ಚಿತ್ರದುರ್ಗ | ಪೊಕ್ಸೋ ಪ್ರಕರಣ ಕೋರ್ಟ್ ತೀರ್ಪು; ಮುರುಘಾ ಶರಣರಿಗೆ ಬಿಗ್ ರಿಲೀಫ್

Date:

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎರಡು ಪೊಕ್ಸೋ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಮೊದಲ ಪ್ರಕರಣದ ಕೋರ್ಟ್ ತೀರ್ಪು ಹೊರಬಿದ್ದಿದ್ದು, ಮುರುಘಾ ಶರಣರಿಗೆ ಬಿಗ್​​ ರಿಲೀಫ್​​​​ ನೀಡಿದೆ. ಚಿತ್ರದುರ್ಗದ 2ನೇ ಅಡಿಷನಲ್ ಸೆಷನ್ಸ್ ಕೋರ್ಟ್ ನಿರ್ದೋಷಿ ಎಂದು ಆದೇಶ ನೀಡಿದ್ದು, 2022ರ ಆಗಸ್ಟ್​​ 26ರಂದು ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಸಿದ್ಧ ವೈಚಾರಿಕ ಮಠವೊಂದರ ಶರಣರ ಮೇಲೆ ದಾಖಲಾಗಿದ್ದ ಆರೋಪ ಹಾಗೂ ಪ್ರಕರಣ ದೇಶದ ಗಮನ ಸೆಳೆದಿತ್ತು.‌

- Advertisement -
murugha mutt file photo 1 1141503 166211800816684143861670931044

ಮೊದಲ ಪೋಕ್ಸೋ ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ತೀರ್ಪು ಹೊರಬಿದ್ದಿದ್ದು ಡಾ.ಶಿವಮೂರ್ತಿ ಮುರುಘಾ ಶರಣರು ನಿರಾಳರಾಗಿದ್ದಾರೆ. ಅವರ ಜೊತೆ ಮತ್ತಿಬ್ಬರು ಆರೋಪಿಗಳಿಗೂ ರಿಲೀಫ್ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಮುರುಘಾ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾಸ್ಟೆಲ್ಲಿನ ಇಬ್ಬರು ಅಪ್ರಾಪ್ತ ಸಂತ್ರಸ್ತ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಯ ನೆರವಿನಿಂದ ಮೈಸೂರು ನಗರದ ನಜರಾಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ಶರಣರ ವಿರುದ್ಧ ದೂರು ನೀಡಿದ್ದರು. ಇದರನ್ವಯ ಮುರುಘಾಶರಣರು, ಲೇಡಿ ವಾರ್ಡನ್ ರಶ್ಮಿ, ಬಸವಾದಿತ್ಯ, ಮ್ಯಾನೇಜರ್ ಪರಮಶಿವಯ್ಯ, ವಕೀಲ ಗಂಗಾಧರಯ್ಯ ವಿರುದ್ಧ ಮೊದಲ ಪೋಕ್ಸೋ ಕೇಸ್ ದಾಖಲಾಗಿತ್ತು.

ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು. 2022ರ ಸೆಪ್ಟಂಬರ್ 1ರಂದು ಮುರುಘಾಶ್ರೀ, ವಾರ್ಡನ್ ರಶ್ಮಿಯನ್ನ ಪೊಲೀಸರು ಬಂಧಿಸಿದ್ದರು. ಆರೋಪಪಟ್ಟಿ ಸಲ್ಲಿಸುವ ವೇಳೆ ಬಸವಾದಿತ್ಯ, ವಕೀಲ‌ ಗಂಗಾಧರಯ್ಯ ಅವರನ್ನು ಕೈಬಿಡಲಾಗಿತ್ತು.

ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಠದ ಅಡುಗೆ ಸಹಾಯಕಿ ನೀಡಿದ್ದ ದೂರಿನ ಅನ್ವಯ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಅದರಲ್ಲಿ ಏಳು ಜನ ಆರೋಪಿಗಳನ್ನು ಹೆಸರಿಸಲಾಗಿದೆ. ಇದರಲ್ಲಿ ತೀರ್ಪು ಇನ್ನೂ ಬಾಕಿ ಇದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ಪ್ರತಿಮೆ ಮುಂದೆ ದಸಂಸ ಹಾಗೂ ವಿದ್ಯಾರ್ಥಿಗಳಿಂದ ಸಂವಿಧಾನ ದಿನಾಚರಣೆ

ಈ ಎರಡೂ ಪ್ರಕರಣಗಳಲ್ಲಿ ವಿಚಾರಣೆ ವೇಳೆ ಮುರುಘಾ ಶರಣರು ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿದ್ದು, ಜಿಲ್ಲೆಯಿಂದ ಹೊರಗಿರುವಂತೆ ಷರತ್ತು ಬದ್ಧ ಜಾಮೀನು ಪಡೆದು ಮರಳಿದ್ದರು. ಇದರ ಜಾಮೀನು ರದ್ದತಿ ಕೋರಿ ಸಂತ್ರಸ್ತೆಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಈ ವೇಳೆ ಮುಖ್ಯಸಾಕ್ಷ್ಯ ವಿಚಾರಣೆ ಪೂರ್ಣ ಆಗುವವರೆಗೆ ಮುರುಘಾಶ್ರೀ ಬಂಧನದಲ್ಲಿಡಲು ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಆದೇಶದನ್ವಯ ಮೇ 27, 2024ರಂದು ನ್ಯಾಯಾಲಯ ಎದುರು ಮುರುಘಾಶ್ರೀ ಶರಣಾಗಿದ್ದರು. ಈ ವೇಳೆ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಸಂತ್ರಸ್ತೆಯರಿಬ್ಬರು ಸೇರಿ 13 ಜನರ ಸಾಕ್ಷ್ಯ ವಿಚಾರಣೆ ಅಂತ್ಯ ಹಿನ್ನೆಲೆ ಅ.07, 2024ರಂದು ಮುರುಘಾಶ್ರೀ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಮುರುಘಾಶರಣರ ಪರವಾಗಿ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...