ಚಿತ್ರದುರ್ಗ | ನಿಯಮ ಬಾಹಿರ ಬೆಳೆವಿಮೆ ಪಾವತಿವಿಚಾರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

Date:

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ ಪಡೆಯದೆ, ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ರೈತರಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ ನಿಯಮ ಬಾಹಿರವಾಗಿ ಬೆಳೆವಿಮೆ ಪಾವತಿ ಮಾಡಿದ ವಿಮಾ ಕಂಪನಿ ಪ್ರತಿನಿಧಿಗಳ ವಿರುದ್ಧ ವಿಚಾರಣೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದ್ದಾರೆ.

- Advertisement -

ಘಟನೆ ಕುರಿತು ರೈತರು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ, ಜಿಲ್ಲಾಧಿಕಾರಿಗಳು ಗುರುವಾರ ನಗರದ ಗೃಹ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ವಿಮಾ ಕಂಪನಿ ಪ್ರತಿನಿಧಿಗಳ ಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ನಿಯಮಗಳ ಪ್ರಕಾರ ಬೆಳೆ ಹಾನಿ ಬಗ್ಗೆ ತಹಶೀಲ್ದಾರ್ ನೇತೃತ್ವದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ವಿಮಾ ಕಂಪನಿಗಳನ್ನೊಳಗೊಂಡ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ. ಆದರೆ, ಯಾವುದೇ ಸಮೀಕ್ಷೆ ನಡೆಸದೇ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು 77 ಜನರಿಗೆ ರೂ.44,51,655 ಬೆಳೆವಿಮೆಯನ್ನು ನಿಯಮಬಾಹಿರವಾಗಿ ಪಾವತಿಸಿರುವುದು ಜಿಲ್ಲಾಡಳಿತದ ತನಿಖೆಯಿಂದ ಬಹಿರಂಗವಾಗಿದೆ. ಈ ಕುರಿತು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಸ್ತೆ ತಡೆ ಹಾಗೂ ಪ್ರತಿಭಟನೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು.

ಜಿಲ್ಲಾಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ವಿಮಾ ಕಂಪನಿಯ ಪ್ರತಿನಿಧಿಗಳು ಸೂಕ್ತ ವಿವರಣೆ ನೀಡದೇ ಬೇಜವಾಬ್ದಾರಿತನ ತೋರಿದರು. ಯಾವ ಆಧಾರದ ಮೇಲೆ ವಿಮೆ ಪಾವತಿಸಲಾಗಿದೆ ಎಂಬ ಬಗ್ಗೆ ಸಮಂಜಸ ಮಾಹಿತಿ ನೀಡಲು ವಿಫಲರಾದರು. ನಿಯಮ ಉಲ್ಲಂಘಿಸಿರುವುದು ಸ್ಪಷ್ಟವಾಗಿ ಕಂಡುಬಂದ ಹಿನ್ನಲೆಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾ ಕಂಪನಿ ಪ್ರತಿನಿಧಿಗಳಾದ ಮಹೇಶ್, ಸಲಾವುದ್ದೀನ್, ರಾಜಶೇಖರ್ ಇವರಿಂದ ಸಂಪೂರ್ಣ ಮಾಹಿತಿ ಪಡೆಯಲು ಪೆÇಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶಿಸಿದರು.

ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 77 ರೈತರಿಗೆ ರೂ.44,51,655 ಬೆಳೆ ವಿಮೆ ಪಾವತಿಸಲಾಗಿದೆ. ಈ ಪೈಕಿ 59 ರೈತರಿಗೆ ಅವರು ನೋಂದಾಯಿಸಿದ್ದ ಬೆಳೆಗಳಿಗೆ ವಿಮೆ ಪಾವತಿಯಾಗಿದೆ. ಆದರೆ, ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ವರದಿಯನ್ನು ವಿಮಾ ಕಂಪನಿ ಪಡೆದಿಲ್ಲ. ಪಾವತಿಯಾದ 5 ಪ್ರಕರಣಗಳಲ್ಲಿ ರೈತರು ಬೆಳೆವಿಮೆ ಮಾಡಿಸಿದ್ದರೂ ಜಮೀನಿನಲ್ಲಿ ಯಾವುದೇ ಬೆಳೆ ಇರಲಿಲ್ಲ. ಇಂತಹ ಬೀಳು ಭೂಮಿಗೂ ವಿಮೆ ಪಾವತಿ ಮಾಡಲಾಗಿದೆ. 11 ಪ್ರಕರಣಗಳಲ್ಲಿ ರೈತರು ನೋಂದಾಯಿಸಿದ ಬೆಳೆಗೂ, ಹೊಲದಲ್ಲಿದ್ದ ಬೆಳೆಗೂ ಯಾವುದೇ ಸಾಮ್ಯತೆ ಇರಲಿಲ್ಲ. 2 ಪ್ರಕರಣಗಳಲ್ಲಿ ರೈತರು ನೋಂದಾಯಿಸಿರುವ ಭೂ ವಿಸ್ತೀರ್ಣಕ್ಕಿಂತ ಹೆಚ್ಚಿನ ಪ್ರದೇಶಕ್ಕೆ ವಿಮೆಯನ್ನು ಪಾವತಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಓವರ್‌ಟೇಕ್ ವೇಳೆ ಶಾಲಾ ಬಸ್ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಕ್ಕದ...

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ...

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಒಲಿದ ಸಚಿವ ಸ್ಥಾನ

 ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ...