ಚಿತ್ರದುರ್ಗ | ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ವಿರುದ್ಧ ಮತ್ತೊಂದು ಅರೆಸ್ಟ್‌ ವಾರಂಟ್ ಜಾರಿ

Date:

ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ಮುರುಘಾ ಅವರನ್ನು ಎರಡನೇ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

2ನೇ ಪೋಕ್ಸೋ ಪ್ರಕರಣದಲ್ಲಿ ಆರೋಪಿ ಮುರುಘಾ ಅವರನ್ನು ಬಂಧಿಸಲು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅರೆಸ್ಟ್‌ ವಾರಂಟ್ ಜಾರಿ ಮಾಡಿದೆ. ಹೀಗಾಗಿ, ಮುರುಘಾ ಅವರಿಗೆ ಬಂಧನ ಭೀತಿ ಎದುರಾಗಿದೆ.

ಅರೆಸ್ಟ್‌ ವಾರಂಟ್ ಜಾರಿಯಾಗಿರುವ ಹಿನ್ನೆಲೆ, ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ಅವರು ಕೋರ್ಟ್​ಗೆ ತೆರಳಿದ್ದಾರೆ. ಕೋರ್ಟ್ ಆದೇಶ ಪಡೆದುಕೊಂಡು ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ 2022ರ ಸೆಪ್ಟೆಂಬರ್ 1ರಂದು ಮುರುಘಾ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರನ್ನು ಚಿತ್ರದುರ್ಗದ ಕಾರಾಗೃಹದಲ್ಲಿ ಇರಿಸಲಾಗಿತ್ತು. ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆರೋಪಿ ಮುರುಘಾ ಅವರ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ಬಳಿಕ, ಮುರುಘಾ ಅವರ ವಕೀಲು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಒಂದು ಪ್ರಕರಣದಲ್ಲಿ ಜಾಮೀನು ನೀಡಿತ್ತು. ನವೆಂಬರ್ 16ರಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಎರಡನೇ ಪ್ರಕರಣದಲ್ಲಿ ಈಗ ಮತ್ತೆ ಜೈಲು ಸೇರುವ ಸಾಧ್ಯತೆಗಳು ದಟ್ಟವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗದಲ್ಲಿ ಬಿಎಸ್ ಪಿ ಪಕ್ಷದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಉಪಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್...

ದಾವಣಗೆರೆ | ಒಳ ಮೀಸಲಾತಿ ಅನುಷ್ಠಾನ ಮಾಡದೆ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ : ಮಂಜುನಾಥ್ ಕುಂದುವಾಡ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಅಧಿಕಾರವಿದ್ದು , ಈ...

ಮಧುಗಿರಿ | ಕಾರುಗಳ ನಡುವೆ ಅಪಘಾತ : ಐವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ...

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ್ (59) ಅವರು...