ರಾಜ್ಯ ಹೆದ್ದಾರಿಯಲ್ಲಿ 150ಎ ನಲ್ಲಿ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಮತ್ತು ಮಕ್ಕಳಿಗಾಗುತ್ತಿರುವ ಅನಾನುಕೂಲತೆಯನ್ನು ಖಂಡಿಸಿ ಶಾಲಾ ವಿದ್ಯಾರ್ಥಿಗಳು ಪೋಷಕರು ಮತ್ತು ಸಾರ್ವಜನಿಕರು ರಸ್ತೆ ಮಧ್ಯದಲ್ಲಿ ಕೂತು, ರಸ್ತೆ ಉಬ್ಬು ಮತ್ತು ಪಾದಾಚಾರಿ ಸೇತುವೆ ಮಾರ್ಗ ನಿರ್ಮಿಸಿಕೊಡುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಎಲದಕೆರೆ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಎಲದಕೆರೆ ಗ್ರಾಮದಲ್ಲಿ ಇತ್ತೀಚೆಗೆ ರಸ್ತೆ ಅಗಲೀಕರಣ ಸಂದರ್ಭದಲ್ಲಿ ರಸ್ತೆಯನ್ನು ಅಗಲೀಕರಣ ಗೊಳಿಸಿದ್ದು, ಈ ರಸ್ತೆಯಲ್ಲಿ ವಾಹನಗಳು ಹೆಚ್ಚಿದ್ದು, ಹೆಚ್ಚು ವೇಗವಾಗಿ ಓಡಾಡುತ್ತಿವೆ. ಹಾಗಾಗಿ ಇಲ್ಲಿ ಸಂಚರಿಸುವ, ರಸ್ತೆ ದಾಟುವ ಶಾಲಾ ವಿದ್ಯಾರ್ಥಿಗಳು, ಮಕ್ಕಳು, ವೃದ್ದರು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆಗಾಗ್ಗೆ ಅಪಘಾತದಂತಹ ಅಪಾಯಗಳು ಸಂಭವಿಸುತ್ತಿವೆ. ಹೀಗಾಗಿ ರಸ್ತೆ ಉಬ್ಬುಗಳನ್ನು ನಿರ್ಮಿಸಿ ಸಂಚರಿಸುವ ವಾಹನಗಳ ವೇಗವನ್ನು ಕಡಿಮೆ ಮಾಡಬೇಕು. ಅಲ್ಲದೆ ರಸ್ತೆ ದಾಟಲು ಪಾದಾಚಾರಿ ಸೇತುವೆ ಮಾರ್ಗವನ್ನು ನಿರ್ಮಿಸಿಕೊಡಬೇಕು ಎಂದು ಒತಾಯಿಸಿ, ಎಲದಕೆರೆ ಗ್ರಾಮದ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ರಸ್ತೆ ಪ್ರತಿಭಟನೆ ವ್ಯಕ್ತಪಡಿಸಿದರು.
“ಕೂಡಲೇ ಲೋಕೋಪಯೋಗಿ ಇಲಾಖೆ, ಹೆದ್ದಾರಿ ವಿಭಾಗದ ಇಂಜಿನಿಯರ್ಗಳು, ತಾಲೂಕು ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಬೇಡಿಕೆ ಈಡೇರುವ ತನಕ ಪ್ರತಿಭಟನೆ ಮುಂದುವರಿಸಲಾಗುವುದು” ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯೂರಿಯಾ ರಸಗೊಬ್ಬರ ಕೊರತೆ: ವಿತರಕ ಏಜೆನ್ಸಿ ವಿರುದ್ಧ ರೈತ ಸಂಘ ಪ್ರತಿಭಟನೆ
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಧರ್ಮ ರಾಜ್, ನಯನ ರಮೇಶ್, ಉಪಾಧ್ಯಕ್ಷೆ ರೇಖಾ, ರತ್ನಮ್ಮ, ಪೋಷಕರಾದ ಗುರುಸ್ವಾಮಿ, ಶಿವಣ್ಣ, ತಿಪ್ಪೇಸ್ವಾಮಿ, ರಮೇಶ್, ಕಣುಮಣ್ಣ, ಚಂದ್ರಪ್ಪ, ನಾಗರಾಜ್, ಶಶಿಕುಮಾರ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಲದಕೆರೆ ಹಾಗೂ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಹಾಜರಿದ್ದರು.