ಚಿತ್ರದುರ್ಗ | ಬಗರ್ ಹುಕುಂ, ವೈಜ್ಞಾನಿಕ ಬೆಲೆ,ಹವಾಮಾನ ಬೆಳೆ‌ವಿಮೆ ಸಮಸ್ಯೆ ಪರಿಹರಿಸಿ: ರೈತಸಂಘ ರಾಜ್ಯಾಧ್ಯಕ್ಷ ಬಸವರಾಜಪ್ಪ

Date:

“ಬಗರ್ ಹುಕುಂ ಸಮಸ್ಯೆ, ಬೆಳೆಗೆ ವೈಜ್ಞಾನಿಕ ಬೆಲೆ, ಮಳೆ ಹವಾಮಾನ ಆಧಾರಿತ ಬೆಳೆ‌ವಿಮೆ ಪರಿಹಾರ ಕೊಡುವುದು, ಸ್ವಾಮಿನಾಥನ್ ವರದಿ ಪ್ರಕಾರ ಬೆಳೆಗಳಿಗೆ ಬೆಂಬಲ ಬೆಲೆ ಸಿ2+50% ಕೊಡುವುದು, ವಿದ್ಯುಚ್ಛಕ್ತಿ ಅಕ್ರಮ-ಸಕ್ರಮದ ಹಣ ಕಟ್ಟಿದ್ದು ಅಭಿವೃದ್ಧಿ ಪಡಿಸುವುದು‌ ಸೇರಿದಂತೆ ಇನ್ನೂ ಅನೇಕ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕಿದೆ.‌ ಸರ್ಕಾರದ ಗಮನಕ್ಕೆ ತಂದು ಪರಿಹರಿಸುವಂತೆ ರೈತ ಸಂಘ ಒತ್ತಾಯ ಮಾಡಲಿದೆ” ಎಂದು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾ. ಬಿದುರ್ಗ, ಕಲ್ಲವ್ವನಾಗತಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ ಒತ್ತಾಯಿಸಿದರು.

- Advertisement -
1002857148

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಕಲ್ಲವ್ವನಾಗತಿಹಳ್ಳಿ, ಬಿ.ದುರ್ಗ ಗ್ರಾಮಗಳ ರೈತ ಸಂಘದ ಗ್ರಾಮ ಘಟಕಗಳ ಹಾಗೂ ನಾಮಫಲಕಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ, “ಸ್ಥಳೀಯ ನೀರಾವರಿ ಸಮಸ್ಯೆಗೆ ಸಿರಿಗೆರೆ ಸ್ವಾಮಿಗಳು ಲಿಫ್ಟ್ ಇರಿಗೇಷನ್ ಒತ್ತಾಯಿಸಿ ಮಾಡಿಸಿದಂತ ಸಾಸ್ವೆಹಳ್ಳಿ ಏತ ನೀರಾವರಿಯ ಪೈಪ್ ಲೈನ್ ಆಗಿದ್ದು ನೀರು ಬರುತ್ತಿಲ್ಲ. ಅತಿವೃಷ್ಟಿ ಬರಗಾಲದ ನಷ್ಟಕ್ಕೆ ಹಿಂದಿನ ಕಾಲದ ಲೆಕ್ಕದ ಪರಿಹಾರ ಕೊಡುತ್ತಿದ್ದು, ರೈತರ ಖರ್ಚಿನ ಬಿಡಿಗಾಸು ಸಿಗುತ್ತಿಲ್ಲ. ಕನಿಷ್ಟ ಎಕರೆಗೆ 25 ಸಾವಿರ ಪರಿಹಾರ ಕೊಡಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...
1002857147

“ತೀವ್ರ ಸ್ವರೂಪದ ಬರದ ಸಂದರ್ಭ 1963ರಲ್ಲಿ ಬೇರೆ ದೇಶದಿಂದ ಆಹಾರ ತಂದು ದೇಶದ ಜನರನ್ನು ಬದುಕಿಸುತ್ತಿದ್ದರು. ಆದರೆ ರೈತರು ಬೆಳೆ ಬೆಳೆದು ಆಹಾರದಲ್ಲಿ ದೇಶವನ್ನು ಸ್ವಾವಲಂಭಿಯನ್ನಾಗಿ ಮಾಡಿದ್ದಾರೆ. ಆದರೆ ರೈತ ಬೆಲೆ ಮೋಸದಿಂದ ಸಾಲಗಾರನಾಗಿದ್ದಾನೆ. ರೈತರು ಸುಮಾರು 24ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಫಾರಂ ನಂ. 50,53,57 ರಡಿ ನಮೂನೆ ಅರ್ಜಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅದರಲ್ಲಿ 18ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕಾರ ಮಾಡಿದ್ದಾರೆ” ಎಂದು ಆರೋಪಿಸಿದರು.

1002857146

“ಅಕ್ರಮ-ಸಕ್ರಮದ ಸಮಸ್ಯೆ ಪರಿಹರಿಸುವುದರ ಜೊತೆಗೆ ಗಣಿಗಾರಿಕೆ ಕಂಪನಿಗಳು ಅಭಿವೃದ್ಧಿ ಮಾಡುವ ವಿಚಾರದಲ್ಲಿ ಕಲ್ಲವ್ವನಾಗತಿಹಳ್ಳಿ ಗ್ರಾಮವನ್ನು ಸೇರಿಸುವುದು ಸೇರಿದಂತೆ ಇನ್ನೂ ಅನೇಕ ಸ್ಥಳೀಯ ಸಮಸ್ಯೆಗಳ ಬಗ್ಗೆ ಅಕ್ಟೋಬರ್ 10ರಂದು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ. ಎಲ್ಲ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು” ಎಂದು ಕರೆ ನೀಡಿದರು.

1002857140

ಈ ಸುದ್ದಿ ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

1002857141

ಉದ್ಘಾಟನೆ ಕಾರ್ಯಕ್ರಮದಲ್ಲಿ ಒಂಟಿಕಂಬದ ಮುರುಘಾಮಠದ ಶ್ರೀ ತಿಪ್ಪೇರುದ್ರಸ್ವಾಮಿಗಳು,
ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ, ತರೀಕೆರೆ ಮಹೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಚಿಕ್ಕಬ್ಬಿಗೆರೆ ನಾಗರಾಜ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ಡಿ.ಎಸ್ ಮಲ್ಲಿಕಾರ್ಜುನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಬಯಲಪ್ಪ, ಜಿಲ್ಲಾ ಕಾರ್ಯದರ್ಶಿ ರಾಮರೆಡ್ಡಿ, ದಾವಣಗೆರೆ ಜಿಲ್ಲಾಧ್ಯಕ್ಷ ಮರುಳಸಿದ್ದಯ್ಯ, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಎಸ್.ಎಂ ಶಿವಕುಮಾರ್ ಹಾಗೂ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮಘಟಕದ ಎಲ್ಲಾ ಪದಾಧಿಕಾರಿಗಳು, ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...