ಚಿತ್ರದುರ್ಗ | ತಳಕಿನಲ್ಲಿ ಸರಣಿ ಕಳ್ಳತನ: ಸಾರ್ವಜನಿಕರು ಅಂಗಡಿ ಮಾಲೀಕರಿಗೆ ಆತಂಕ

Date:

ತಳಕು ಬಸ್ ನಿಲ್ದಾಣದಲ್ಲಿ ಕೈ ಚಳಕ ತೋರಿರುವ ಕಳ್ಳರು ಒಂದೇ ರಾತ್ರಿಯಲ್ಲಿ ಮೂರು ಪೆಟ್ಟಿಗೆ ಅಂಗಡಿಗಳಲ್ಲಿ ಡಬ್ಬ ಮುರಿದು ಸರಣಿ ಕಳ್ಳತನ ಮಾಡಿದ್ದಾರೆ. ಇದರಿಂದಾಗಿ ತಳಕು ಸೇರಿದಂತೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಳ್ಳಿಗಳಲ್ಲಿ, ನಗರ ಭಾಗದಲ್ಲಿ ಸಾರ್ವಜನಿಕರಿಗೆ ಹಾಗೂ ರಸ್ತೆ ಬದಿಯ ಅಂಗಡಿಗಳ ಮಾಲೀಕರಿಗೆ ಆತಂಕ ಶುರುವಾಗಿದೆ.

- Advertisement -

ಇದೀಗ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ನಿಲ್ದಾಣದಲ್ಲಿ ಒಂದೇ ದಿನ ರಾತ್ರಿ ಕಳ್ಳರು ಕಿರಾಣಿ ಅಂಗಡಿ, ಡಬ್ಬದ ಅಂಗಡಿ, ನಂದಿನಿ ಮಿಲ್ಕ್ ಪಾರ್ಲರ್, ಬೇಕರಿ ಸೇರಿದಂತೆ ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದು ನಾಗರೀಕರಿಗೆ ಆತಂಕ ಹುಟ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...
1003113053
ತಗಡಿನ ಶೀಟ್ ಕತ್ತರಿಸಿ ಒಳನುಗ್ಗಿರುವ ಕಳ್ಳರು

ತಳಕಿನ ಬಸ್ ನಿಲ್ದಾಣದಲ್ಲಿ ರಸ್ತೆ ಬದಿ ಇರುವ ಭಾಗ್ಯಮ್ಮ ಎನ್ನುವವರ ಬೇಕರಿಯಲ್ಲಿ 3,000 ಮೌಲ್ಯದ ಗುಟ್ಕಾ ಸಿಗರೇಟ್ ಹಾಗೂ 2,000 ನಗದು, ಗಂಗಮ್ಮ ಎನ್ನುವವರ ಬೇಕರಿಯಲ್ಲಿ ಸುಮಾರು 9,000 ಗುಟ್ಕಾ ಸಿಗರೇಟ್ ಇನ್ನಿತರ ವಸ್ತುಗಳು ಹಾಗೂ 3,000 ನಗದು, ಸೈಯದ್ ಮೂಸಂ ಎನ್ನುವವರ ಕಿರಾಣಿ ಅಂಗಡಿಯಲ್ಲಿ 40,000 ಮೌಲ್ಯದ ಗುಟ್ಕಾ ಸಿಗರೇಟ್, ಅಡುಗೆ ಎಣ್ಣೆ, ದಿನಬಳಕೆ ವಸ್ತುಗಳನ್ನು ಕಳವು ಮಾಡಿದ್ದು ಅಂಗಡಿಗಳ ತಗಡು ಮುರಿದು ಕಳ್ಳರು ಒಳಹೊಕ್ಕಿದ್ದಾರೆ ಎಂದು ತಿಳಿದು ಬಂದಿದೆ.

1003113057
ಅಂಗಡಿಗಳ ಶೀಟ್ ಮುರಿದು ಕಳ್ಳತನ

ಚಳ್ಳಕೆರೆ ತಾಲೂಕಿನ ನಗರ ಸೇರಿದಂತೆ ಹಳ್ಳಿಗಳ ಮತ್ತು ರಸ್ತೆ ಭಾಗದ ಅಂಗಡಿಗಳು ಮತ್ತು ಮನೆಗಳಲ್ಲಿ ಪದೇ ಪದೇ ಕಳ್ಳತನ ಮತ್ತು ದರೋಡೆ ಪ್ರಕರಣಗಳು ವರದಿಯಾಗುತ್ತಿದ್ದು, ಇವು ಸಾರ್ವಜನಿಕರ ಮತ್ತು ಪೊಲೀಸರ ನಿದ್ದೆಗೆಡಿಸಿವೆ.‌ ಇವುಗಳಲ್ಲಿ ಕೆಲವೇ ಬೆರಳೆಣಿಕೆಯಷ್ಟು ಪ್ರಕರಣಗಳಲ್ಲಿ ಮಾತ್ರವೇ ಆರೋಪಿಗಳ ಪತ್ತೆಯಾಗಿದ್ದು, ಬಹಳಷ್ಟು ಪ್ರಕರಣಗಳಲ್ಲಿ ಆರೋಪಿಗಳ ಸುಳಿವು ಸಿಗದೇ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.‌ ಚಳ್ಳಕೆರೆ ನಗರ, ಹೆದ್ದಾರಿ ಮತ್ತು ಗ್ರಾಮಾಂತರ ಭಾಗಗಳಲ್ಲಿ ಸುರಕ್ಷತೆಗಾಗಿ ಸಾರ್ವಜನಿಕರಿಂದ ಆಗ್ರಹ ಕೇಳಿ ಬಂದಿದೆ.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ. ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ

ಸ್ಥಳಕ್ಕೆ ತಳಕು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...