ಚಿತ್ರದುರ್ಗ ನಿರ್ಮಿತಿ ಕೇಂದ್ರ: ಮಾಹಿತಿ ಹಕ್ಕು ಕಾಯಿದೆಯನ್ನೇ ಬುಡಮೇಲು ಮಾಡಿದ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್

Date:

ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ಜಾರಿಯಲ್ಲಿರುವ ‘ಮಾಹಿತಿ ಹಕ್ಕು ಕಾಯಿದೆ 2005’ನ್ನು ಚಿತ್ರದುರ್ಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್ ತಮ್ಮ ಸ್ವಂತ ಜಾಗೀರು ಎಂಬಂತೆ ಬಳಸಿಕೊಳ್ಳುತ್ತಿದ್ದಾರೆ. ಮಾಹಿತಿ ಕೇಳುವ ಅರ್ಜಿದಾರರನ್ನು ಬೆದರಿಸಲು ಕಾಯಿದೆಯಲ್ಲೇ ಇಲ್ಲದ ʼಕಪ್ಪು ಪಟ್ಟಿʼ ನಿಯಮವನ್ನು ಮುಂದಿಟ್ಟುಕೊಂಡು ಅಪ್ಪಟ ಸುಳ್ಳು ಹೇಳುವ ಮೂಲಕ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ದಾಖಲೆಗಳಿಂದ ಬಟಾಬಯಲಾಗಿದೆ.

- Advertisement -

ಬೆಂಗಳೂರಿನ ಯಶವಂತಪುರದ ನಿವಾಸಿ ಸಿ ಪಿ ತಿಪ್ಪೇಸ್ವಾಮಿ ಎಂಬುವರು ಚಿತ್ರದುರ್ಗ ನಿರ್ಮಿತಿ ಕೇಂದ್ರದ ಕಾಮಗಾರಿಗಳ ಅನುಷ್ಠಾನದ ಬಗ್ಗೆ 2023ರ ನವೆಂಬರ್‌ 2ರಂದು ಒಟ್ಟು 09 ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ಮುಕ್ತಾಯಗೊಳಿಸಿ 2026ರ ಫೆಬ್ರವರಿ 20ರಂದು ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್ ಹಿಂಬರಹ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

​ಈ ಹಿಂಬರಹದಲ್ಲಿ ಹರೀಶ್ ಕುಮಾರ್ ಅತ್ಯಂತ ದುಸ್ಸಾಹಸ ಹಾಗೂ ಸುಳ್ಳು ಕಾರಣವನ್ನು ನೀಡಿದ್ದಾರೆ. ʼಮಾಹಿತಿ ಆಯೋಗವು ಅರ್ಜಿದಾರ ತಿಪ್ಪೇಸ್ವಾಮಿ ಅವರಿಗೆ ತಲಾ ₹1000 ದಂಡ ವಿಧಿಸಿ, ಅವರನ್ನು ‘ಕಪ್ಪು ಪಟ್ಟಿಗೆ’ ಸೇರಿಸಿದೆ. ಹೀಗಾಗಿ ಅವರ ಯಾವುದೇ ಅರ್ಜಿ/ದೂರುಗಳನ್ನು ಸ್ವೀಕರಿಸಬಾರದೆಂದು ನಿರ್ದೇಶಿಸಿದೆʼ ಎಂದು ಹೇಳಿ ಮಾಹಿತಿಯನ್ನು ನಿರಾಕರಿಸಿದ್ದಾರೆ.‌

ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಈ ನಡೆಯ ಸಂಪೂರ್ಣ ಬಣ್ಣವನ್ನು ‘ಕರ್ನಾಟಕ ಮಾಹಿತಿ ಆಯೋಗ’ದ ಅಧಿಕೃತ ಹಿಂಬರಹಗಳೇ ಬಯಲು ಮಾಡಿವೆ. ​ಆಯೋಗದ ಹಿಂಬರಹ 2025ರ ಸೆಪ್ಟೆಂಬರ್ 26‌ ರಲ್ಲಿ ಡಿಲ್ಲಿಬಾಬು.ಎ ಅವರಿಗೆ ಮಾಹಿತಿ ಆಯೋಗ ನೀಡಿರುವ ಹಿಂಬರಹದಲ್ಲಿ, ʼಆರ್.ಟಿ.ಐ ಕಾರ್ಯಕರ್ತರನ್ನು ಶಾಶ್ವತವಾಗಿ ಕಪ್ಪು ಪಟ್ಟಿಗೆ ಸೇರಿಸಲು ಮಾಹಿತಿ ಹಕ್ಕು ಕಾಯಿದೆ 2005ರಲ್ಲಿ ಯಾವುದೇ ಕಲಂ/ಸೆಕ್ಷನ್‌ನಲ್ಲಿ ಅವಕಾಶವಿಲ್ಲʼ ಎಂದು ಸ್ಪಷ್ಟವಾಗಿ ತಿಳಿಸಿದೆ.

Untitled design 39 1

​ಆಯೋಗದ 2026ರ ಜನವರಿ 27ರ ಹಿಂಬರಹ ಪಿ. ದೀಪ ಅವರಿಗೆ ನೀಡಿರುವ ಮತ್ತೊಂದು ಹಿಂಬರಹದಲ್ಲಿ, ʼಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸುವುದು ಹಾಗೂ ಒಂದು ಅರ್ಜಿಗೆ ಒಂದು ಸಾವಿರ ದಂಡ ವಿಧಿಸುವುದಕ್ಕೆ ಕಾಯಿದೆಯಲ್ಲಿ ಅವಕಾಶ ಇರುವ ಕುರಿತು ಯಾವುದೇ ಉಲ್ಲೇಖವಿಲ್ಲʼ ಎಂದು ಆಯೋಗವೇ ಲಿಖಿತವಾಗಿ ಸ್ಪಷ್ಟಪಡಿಸಿದೆ.

ಮಾಹಿತಿ ಹಕ್ಕು ಕಾಯಿದೆಯ ಸರ್ವೋಚ್ಛ ಸಂಸ್ಥೆಯಾದ ‘ಮಾಹಿತಿ ಆಯೋಗ’ವೇ ಕಾಯಿದೆಯಲ್ಲಿ ʼಕಪ್ಪು ಪಟ್ಟಿʼ ಎಂಬ ಪದವೇ ಇಲ್ಲ ಎಂದ ಮೇಲೆ, ಚಿತ್ರದುರ್ಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಈ ನಿಯಮ ಎಲ್ಲಿಂದ ಸಿಕ್ಕಿತು? ನಿರ್ಮಿತಿ ಕೇಂದ್ರದಲ್ಲಿ ನಡೆದಿರಬಹುದಾದ ಅಕ್ರಮಗಳು, ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿಗಳ ಮಾಹಿತಿ ಹೊರಬರಬಾರದು ಎಂಬ ಏಕೈಕ ದುರುದ್ದೇಶದಿಂದ ಹರೀಶ್ ಕುಮಾರ್ ಇಲ್ಲಸಲ್ಲದ ಸುಳ್ಳು ನೆಪಗಳನ್ನು ಹೇಳಿ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಈ ಭ್ರಷ್ಟಾಚಾರದ ಆರೋಪಗಳಿಗೆ ಪುಷ್ಠಿ ನೀಡುವಂತೆ, ಏಪ್ರಿಲ್ 7ರಂದು ಇದೇ ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ, ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತನಿಖೆ ಕೈಗೊಂಡಿದ್ದಾರೆ ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿ ಕಾಯಿದೆಯನ್ನು ಗೌರವಿಸಬೇಕಾದ ಅಧಿಕಾರಿಯೇ, ಆಯೋಗದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಹಿಂಬರಹ ನೀಡಿರುವುದು ಗಂಭೀರ ಅಪರಾಧವಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೇಂದ್ರ ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಅಕ್ರಮ ಆರೋಪ: ರಾಜ್ಯ-ಕೇಂದ್ರ ಮಟ್ಟದಲ್ಲಿ ತೀವ್ರ ಚರ್ಚೆ

​ತಮ್ಮ ಆಡಳಿತ ವೈಫಲ್ಯ ಹಾಗೂ ಕೇಂದ್ರದ ಅವ್ಯವಹಾರಗಳನ್ನು ಮುಚ್ಚಿಟ್ಟುಕೊಳ್ಳಲು ಮಾಹಿತಿ ಹಕ್ಕು ಕಾಯಿದೆಯ ಕತ್ತು ಹಿಸುಕುತ್ತಿರುವ ಯೋಜನಾ ನಿರ್ದೇಶಕ ಹರೀಶ್ ಕುಮಾರ್ ಬಿ ಎಸ್ ಅವರ ಈ ಸರ್ವಾಧಿಕಾರಿ ನಡೆಯನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಮಾಹಿತಿ ಆಯುಕ್ತರು ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಇಂತಹ ಭ್ರಷ್ಟ ಅಧಿಕಾರಿಯ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಾಗೃತ ನಾಗರಿಕರು ಒತ್ತಾಯಿಸಿದ್ದಾರೆ.

ವರದಿ : ಜಗದೀಶ್‌ ನಗರಕೆರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ದೆಹಲಿ ಚಲೋ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...