ಚಿತ್ರದುರ್ಗ | ಸಣ್ಣ ನೀರಾವರಿ ಇಲಾಖೆಯಿಂದ ಕಳಪೆ ಪಿಕಪ್ ಕಾಮಗಾರಿ; ಅಧಿಕಾರಿಗಳ ಅಮಾನತಿಗೆ ಆಗ್ರಹ

Date:

Advertisements

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ಬೋಸದೇವರಹಟ್ಟಿ ಹತ್ತಿರದ ಶಿಡ್ಲಹಳ್ಳದಲ್ಲಿ ನಿರ್ಮಿಸುತ್ತಿರುವ ಪಿಕಪ್ ಮತ್ತು ಕಾಲುವೆ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದ್ದು, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕು” ಎಂದು‌ ಮುಖಂಡ ಪಟೇಲ್ ಕೆ ಬಿ ಕೃಷ್ಣೇಗೌಡ ಗಂಭೀರ ಆರೋಪಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಚಿತ್ರದುರ್ಗ ಜಿಲ್ಲಾ ಖನಿಜ ಪ್ರತಿಷ್ಠಾನ ಅನುದಾನದಲ್ಲಿ ಸುಮಾರು ಎರಡು ಕೋಟಿ ರೂಪಾಯಿಗಳನ್ನು ಈ ಕಾಮಗಾರಿಗೆ ಮಂಜೂರು ಮಾಡಿದ್ದು, ಸಣ್ಣ ನೀರಾವರಿ ಇಲಾಖೆಯು ಈ ಕಾಮಗಾರಿಯ ಅನುಷ್ಠಾನದ ಹೊಣೆಯನ್ನು ಹೊತ್ತಿದ್ದು, ಈ ಕಾಮಗಾರಿಯೂ ಪ್ರಾರಂಭದಿಂದಲೂ ಕೂಡ ಅವೈಜ್ಞಾನಿಕ ಮತ್ತು ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ನಿರ್ಮಾಣ ಹೊಣೆ ಹೊತ್ತಿರುವ ಸಣ್ಣ ನೀರಾವರಿ ಇಲಾಖೆಯು ಕೈಗೊಂಡಿರುತ್ತದೆ. ಈ ಪಿಕಪ್ ಕಾಮಗಾರಿಯು ಸಂಪೂರ್ಣವಾಗಿ 40mm ಜಲ್ಲಿಯನ್ನು ಬಳಸಿ ನಿರ್ಮಾಣ ಮಾಡಿರುತ್ತಾರೆ ಹಾಗೂ ಕಳಪೆ ಗುಣಮಟ್ಟದ ಕಬ್ಬಿಣದ ರಾಡುಗಳನ್ನು ಬಳಸಿ ನಿರ್ಮಾಣ ಮಾಡಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇತ್ತೀಚಿಗೆ ನಾವು ಸಣ್ಣ ನೀರಾವರಿ ಇಲಾಖೆಯ ಶಾಖಾಧಿಕಾರಿಗಳಾದ ರಮೇಶ್ ಇವರನ್ನು ಭೇಟಿಯಾಗಿ ಗುಣಮಟ್ಟದ ಕಾಮಗಾರಿಗೆ ಮನವರಿಕೆ ಮಾಡಿದರು ಕೂಡ ಗುಣಮಟ್ಟದ ಕಾಮಗಾರಿಯನ್ನು ಮಾಡುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಅಲ್ಪ ಪ್ರಮಾಣದ ಸಿಮೆಂಟ್ ಬಹು ಪ್ರಮಾಣದ ಡಸ್ಟ್ ಅನ್ನು ಬಳಸಿರುತ್ತಾರೆ. 40 ಎಮ್ ಎಮ್ ಜಲ್ಲಿಯನ್ನು ಅಪಾರ ಪ್ರಮಾಣದಲ್ಲಿ ಬಳಸಿ ಕಾಮಗಾರಿಯನ್ನು ನಿರ್ಮಾಣ ಮಾಡಿರುವುದು ಕಂಡುಬಂದಿರುವುದರಿಂದ ಈ ಕಾಮಗಾರಿಯು ಅಕ್ರಮ ನಡೆದಿರುವುದು ನಿಜವಾಗಿರುವುದರಿಂದ ಶಾಖಾಧಿಕಾರಿಗಳನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಶಾಖಾಧಿಕಾರಿಗಳಾದ ರಮೇಶ್ ಇವರನ್ನು ಅಮಾನತ್ತು ಮಾಡಲು ಸಣ್ಣ ನೀರಾವರಿ ಇಲಾಖೆಯ ಮುಖ್ಯ ಇಂಜಿನಿಯರ್ ಮತ್ತು ಕಾರ್ಯದರ್ಶಿಗೆ ಲಿಖಿತ ದೂರು ನೀಡಲಾಗುವುದು” ಎಂದು ಎಚ್ಚರಿಸಿದರು.

“ಬಿ ಓಬಯ್ಯ ಗಜ್ಜುಗಾನಹಳ್ಳಿ ಮಾತನಾಡಿ ಜಿಲ್ಲಾ ಖನಿಜ ಪ್ರತಿಷ್ಠಾನದ ಅನುದಾನದಲ್ಲಿ ನಿರ್ಮಾಣಗೊಂಡಿರುವ ಈ ಕಾಮಗಾರಿಯು ಸಂಪೂರ್ಣ ಕಳಪೆಯಾಗಿದ್ದು ಗುತ್ತಿಗೆದಾರರೊಂದಿಗೆ ಅಕ್ರಮಕ್ಕೆ ಕೈಜೋಡಿಸಿರುವ ಸಣ್ಣ ನೀರಾವರಿ ಇಲಾಖೆಯ ಶಾಖಾಧಿಕಾರಿಗಳಾದ ರಮೇಶ್ ಇವರನ್ನು ಕೂಡಲೇ ಅಮಾನತು ಮಾಡಿ ಕಳಪೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಗುತ್ತಿಗೆದಾರ ಶ್ರವಣ್ ರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತುಂಗಾಭದ್ರಾ ನದಿ ಅಪಾಯದ ಮಟ್ಟ; ಜನ, ಜಾನುವಾರು ನದಿಗೆ ಇಳಿಸದಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

“ಒಂದೊಮ್ಮೆ ಕಳಪೆ ಕಾಮಗಾರಿ ಮುಂದುವರೆಸಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಶಾಖಾಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ ವಿರುದ್ಧ ಪ್ರತಿಭಟನೆ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X