ಚಿತ್ರದುರ್ಗ | ಬಯಲುಸೀಮೆ ನೀರಿನ ಭದ್ರಾ ಮೇಲ್ದಂಡೆ ಯೋಜನೆಗೆ ಎಸ್ಸಿಪಿ, ಟಿಎಸ್ಪಿ ಹಣ ಬಳಕೆಗೆ ಒತ್ತಾಯ

Date:

ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಕಾಮಗಾರಿಗೆ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಚಿತ್ರದುರ್ಗದಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

- Advertisement -

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರು, “ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದಾಸೀನ ಮನೋಭಾವ ಹಾಗೂ ಅನುದಾನದ ಕೊರತೆಯಿಂದಾಗಿ ಕಾಮಗಾರಿ ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ. 5300 ಕೋಟಿ ರೂ. ಅನುದಾನ ನೀಡಲಿ ಎಂದು ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡಿದ್ದರೆ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆಗಾಗಿ ತಾಂತ್ರಿಕ ಮಾಹಿತಿಗಳ ಪೂರೈಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರಗಳ ಮೇಲೆ ಪತ್ರ ಬರೆಯುತ್ತಿದೆ. ಎರಡೂ ಸರ್ಕಾರದ ನಡೆಗಳಿಂದಾಗಿ ಭದ್ರಾ ಮೇಲ್ದಂಡೆ ಸೊರಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಹಾಲಿ ಶರವೇಗದಲ್ಲಿ ನಡೆಯುತ್ತಿರುವ ತುಂಗಭದ್ರಾ ಹಿನ್ನೀರು ಕುಡಿವ ನೀರಿನ ಎರಡುವರೆ ಸಾವಿರ ಕೋಟಿ ರುಪಾಯಿ ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿದೆ. ವಿಜಯ ನಗರ ಜಿಲ್ಲೆಯ ಕೂಡ್ಲಿಗಿ, ದಾವಣಗೆರೆ ಜಿಲ್ಲೆಯ ಜಗಳೂರು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶಗಳಿಗೆ ತುಂಗ ಭದ್ರಾ ಜಲಾಶಯದ ಹಿನ್ನೀರಿನಿಂದ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

“ಈ ಯೋಜನೆಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡಿರುವುದರ ಬಗ್ಗೆ ರಾಜ್ಯ ಸರ್ಕಾರ ತನ್ನ ನೈತಿಕ ಆಯಾಮದಲ್ಲಿ ಸಮಜಾಯಿಷಿ ನೀಡಿದೆ. ಕೂಡ್ಲಿಗಿ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ವಿಧಾನಸಭೆ ಕ್ಷೇತ್ರಗಳು ಪರಿಶಿಷ್ಟ ಪಂಗಡ( ಎಸ್ಟಿ)ಕ್ಕೆ ಹಾಗೂ ಪಾವಗಡ ಪರಿಶಿಷ್ಟ ಜಾತಿ(ಎಸ್ಸಿ) ಗೆ ಮೀಸಲಾಗಿದೆ. ಹಾಗಾಗಿ ಈ ಸಮುದಾಯಗಳಿಗೆ ಕಾಯ್ದಿಟ್ಟ ಅನುದಾನ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸ್ಪಷ್ಟೀಕರಣ ನೀಡಿದೆ” ಎಂದರು.

“ತುಂಗಭದ್ರಾ ಹಿನ್ನೀರು ಕಾಮಗಾರಿಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಲು ರಾಜ್ಯ ಸರ್ಕಾರ ಹರಿಯ ಬಿಟ್ಟ ಆಲೋಚನಾ ಕ್ರಮಗಳನ್ನು ಭದ್ರಾ ಮೇಲ್ದಂಡೆಗೂ ಪರಿಗಣಿಸಬೇಕೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ. ಭದ್ರಾ ಮೇಲ್ದಂಡೆ ವ್ಯಾಪ್ತಿಗೆ ಹೊಳಲ್ಕೆರೆ, ಪಾವಗಡ(ಪರಿಶಿಷ್ಟ ಜಾತಿ),ಮೊಳಕಾಲ್ಮುರು, ಚಳ್ಳಕೆರೆ, ಜಗಳೂರು( ಪರಿಶಿಷ್ಟ ಪಂಗಡ) ಸೇರಿ ಐದು ಮೀಸಲು ಕ್ಷೇತ್ರಗಳು ಬರುತ್ತವೆ. ಸಾಲದೆಂಬಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಹಾಗಾಗಿ ತುಂಗ ಭದ್ರಾ ಹಿನ್ನೀರು ಯೋಜನೆಗೆ ಎಸ್ಪಿಪಿ , ಟಿಎಸ್ಪಿ ಅನುದಾನ ಬಳಕೆ ಮಾಡಿದ ರೀತಿ ಭದ್ರಾ ಮೇಲ್ದಂಡೆಗೂ ವಿನಿಯೋಗಿಸಬಹುದಾಗಿದೆ” ಎಂದು ತಿಳಿಸಿದರು.

“ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಕಳೆದ ಎರಡು ವರ್ಷಗಳಲ್ಲಿ 32 ಸಾವಿರಕೋಟಿ ರೂ. ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡಿರುವುದರ ಬಗ್ಗೆ ಶಾಸನ ಸಭೆಯಲ್ಲಿಯೇ ಸಿಎಂ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿಗಳಿಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಳ್ಳುವುದಾದರೆ ಭದ್ರಾ ಮೇಲ್ದಂಡೆಗೆ ಏಕೆ ಬಳಸಬಾರದು” ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮುಖಂಡರು ಪ್ರಶ್ನೆ ಮಾಡಿದರು.

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಉದಾಸೀನ ಮನೋಭಾವ ಗಮನಿಸಿದರೆ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಒಂದೆರಡು ದಶಕ ಬೇಕೆನಿಸುತ್ತದೆ. ಅಲ್ಲದೇ ಯೋಜನಾ ವೆಚ್ಚವು ಜಾಸ್ತಿಯಾಗುತ್ತದೆ. ಯೋಜನಾ ವ್ಯಾಪ್ತಿಯಲ್ಲಿ ಬರುವ ಶಾಸಕರು, ಸಚಿವರು ತಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಒತ್ತಡ ಹೇರಿ ಎಸ್ಪಿಪಿ, ಟಿಎಸ್ಪಿ ಅನುದಾನದ ಸಹಾಯ ಪಡೆದು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಮಿತಿ ಆಗ್ರಹಿಸಿತು.

“ಕೃಷ್ಣಾ ಜಲಭಾಗ್ಯದ ರೀತಿ ಭದ್ರಾ ಮೇಲ್ದಂಡೆಗೂ ನೀರಾವರಿ ಬಾಂಡ್ ಬಿಡುಗಡೆ ಮಾಡಿ ಸಂಪನ್ಮೂಲ ಕ್ರೋಡೀಕರಣ ಮಾಡುವಂತೆ ಹಿಂದೊಮ್ಮೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿತ್ತು. ಈಗಲೂ ಕಾಲ ಮಿಂಚಿಲ್ಲ, ಬಾಂಡ್ ಬಿಡುಗಡೆ ಮಾಡಿದರೆ ಕೊಂಡುಕೊಳ್ಳುವವರು ಇದ್ದಾರೆ. ಸರ್ಕಾರ ಈ ಬಗ್ಗೆಯೂ ಚಿಂತಿಸಲಿ” ಎಂದು ಸಮಿತಿ ಮುಖಂಡರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಎಸ್ ಪಿ ವಿರುದ್ಧ ಹರಿಹರ ಬಿಜೆಪಿ ಶಾಸಕ ಹರೀಶ್ ಅವಹೇಳನಕಾರಿ ಹೇಳಿಕೆ; ಪ್ರಕರಣ ದಾಖಲು

“ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆ ಸಂಬಂಧ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದೇವೆ. ಈ ಸಂಬಂಧ ವಕೀಲರ ಸಂಪರ್ಕಿಸಲಾಗಿದೆ. ತುಂಗಭದ್ರಾ ಹಿನ್ನೀರು ಯೋಜನೆಗೆ ಎಸ್ಪಿಪಿ ಟಿಎಸ್ಪಿ ಅನುದಾನ ಬಳಕೆ ಮಾಡಿಕೊಳ್ಳಲಾಗಿದ್ದು, ಅದೇ ರೀತಿ ಭದ್ರಾ ಮೇಲ್ದಂಡೆಗೂ ಬಳಕೆ ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸಲಾಗುವುದು” ಎಂದು ಬಿ.ಎ.ಲಿಂಗಾರೆಡ್ಡಿ ಹೇಳಿದರು.

ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ, ಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು,ಉಪಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ ಸೇರಿದಂತೆ ಇತರ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...