ರಾಜ್ಯಗಳನ್ನು ಆರ್ಥಿಕ ಸಂಕಷ್ಟಕ್ಕೆ ದೂಡಲಾಗುತ್ತಿದೆ. ಯೋಜನೆಗಳಲ್ಲಿ ತನ್ನ ಪಾಲು ಸಣ್ಣದಿದ್ದರೂ ಕೂಡಾ ಕೂಡ ಹೆಸರು ಮಾತ್ರ ಒಕ್ಕೂಟ ಸರ್ಕಾರದ್ದೇ ಇರಬೇಕು ಮತ್ತು ಆ ಮೂಲಕ ಪ್ರಚಾರ ಪಡೆದುಕೊಳ್ಳುವ ಕುತಂತ್ರವೂ ಇದರಲ್ಲಿ ಮತ್ತೊಮ್ಮೆ ಕಂಡುಬರುತ್ತಿದೆ. , ಈ ಯೋಜನೆಯಲ್ಲಿ ನಡೆಯುತ್ತಿರುವ ಮಹಾ ಭ್ರಷ್ಟಾರವನ್ನು ತಡೆಯಲು ವ್ಯಾಪಕ ಅವಕಾಶಗಳಿದ್ದು, ಅವನ್ನು ಬಳಸಿಕೊಂಡು ಸಾರ್ವಜನಿಕ ಹಣ ಸಧ್ಬಳಕೆಯಾಗುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಕೂಡ ಆಗ್ರಹಿಸುತ್ತದೆ. ಯೋಜನೆ ತಿದ್ದುಪಡಿ ಮಾಡಿ ‘ವಿಜಿ ರಾಮ್ ಜಿ’ ಮಸೂದೆ ಜಾರಿಗೆ ತರುವುದನ್ನು ತಕ್ಷಣವೇ ನಿಲ್ಲಿಸಬೇಕು, ಭ್ರಷ್ಟಾಚಾರ ತಡೆಗೆ ಕಠಿಣ ಕ್ರಮ ಕೈಗೊಂಡು ಸಾರ್ವಜನಿಕ ಹಣದ ಸದ್ಭಳಕೆಗೆ ಮುಂದಾಗಬೇಕು” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...