ಚಿತ್ರದುರ್ಗ | ಅಂಬೇಡ್ಕರ್ ಆಶಯಗಳನ್ನು ಸಾರಿದ ಭೀಮಗಾಯನ

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಅನುಭವಿಸಿದ ನೋವು ಮತ್ತು ಹೋರಾಟದ ಫಲವಾಗಿ ಇಂದು ನಮಗೆ ಉತ್ತಮ ಬದುಕು ಹಾಗೂ ಸಂವಿಧಾನಾತ್ಮಕ ಹಕ್ಕುಗಳು ದೊರೆತಿವೆ. ಅವರ ವಿಚಾರಧಾರೆಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ಹೇಳಿದರು.

- Advertisement -

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಶಿವಶರಣ ಮಾದಾರ ಚನ್ನಯ್ಯ ಸಭಾಭವನ (ಲಿಡ್ಕರ್ ಭವನ) ದಲ್ಲಿ ಆಯೋಜಿಸಲಾದ “ಭೀಮಗಾಯನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ರಾಜ್ಯ ಸರ್ಕಾರವು ತನ್ನ ಆಡಳಿತ ವ್ಯವಸ್ಥೆಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂಬ ತತ್ವದಡಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಅಂಬೇಡ್ಕರ್ ಅವರ ಜೀವನದ ನೋವು-ನಲಿವುಗಳನ್ನು ಹಾಡುಗಳ ಮೂಲಕ ಜನರಿಗೆ ತಲುಪಿಸುವ ‘ಭೀಮಗಾಯನ’ ಒಂದು ಸ್ಮರಣೀಯ ಕಾರ್ಯಕ್ರಮವಾಗಿದೆ.

ಅಸ್ಪøಶ್ಯತೆ ಎಂಬುದು ಒಂದು ಕರಾಳ ಆಚರಣೆಯಾಗಿತ್ತು. ಅಂಬೇಡ್ಕರ್ ಅವರ ಹೋರಾಟ, ಅವರು ರೂಪಿಸಿಕೊಟ್ಟ ಸಂವಿಧಾನದಿಂದಾಗಿ, ಸಮಾಜದಲ್ಲಿನ ಇಂತಹ ಪದ್ಧತಿಗಳನ್ನು ಕೊನೆಗಾಣಿಸಲು ಮುನ್ನಡಿಯಾಯಿತು. ಸಂವಿಧಾನವು ಪ್ರತಿಯೊಬ್ಬರಿಗೂ ಸಾಮಾಜಿಕ ಭದ್ರತೆ, ಆರ್ಥಿಕ ಸಮಾನತೆ ಮತ್ತು ರಾಜಕೀಯ ಸ್ಥಾನಮಾನಗಳನ್ನು ಕಲ್ಪಿಸಿದೆ. ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸಂವಿಧಾನ ನಮಗೆ ನೀಡಿದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ಪಡೆಯುತ್ತಿರುವ ಉಚಿತ ಊಟ ಮತ್ತು ಶಿಕ್ಷಣದ ಸೌಲಭ್ಯಗಳು ಅಂಬೇಡ್ಕರ್ ಅವರು ಹಾಕಿಕೊಟ್ಟ ಭದ್ರ ಬುನಾದಿಯ ಫಲವಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಮೂಲಕ ಶೇ. 75 ರಷ್ಟು ಪ್ರವೇಶಾತಿ ಹಕ್ಕನ್ನು ಸಂವಿಧಾನಬದ್ಧವಾಗಿ ನೀಡಲಾಗಿದೆ. ಪ್ರಸ್ತುತ ಸಮಾಜದಲ್ಲಿ ಅಂಬೇಡ್ಕರ್ ಅವರು ಪ್ರತಿಪಾದಿಸಿದ ‘ಭ್ರಾತೃತ್ವ’ ಎಂಬ ಪದದ ಅರ್ಥ ಬಹಳ ಮುಖ್ಯವಾಗಿದೆ. ಸಮಾಜದ ಎಲ್ಲಾ ವರ್ಗದವರು ಈ ಗುಣವನ್ನು ಅಳವಡಿಸಿಕೊಂಡು ಸೌಹಾರ್ದತೆಯಿಂದ ಬದುಕಬೇಕಾದ ಅಗತ್ಯವಿದೆ ಎಂದು ಆರ್.ಶಿವಣ್ಣ ಹೇಳಿದರು.

1002943032

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್ ರಾಜ್ಯದ 12 ಜಿಲ್ಲೆಗಳಲ್ಲಿ “ಭೀಮಗಾಯನ” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅದರಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ಮೊದಲ ವರ್ಷವೇ ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ವಾರ್ತಾ ಇಲಾಖೆ, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳು ಈ ಕಾರ್ಯಕ್ರಮ ಆಯೋಜಿಸುತ್ತಿವೆ. ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯನ್ನೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪ್ರತಿ ಶಾಲೆಯಿಂದ ಕನಿಷ್ಠ 10 ರಿಂದ 20 ವಿದ್ಯಾರ್ಥಿಗಳು ಭಾಗವಹಿಸುವುದನ್ನು ಕಡ್ಡಾಯಗೊಳಿಸಬೇಕು. ಇದರಿಂದ ಎಲ್ಲಾ ಶಾಲಾ ಮಕ್ಕಳಿಗೂ ಅಂಬೇಡ್ಕರ್ ಅವರ ವಿಚಾರಧಾರೆಗಳು ತಲುಪಲು ಸಾಧ್ಯವಾಗುತ್ತದೆ. ಮಾರ್ಚ್ ತಿಂಗಳು ಪರೀಕ್ಷಾ ಸಮಯವಾಗಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಪ್ರತಿವರ್ಷ ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಆಯೋಜಿಸಿದರೆ ಹೆಚ್ಚು ಅನುಕೂಲಕರ ಎಂದು ತಾಜ್‍ಪೀರ್ ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ ಮಾತನಾಡಿ ಅಂಬೇಡ್ಕರ್ ಅವರು ದೇಶಕ್ಕೆ ಶಕ್ತಿಯಾಗಿದ್ದು, ಅಸ್ಪೃಶ್ಯ ಹಾಗೂ ಶೋಷಿತ ಸಮುದಾಯಗಳಿಗೆ ಸಂವಿಧಾನದ ಮೂಲಕ ಹಕ್ಕುಗಳನ್ನು ನೀಡಿದ್ದಾರೆ. ಅಂಬೇಡ್ಕರ್ ಅವರ ರಾಷ್ಟ್ರಪ್ರೇಮವನ್ನು ಗೌರವಿಸಲು ಅವರ ಭಾವಚಿತ್ರವನ್ನು ಕರೆನ್ಸಿ ನೋಟುಗಳಲ್ಲಿ ಮುದ್ರಿಸಬೇಕು ಎಂದರು.

ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂ ರಾವ್ ಪ್ರಾಸ್ತಾವಿಕಾಗಿ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮಕ್ಕಳಲ್ಲಿ ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯದ 12 ಜಿಲ್ಲೆಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ “ಭೀಮಗಾಯನ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಂವಿಧಾನದ ಆಶಯಗಳನ್ನು ಹಾಡುಗಳ ಮೂಲಕ ಜನರಿಗೆ ತಲುಪಿಸುವುದಾಗಿದೆ. ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿ ಮಾತ್ರವಲ್ಲ, ಅವರು ಜ್ಞಾನದ ಅಪ್ರತಿಮ ಸಂಕೇತ. ಅವರ ಜೀವನದ ಸಾಧನೆ ಮತ್ತು ತತ್ವಗಳು ಇಂದಿನ ತಲೆಮಾರಿಗೆ ದಾರಿದೀಪವಾಗಬೇಕು. ‘ಭೀಮರಾವ್ ಅಂಬೇಡ್ಕರ್ ಅವರು ಬಾಲ್ಯದಲ್ಲಿ ಅಸ್ಪೃಶ್ಯತೆಯಂತಹ ಕಡು ಕಷ್ಟಗಳನ್ನು ಅನುಭವಿಸಿದರೂ, ಶಿಕ್ಷಣ ಮತ್ತು ಜ್ಞಾನದ ಮೂಲಕ ಜಗತ್ತನ್ನೇ ಗೆದ್ದವರು. ಆಗಿನ ಮಾಜಿ ಪ್ರಧಾನಿ ನೆಹರೂ ಅವರು ಅಂಬೇಡ್ಕರ್ ಅವರನ್ನು ದೇಶದ ವಜ್ರದಂತಹ ಸಚಿವ ಎಂದು ಬಣ್ಣಿಸಿದ್ದರು’ ಎಂಬುದಾಗಿ ನೆನಪಿಸಿಕೊಂಡರು.

ಜ್ಞಾನ ಮತ್ತು ಪ್ರತಿಭೆ ಎಂಬುದು ಯಾರ ಸ್ವತ್ತೂ ಅಲ್ಲ. ಯಾರು ಶ್ರಮ ವಹಿಸುತ್ತಾರೋ ಮತ್ತು ಯಾರಲ್ಲಿ ಸಾಮಥ್ರ್ಯವಿದೆಯೋ ಅವರಿಗೆ ಮಾತ್ರ ಅದು ದಕ್ಕಲು ಸಾಧ್ಯ ಎಂಬುದನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನದ ಮೂಲಕ ಜಗತ್ತಿಗೆ ಸಾಬೀತುಪಡಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬುದ್ದ ಬಸವ ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿಲಾಯಿತು.

ವಾರ್ತಾಧಿಕಾರಿ ತುಕಾರಾಂ ರಾವ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಆಕಾಶವಾಣಿಯ ಡಾ.ನವೀನ್ ಮಸ್ಕಲ್ ಕಾರ್ಯಕ್ರಮ ನಿರೂಪಿದರು.

ಮೈಸೂರು ಜಿಲ್ಲೆಯ ಸರಗೂರಿನ ಅಮ್ಮ ವಸುಂಧರೆ ಕಲಾತಂಡ, ಭೀಮಗಾಯನ ಸಮಾನತೆಯ ಸ್ವರ ಸಂಭ್ರಮದಲ್ಲಿ ಅಂಬೇಡ್ಕರ್ ಕುರಿತಾದ ನಿಮಗಿದೋ ನಮನ ಜೈ ಭೀಮ್, ಭೀಮನಂತಾಗುವ ಆಸೆ, ಜೈ ಭೀಮ್ ಮಹಾರಾಷ್ಟ್ರದ ಹಣತೆ ನೀನೊಂದು ಮುಗಿಯದ ಚರಿತೆ, ಜಯ ಹೇ ಭಾರತ ಭಾಗ್ಯವಿಧಾತ ಮುಂತಾದ ಅದ್ಭುತವಾದ ಗೀತೆಗಳನ್ನು ಹಾಡಿದರು.

 ಇದರೊಂದಿಗೆ ಬುದ್ದನ ಕುರಿತಾದ ಸುವ್ವಮ್ಮ ಸುವ್ವಲಾಲಿ, ಬುದ್ದನ ಗೀತೆ, ಬುದ್ಧಂ ದಮ್ಮಮ್ ಸುಂದರಂ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಕೊನೆಯಲ್ಲಿ ಕುಲದಲ್ಲಿ ಕೀಳ್ಯಾವುದೋ ಗೀತೆ ಹಾಡುವ ಮೂಲಕ ಸಭಿಕರನ್ನು ರಂಜಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಷ್ಪಲತಾ ಭಾವಿಮಠ, ಆಹಾರ ಮತ್ತು ನಾಗರಿಕ ಸರಬಾಜು ಇಲಾಖೆ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆಸಿಂಘೆ, ತಹಶೀಲ್ದಾರ್ ಗೋವಿಂದರಾಜು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ, ಕಾರ್ಮಿಕ ಅಧಿಕಾರಿ ಅನಿಲ್ ಸೇರಿದಂತೆ ದಲಿತ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರುಗಳು, ಇತರೆ ಸಂಘಟನೆಗಳ ಪದಾಧಿಕಾರಿಗಳು, ಎಲ್ಲ ಸಮಾಜದ ಮುಖಂಡರುಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಭೀಮಗಾಯನದ ರಸದೌತಣವನ್ನು ಆಸ್ವಾದಿಸಿದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಬರದ ಬೆಂಕಿಯಲ್ಲಿ ಬೆಂದ ಕೋಟೆನಾಡು: ಕಣ್ಣೀರಿಟ್ಟ ರೈತ, ಕಣ್ಣಾರೆ ಕಂಡ ಕೇಂದ್ರ ತಂಡ

ಮಾನ್ಸೂನ್‌ನ ಜೂಜಾಟಕ್ಕೆ ಎಲ್ ನಿನೋ ಪರಿಣಾಮವೂ ಸೇರಿ ರಾಜ್ಯಾದ್ಯಂತ ಬರ ಆವರಿಸಿದೆ....

ಚಿತ್ರದುರ್ಗ | ಓವರ್‌ಟೇಕ್ ವೇಳೆ ಶಾಲಾ ಬಸ್ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಕ್ಕದ...

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ...

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಒಲಿದ ಸಚಿವ ಸ್ಥಾನ

 ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ...