ಚಿತ್ರದುರ್ಗ | ಹಾಯ್ಕಲ್ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆ; ಅನುದಾನವಿಲ್ಲ ಎಂದ ಪಂಚಾಯಿತಿ, ಶಾಸಕರಿಗೆ ದೂರು

Date:

​ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿ ಬೆಳಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಯ್ಕಲ್ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದುಕಾಣುತ್ತಿದೆ. ನಿರ್ವಹಣೆ ಇಲ್ಲದೆ ಚರಂಡಿಗಳು ಮುಚ್ಚಿಹೋಗಿವೆ. ಜೊತೆಗೆ ಪ್ರಭಾವಿಗಳು ಬೇಕೆಂದೇ ಕುಡಿಯುವ ನೀರಿನ ಪೈಪ್‌ಲೈನ್, ಚರಂಡಿಗಳನ್ನು ನಾಶಪಡಿಸುತ್ತಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಪಂಚಾಯಿತಿ ಅಧಿಕಾರಿಗಳು ಅನುದಾನದ ಕೊರತೆಯ ನೆಪವೊಡ್ಡುತ್ತಿದ್ದು, ಬೇಸತ್ತ ಗ್ರಾಮಸ್ಥರು ಚಳ್ಳಕೆರೆ ಶಾಸಕರ ಮೊರೆ ಹೋಗಿದ್ದಾರೆ.
​
ಹಾಯ್ಕಲ್ ಗ್ರಾಮದ ರಂಗವನ್ನಳ್ಳಿ ಹನುಮಂತಪ್ಪನವರ ಮನೆಯಿಂದ ಸಣ್ಣಬೋರಯ್ಯನವರ ಮನೆವರೆಗೆ ಇರುವ ಚರಂಡಿ ಸಂಪೂರ್ಣವಾಗಿ ಮುಚ್ಚಿಹೋಗಿದೆ. ಹೊಸದಾಗಿ ಚರಂಡಿ ಹಾಗೂ ಡಕ್ಕು ನಿರ್ಮಾಣ ಮಾಡುವಂತೆ ಗ್ರಾಮಸ್ಥರಾದ ಸಿ.ಪಿ. ತಿಪ್ಪೇಸ್ವಾಮಿ ಬೆಳಘಟ್ಟ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು.

- Advertisement -
WhatsApp Image 2026 03 18 at 6.55.21 PM

ಪಂಚಾಯಿತಿ ಅಧಿಕಾರಿಗಳು ‘ಅನುದಾನ ಇಲ್ಲ’ ಎಂಬ ಉತ್ತರ ನೀಡಿ ಕೈತೊಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ತಿಪ್ಪೇಸ್ವಾಮಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆ.ಎಸ್.ಎಸ್.ಐ.ಡಿ.ಸಿ ಅಧ್ಯಕ್ಷರಿಗೆ ದೂರು ನೀಡಿದ್ದು, ಜಿಪಿಎಸ್ ಆಧಾರಿತ ಫೋಟೋಗಳನ್ನು ಲಗತ್ತಿಸಿ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡುವಂತೆ ತುರ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ.
​
ಇದೇ ಗ್ರಾಮದ ಖಾತೆ ಸಂಖ್ಯೆ: 150/208ರ ಜಾಗದಲ್ಲಿ (ಚಿನ್ನಮ್ಮ ಕೋಂ ಚಿನ್ನಪ್ಪಯ್ಯ ಅವರಿಗೆ ಸೇರಿದ ಜಾಗ) ಮನೆ ನಿರ್ಮಾಣ ಮಾಡಲು ಮುಂದಾದಾಗ, ಪ್ರಭಾವಿಗಳು ಅಡ್ಡಿಪಡಿಸಿರುವ ಘಟನೆಯೂ ಬೆಳಕಿಗೆ ಬಂದಿದೆ. ಹಳೆಯ ಶಿಥಿಲಗೊಂಡ ಮನೆಯನ್ನು ತೆರವುಗೊಳಿಸಿದ ನಂತರ, ಅಲ್ಲಿದ್ದ ಕುಡಿಯುವ ನೀರಿನ ಪೈಪ್‌ಲೈನ್ ಮತ್ತು ಚರಂಡಿಯನ್ನು ಪ್ರಭಾವಿಗಳು ಉದ್ದೇಶಪೂರ್ವಕವಾಗಿ ಒಡೆದುಹಾಕಿ ಸಂಪೂರ್ಣವಾಗಿ ಮುಚ್ಚಿಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
WhatsApp Image 2026 03 18 at 6.56.00 PM 1

ಇದನ್ನೂ ಓದಿ: ಚಿತ್ರದುರ್ಗ | 2027 ಕ್ಕೆ ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ

​ಈ ಅನ್ಯಾಯದ ವಿರುದ್ಧ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಈ ಬಗ್ಗೆ ಎಚ್ಚೆತ್ತುಕೊಂಡಿರುವ ಕಲ್ಯಾಣಾಧಿಕಾರಿಗಳು, ಮಾರ್ಚ್ 18ರಂದು ಬೆಳಿಗ್ಗೆ 11:00 ಗಂಟೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆಗೂಡಿ ಜಂಟಿ ಸ್ಥಳ ಪರಿಶೀಲನೆ ನಡೆಸುವುದಾಗಿ ಅಧಿಕೃತ ನೋಟಿಸ್ ಜಾರಿ ಮಾಡಿದ್ದಾರೆ.

Advertisements

ದೂರುದಾರರಾದ ಸಿ.ಪಿ. ತಿಪ್ಪೇಸ್ವಾಮಿ ಅವರಿಗೂ ಸ್ಥಳದಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ. ​ಒಟ್ಟಾರೆಯಾಗಿ ಹಾಯ್ಕಲ್ ಗ್ರಾಮದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಪಂಚಾಯಿತಿ ಹಿಂದೇಟು ಹಾಕುತ್ತಿರುವುದು, ಜೊತೆಗೆ ಪ್ರಭಾವಿಗಳ ದಬ್ಬಾಳಿಕೆ ಮಿತಿಮೀರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಜನಪ್ರತಿನಿಧಿಗಳು ಈ ಕೂಡಲೇ ಮಧ್ಯಪ್ರವೇಶಿಸಿ, ಗ್ರಾಮಸ್ಥರಿಗೆ ನ್ಯಾಯ ಒದಗಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಕಾದಂಬರಿಕಾರ್ತಿ ಸಿ.ಎನ್. ಮುಕ್ತಾ ನಿಧನ

ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ...

ಮೊಳಕಾಲ್ಮೂರು | ವಿಂಡ್ ಫ್ಯಾನ್ ಕಾಮಗಾರಿ ಸ್ಥಗಿತಕ್ಕೆ ರೈತ ಸಂಘ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಕ್ರಮವಾಗಿ ವಿಂಡ್...

ಹಿರಿಯೂರು | ಕಲ್ಲುವಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆ

 ಕಲ್ಲುವಳ್ಳಿ ಭಾಗದ ರೈತರು ಗಾಯತ್ರಿ ಅಣೆಕಟ್ಟೆ ಒಳಗೊಂಡು 17 ಕೆರೆಗಳಿಗೆ ವಾಣಿವಿಲಾಸ...