ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Date:

“ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ವಿವಿಧ ಭಾಗಗಳಲ್ಲಿ ಪೆಟ್ಟಿಗೆ ಅಂಗಡಿ, ಗೂಡಂಗಡಿ ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮದ್ಯ ವ್ಯಾಪಾರ ನಡೆಯುತ್ತಿದ್ದು, ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮುಖಂಡರು ಅಬಕಾರಿ ಇಲಾಖೆಯ ನಿರೀಕ್ಷಕರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.

- Advertisement -

ಈ ವೇಳೆ ಮಾತನಾಡಿದ ಮುಖಂಡರು “ಚಳ್ಳಕೆರೆ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಚಿಕ್ಕ ದಿನಸಿ ಮಾರಾಟದ ಚಿಲ್ಲರೆ ಅಂಗಡಿಗಳು, ಗೂಡಂಗಡಿಗಳಲ್ಲಿ ಅನಧಿಕೃತವಾಗಿ ಮದ್ಯ ವ್ಯಾಪಾರವು ಅನಧಿಕೃತವಾಗಿ ನಿರ್ಭೀತಿಯಿಂದ ರಾಜಾರೋಷವಾಗಿ ನಡೆಯುತ್ತಿದ್ದು ಚಳ್ಳಕೆರೆ ನಗರದ ಮಧ್ಯದ ಅಂಗಡಿಗಳ ಮುಖಾಂತರ ಸರಬರಾಜು ಆಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಪ್ರತಿ ಮನೆ ಮನೆಗೆ ನೀರು, ತಂಪು ಪಾನೀಯಗಳು ಹೇಗೆ ಸರಬರಾಜು ಆಗುತ್ತದೆಯೋ, ಹಾಗೆ ಮದ್ಯದ ಬಾಟಲಿಗಳು ಸಹ ಮದ್ಯದ ಅಂಗಡಿಗಳಿಂದ ಗ್ರಾಮೀಣ ಪ್ರದೇಶದ ಚಿಲ್ಲರೆ ದಿನಸಿ ಅಂಗಡಿ, ಗೂಡಂಗಡಿಗಳಿಗೆ ಸರಬರಾಜಾಗುತ್ತಿದೆ. ಸ್ಥಳೀಯವಾಗಿ ಪಂಚಾಯಿತಿಯ ಅಧಿಕಾರಿಗಳು ಕೂಡ ಪ್ರಾಮಾಣಿಕವಾಗಿ ಗಮನಹರಿಸಿ ಅಕ್ರಮ ಮದ್ಯದ ಮಾರಾಟವನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಿಲ್ಲ. ಅಲ್ಲದೆ ರಸ್ತೆ ಬದಿಯ ಢಾಬಾ ಹೋಟೆಲ್ಗಳಲ್ಲಿ ಕೂಡ ಅಕ್ರಮ ಮದ್ಯ ಸರಬರಾಜು ಆಗುತ್ತಿದೆ” ಎಂದು ಕಿಡಿಕಾರಿದರು.

WhatsApp Image 2025 09 29 at 12.39.12 PM 2

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

“ಈ ಅಕ್ರಮ ಮದ್ಯ ಮಾರಾಟದಿಂದಾಗಿ ಅನೇಕ ಯುವಕರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿತದ ವ್ಯಸನಕ್ಕೆ ಒಳಗಾಗುತ್ತಿದ್ದು, ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣ ಒತ್ತಾಯಿಸುತ್ತದೆ. ಅನಧಿಕೃತ ಮದ್ಯದ ಮಾರಾಟವನ್ನು ಶೀಘ್ರ ಕ್ರಮ ಕೈಗೊಂಡು ನಿಲ್ಲಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಬಕಾರಿ ಇಲಾಖೆ ವಿರುದ್ದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾರಕ ಆಯುಧದೊಂದಿಗೆ ಓಡಾಟ: ಆತಂಕ ಭಯ ಹುಟ್ಟಿಸಿದ ವ್ಯಕ್ತಿ ಬಂಧಿಸಿದ ಪೊಲೀಸರು

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ಪಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಚಂದ್ರಣ್ಣ, ಗೌರವಾಧ್ಯಕ್ಷ ಭೋಜರಾಜು, ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಮುರಳಿ, ಗಿರೀಶ್ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...