ಚಿತ್ರದುರ್ಗ | ಬಿಡುಗಡೆಯಾಗಿದ್ದ ಅತ್ಯಾಚಾರ ಆರೋಪಿ ಮುರುಘಾಶ್ರೀ ಮತ್ತೆ ಬಂಧನ

Date:

ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

- Advertisement -

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಮುರುಘಾ ಅವರನ್ನು ಎರಡನೇ ಪ್ರಕರಣದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2ನೇ ಪೋಕ್ಸೋ ಪ್ರಕರಣದಲ್ಲಿ ಆರೋಪಿ ಮುರುಘಾ ಅವರನ್ನು ಬಂಧಿಸಲು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅರೆಸ್ಟ್‌ ವಾರಂಟ್ ಜಾರಿ ಮಾಡಿತ್ತು. ವಾರಂಟ್‌ ಪಡೆದ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ನೇತೃತ್ವದ ಪೊಲೀಸರ ತಂಡ ಮುರುಘಾ ಅವರನ್ನು ದಾವಣಗೆರೆ ವಿರಕ್ತ ಮಠದಲ್ಲಿ ಬಂಧಿಸಿ, ಚಿತ್ರದುರ್ಗಕ್ಕೆ ಕರೆತರುತ್ತಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ 2022ರ ಸೆಪ್ಟೆಂಬರ್ 1ರಂದು ಮುರುಘಾ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರನ್ನು ಚಿತ್ರದುರ್ಗದ ಕಾರಾಗೃಹದಲ್ಲಿ ಇರಿಸಲಾಗಿತ್ತು. ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆರೋಪಿ ಮುರುಘಾ ಅವರ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ಬಳಿಕ, ಮುರುಘಾ ಅವರ ವಕೀಲು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಒಂದು ಪ್ರಕರಣದಲ್ಲಿ ಜಾಮೀನು ನೀಡಿತ್ತು. ನವೆಂಬರ್ 16ರಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಎರಡನೇ ಪ್ರಕರಣದಲ್ಲಿ ಈಗ ಮತ್ತೆ ಜೈಲು ಸೇರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...