ಚಿತ್ರದುರ್ಗ | ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಬಿಡುಗಡೆ ಸಾಧ್ಯವಿಲ್ಲ

Date:

ಚಿತ್ರದುರ್ಗದ ಮುರುಘಾ ಮಠದ ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಅವರ ಬಿಡುಗಡೆ ಇಂದು (ಬುಧವಾರ) ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲ ಜಗದೀಶ್ ಹೇಳಿದ್ದಾರೆ.

- Advertisement -

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುರುಘಾ ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ಸಿಕ್ಕಿದೆ. ಎರಡನೇ ಫೋಕ್ಸೋ ಪ್ರಕರಣದಲ್ಲಿ ವಾರೆಂಟ್ ಇದೆ. ಆ ಪ್ರಕರಣದ ಜಾಮೀನು ಮಂಜೂರಾಗಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

“ಗುರುವಾರದವರೆಗೆ ಮುರುಘಾ ಅವರು ಬಾಡಿ ವಾರೆಂಟ್ ನಲ್ಲಿರುತ್ತಾರೆ. ಗುರುವಾರ ಎರಡನೇ ಪ್ರಕರಣದ ವಿಚಾರಣೆ ನಡೆಯಲಿದೆ. ಆ ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಕೋರ್ಟ್‌ ತನ್ನ ಆದೇಶ ನೀಡಲಿದೆ” ಎಂದು ಅವರು ವಿವರಿಸಿದ್ದಾರೆ.

ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಅವರಿಗೆ ಏಳು ಷರತ್ತುಗಳನ್ನು ವಿಧಿಸಿ ಹೈಕೋರ್ಟ್‌ ಜಾಮೀನು ನೀಡಿದೆ. ಹೀಗಾಗಿ, ಬುಧವಾರ ಮುರುಘಾ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಮುರುಘಾ ಅವರ ಪರ ವಕೀಲರು ಹೇಳಿದ್ದರು. ಆದರೆ, ಎರಡನೇ ಪ್ರಕರಣದಲ್ಲಿ ಜಾಮೀನು ನೀಡಲಾಗಿಲ್ಲ. ಇದರಿಂದಾಗಿ, ಅವರ ಬಿಡುಗಡೆ ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ.

ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ 2ನೇ ಪೋಕ್ಸೋ ಪ್ರಕರಣದ ವಿಚಾರಣೆ ನಡೆಸಲಿದೆ. ಆ ಪ್ರಕರಣದಲ್ಲಿ ನೀಡಲಾಗಿರುವ ಬಾಡಿ ವಾರೆಂಟ್‌ಅನ್ನು ನ್ಯಾಯಾಂಗ ಬಂಧನವಾಗಿ ವಿಸ್ತರಣೆ ಮಾಡುವಂತೆ ಸರ್ಕಾರಿ ವಕೀಲ ಜಗದೀಶ್ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...