ಚಿತ್ರದುರ್ಗ | ನಗರಸಭೆಯಿಂದ ನೈರ್ಮಲ್ಯ ಕಾಪಾಡಲು ಹೋಟೆಲ್ ಗಳಲ್ಲಿ ಆಹಾರ ತಯಾರಿಕೆ ಪರಿಶೀಲನೆ, ಎಚ್ಚರಿಕೆ

Date:

ಚಳ್ಳಕೆರೆ ನಗರಸಭೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೋಟೆಲ್ ಗಳಿಗೆ ಭೇಟಿ ನೀಡಿ ಆಹಾರ ತಯಾರಿಕೆ, ಶುಚಿತ್ವ ಮತ್ತು ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಹೋಟೆಲ್ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿ, ನೈರ್ಮಲ್ಯ ಸ್ವಚ್ಛತೆ ಕಾಪಾಡದ ಹೋಟೆಲ್ ಮುಚ್ಚಿಸಿ ಎಚ್ಚರಿಕೆ ನೀಡಿದ್ದಾರೆ.

- Advertisement -
1002345032
ಮಾಧ್ಯಮಕ್ಕೆ ನಗರಸಭೆ ಅಧ್ಯಕ್ಷೆ ಮತ್ತು ಸದಸ್ಯರು ಮಾಹಿತಿ ನೀಡುತ್ತಿರುವುದು

ಶನಿವಾರ ಬೆಳ್ಳಂಬೆಳಗ್ಗೆ ನಗರದ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಚಳ್ಳಕೆರೆಯ ನೆಹರು ವೃತ್ತದ ಬಳಿ, ರಸ್ತೆ ಬದಿಯಲ್ಲಿರುವ ಹೋಟೆಲ್ ಗಳಿಗೆ ಭೇಟಿ ನೀಡಿದ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ನಗರಸಭೆಯ ಆಯುಕ್ತರು, ಆಹಾರ ಆರೋಗ್ಯ ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅನೇಕ ಹೋಟೆಲ್ಗಳಲ್ಲಿ ಶುಚಿತ್ವ ಕಾಪಾಡದ ಮತ್ತು ಅನೈರ್ಮಲ್ಯ ಆಹಾರ ವ್ಯವಸ್ಥೆ ಕಂಡು ಬಂದಿದೆ. ಆಹಾರ ತಯಾರಿಕೆಯಲ್ಲಿ ಶುಚಿತ್ವ ಕಾಪಾಡದೇ ಕಳಪೆ ಕಾಳು, ತರಕಾರಿಗಳನ್ನು ಬಳಸದಿರುವುದು ಕೂಡ ಕಂಡು ಬಂದಿದೆ ಎಂದು ನಗರಸಭೆಯ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...
1002347327

ಈ ನೆಲೆಯಲ್ಲಿ ಶುಚಿತ್ವ ಕಾಪಾಡದ ಹೋಟೆಲ್ಗಳಿಗೆ ಗಂಭೀರ ಎಚ್ಚರಿಕೆ ನೀಡಿ ಹೋಟೆಲ್ಗಳನ್ನು ಮುಚ್ಚುವಂತೆ ತಿಳಿಸಲಾಗಿದೆ. ನೆಹರು ವೃತ್ತದ ಬಳಿಯ ಹೋಟೆಲ್ ಅಂದರಲ್ಲಿ ಗಂಭೀರ ವಾದ ಅನೈರ್ಮಲ್ಯ ವ್ಯವಸ್ಥೆ ಮತ್ತು ಆಹಾರ ತಯಾರಿಕೆಯಲ್ಲಿ ಲೋಪ ಕಂಡು ಬಂದಿರುವ ಹಿನ್ನೆಲೆಯಲ್ಲಿ ಹೋಟೆಲನ್ನು ಬಂದ್ ಮಾಡಿಸಿದರು. ಅಲ್ಲದೆ ಹೋಟೆಲ್ ಮಾಲೀಕರು, ಕೆಲಸಗಾರರು ಮತ್ತು ಸಾರ್ವಜನಿಕರಲ್ಲಿ ನೈರ್ಮಲ್ಯ ಮತ್ತು ಉತ್ತಮ ಆಹಾರ, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ಮುಂದಿನ ದಿನಗಳಲ್ಲಿ ಉತ್ತಮ ಶುಚಿತ್ವ ಮತ್ತು ಆಹಾರದ ನೈರ್ಮಲ್ಯ ಕಾಪಾಡಬೇಕು. ಇಲ್ಲವಾದಲ್ಲಿ ಗಂಭೀರ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ಭೇಟಿಯ ಮತ್ತು ಪರಿಶೀಲನೆ ಸಮಯದಲ್ಲಿ ಹೋಟೆಲ್ ಮಾಲೀಕರಿಗೆ ಎಚ್ಚರಿಕೆಯಾಗಿ ನೀಡಿದ್ದಾರೆ.

1002347326

ಈ ವೇಳೆ ಸ್ಥಳೀಯ ಮಾಧ್ಯಮವೊಂದಕ್ಕೆ ಮಾತನಾಡಿದ ನಗರಸಭೆ ಅಧ್ಯಕ್ಷೆ ಶಿಲ್ಪ ಮುರಳಿ,”ನಗರಸಭೆಯ ಉಪಾಧ್ಯಕ್ಷರು, ಆಯುಕ್ತರು, ಸ್ಥಾಯಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳ ತಂಡದೊಂದಿಗೆ ಸ್ವಚ್ಛತೆ ಮೂಡಿಸುವ ಸಲುವಾಗಿ ನಗರದ ಹೋಟೆಲ್ಗಳಿಗೆ ಮತ್ತು ತಿಂಡಿ ತಯಾರಿಕೆ ಸ್ಥಳಗಳಿಗೆ ಭೇಟಿ ನೀಡಿದ್ದು, ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಹಲವೆಡೆ ಸ್ವಚ್ಛತೆಯ ಕೊರತೆ ಕಂಡು ಬಂದಿದ್ದು ಎಚ್ಚರಿಕೆ ನೀಡಿದ್ದೇವೆ. ನಗರದ ಮಧ್ಯಭಾಗದ ಹೋಟೆಲ್ ಒಂದರಲ್ಲಿ ಆಹಾರ ತಯಾರಿಕೆಯ ಎಲ್ಲಿ ಸ್ವಚ್ಛತೆ ಮತ್ತು ಕಳಪೆ ತಯಾರಿಕೆ ಕಂಡು ಬಂದಿದ್ದು ಎಚ್ಚರಿಕೆ ನೀಡಿ ಹೋಟೆಲ್ ಅನ್ನು ಮುಚ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ನಗರದ ಎಲ್ಲಾ ಹೋಟೆಲ್ ಮಾಲೀಕರು ಆಹಾರದಲ್ಲಿ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಗಮನ ಹರಿಸಬೇಕು. ಇಲ್ಲವಾದಲ್ಲಿ ನಗರಸಭೆಯಿಂದ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

1002347328

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ

ಪರಿಶೀಲನೆ ಸಮಯದಲ್ಲಿ ನಗರಸಭೆಯ ತಂಡದಲ್ಲಿ ಉಪಾಧ್ಯಕ್ಷೆ ಕವಿತಾ ಬೋರಯ್ಯ, ಸದಸ್ಯೆ ಮತ್ತು ಮಾಜಿ ಅಧ್ಯಕ್ಷೆ ಮಂಜುಳಾ ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ್, ನಗರಸಭೆ ಆಯುಕ್ತ ಜಗಾರೆಡ್ಡಿ, ಅಧಿಕಾರಿ, ಸತೀಶ್, ಆರೋಗ್ಯ ಅಧಿಕಾರಿಗಳಾದ ಮಹಾಲಿಂಗಪ್ಪ, ಗಣೇಶ್, ಸಿಬ್ಬಂದಿಗಳಾದ ಭದ್ರಪ್ಪ, ಮಹಾಂತೇಶ ಸೇರಿದಂತೆ ಇತರ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...