ಚಿತ್ರದುರ್ಗ | ಚರಂಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಹೂಳು: ಕ್ರಮ ಕೈಗೊಳ್ಳಲು ಸ್ಥಳೀಯರ ಆಗ್ರಹ

Date:

ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣ ಹಿಂಬಾಗದ ರಸ್ತೆಯಲ್ಲಿರುವ ಚರಂಡಿಯಲ್ಲಿ ಪ್ಲಾಸ್ಟಿಕ್, ಕಸ, ಕವರ್, ತ್ಯಾಜ್ಯಗಳು ಸೇರಿದಂತೆ ಹೂಳು ತುಂಬಿಕೊಂಡಿದ್ದು ತ್ಯಾಜ್ಯ ನೀರು ಮುಂದೆ ಹೋಗಲಾರದೆ ನಿಂತಿದ್ದು ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು ಸ್ವಚ್ಛತೆ ಕಾಪಾಡದ ಚಳ್ಳಕೆರೆ ನಗರಸಭೆ ಇಲಾಖೆ ವಿರುದ್ಧ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಸ್ಥಳೀಯರು ಹಾಗೂ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
1003079464

ಚರಂಡಿಯಲ್ಲಿ ಕಸ ತುಂಬಿ ತ್ಯಾಜ್ಯ ನೀರು ಹರಿಯದೇ ನಿಂತು ಕೊಳೆತ ವಾಸನೆ ಹರಡುತ್ತಿದೆ. ಆಲ್ಲಿ ಓಡಾಡುವ ಬಸ್ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಉಂಟಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...
1003079463

ವಿಕಾಸ್ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ “ಈ ಮುಂಚೆ ನಗರಸಭೆಯವರು ವಾರಕೊಮ್ಮೆ ಕ್ಲೀನ್ ಮಾಡುತ್ತಿದ್ದರು. ಈಗ ತಿಂಗಳಿಗೊಮ್ಮೆ ಬರುತ್ತಿದ್ದಾರೆ ಅಥವಾ ಅವರಿಗೆ ತಿಳಿದಾಗ ಬರುತ್ತಾರೆ. ಈ ಚರಂಡಿಯ ದುಸ್ಥಿತಿ ನೋಡಿ ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿಬೇಕೆಂದು ಕಿಡಿ ಕಾರಿದ್ದಾರೆ.‌

ಅಲ್ಲಿರುವ ಸುತ್ತಮುತ್ತಲಿನ ಹೋಟೆಲ್ ನವರು ಕಸ ಎಲ್ಲಾ ದಿನಾಲೂ ಪಕ್ಕದ ಚರಂಡಿಯಲ್ಲಿ ತಂದು ಹಾಕುತ್ತಾರೆ. ಸುತ್ತಮುತ್ತಲಿನ ಬಹಳಷ್ಟು ಜನ ಯಾರು ಕಸ ಸಂಗ್ರಹಣೆ ವ್ಯಾನ್ ಗೆ ಹಾಕುವುದಿಲ್ಲ. ಜೊತೆಗೆ ಈ ರೋಡ್ ಗೆ ಕಸದ ವ್ಯಾನ್ ಬರುವುದೇ ಇಲ್ಲಾ. ನಗರಸಭೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Advertisements
1003079462

“ಯಾರಿಗೂ ಹೇಳಲಾಗದ ದುರ್ವಾಸನೆಯ ಸ್ಥಿತಿ ನಿರ್ಮಾಣವಾಗಿದೆ. ನಾನು ತುಂಬಾ ಸಾರಿ ಮನವಿ ಮಾಡಿದ್ದೇನೆ. ನಗರಸಭೆಯವರು ತಿಳಿಸಿದಾಗ ಮಾಡಿದಾಗ ಮಾತ್ರ ಬಂದು ಮಾಡುತ್ತಾರೆ ಮತ್ತೆ ಅದೇ ಪರಿಸ್ಥಿತಿ ಮುಂದುವರಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲುದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು

“ಹೋಟೆಲಿನವರು ಮಾತ್ರ ಕಸಹಾಕಲ್ಲ. ಅಲ್ಲಿರುವ ಬೇಕರಿಯವರು, ಮೊಟ್ಟೆ ಗಾಡಿ ಅಂಗಡಿಯವರು, ಕಾಂಪ್ಲೆಕ್ಸ್ ಹಿಂದಿನ ಮನೆಯವರು ಎಲ್ಲರೂ ಹಾಕುತ್ತಾರೆ. ಕೂಡಲೇ ನಗರಸಭೆಯವರು ಕ್ರಮ ಕೈಗೊಂಡು ನೈರ್ಮಲ್ಯ ಕಾಪಾಡಲು ಮುಂಜಾಗ್ರತೆ ವಹಿಸಬೇಕು” ಎಂದು ಸ್ಥಳೀಯರಾದ ಹಕೀಬ್ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...