ಚಿತ್ರದುರ್ಗ | ಸಾಮಾಜಿಕ ಜಾಲತಾಣಗಳ ಅತಿಬಳಕೆ ಯುವಜನರ ನೆಮ್ಮದಿಗೆ ಧಕ್ಕೆ: ಗಜೇಂದ್ರ

Date:

 ಕೃತಕ ಬುದ್ಧಿಮತ್ತೆ (ಎಐ) ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇಂದಿನ ತಂತ್ರಜ್ಞಾನ ಯುಗದಲ್ಲಿ ಮಾನವೀಯ ಸಂವೇದನೆ ಮತ್ತು ವಿವಿಧ ಕೌಶಲಗಳಿಂದ ಜನರು ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಆರ್. ತಾರಿಣಿ ಶುಭಾದಾಯಿನಿ ಅಭಿಪ್ರಾಯಪಟ್ಟರು.

- Advertisement -

ಚಿತ್ರದುರ್ಗ  ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ‘ಸಾಂಸ್ಕೃತಿಕ ಸಮಿತಿ ಹಾಗೂ ವಿವಿಧ ಸಮಿತಿಗಳ ಚಟುವಟಿಕೆಗಳ ಉದ್ಘಾಟನಾ ಸಮಾರಂಭ’ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ತಮ್ಮನ್ನು ತಾವು ಗಟ್ಟಿಗೊಳಿಸಿಕೊಳ್ಳಬೇಕು. ಪದವಿ ಹಂತದಲ್ಲಿ ಆಯೋಜಿಸುವ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಉತ್ತಮ ಆಲೋಚನೆಗಳನ್ನು ಬೆಳೆಸಿಕೊಂಡು, ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತುಮಕೂರಿನ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಸಿದ್ದಲಿಂಗಯ್ಯ, ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ‘ಅಗ್ನಿರೆಕ್ಕೆಗಳು’ ಕೃತಿ ಹಾಗೂ ಇಂಗ್ಲಿಷ್‌ನ ಶ್ರೇಷ್ಠ ಕವಿ ವಿಲಿಯಂ ಶೇಕ್ಸ್‌ಪಿಯರ್ ಅವರ ಸೃಜನಶೀಲ ಬರಹಗಳ ಓದು ಆತ್ಮಾವಲೋಕನಕ್ಕೆ ಪ್ರೇರಣೆ ನೀಡುತ್ತದೆ ಎಂದರು.

ಪ್ರಸ್ತುತ ಸಮಾಜದಲ್ಲಿ ತಿಳಿದುಕೊಂಡು ಬದುಕುವ ಬದಲಿಗೆ ಒಬ್ಬರನ್ನೊಬ್ಬರು ತುಳಿದು ಬದುಕುವ ಪ್ರವೃತ್ತಿ ಹೆಚ್ಚಾಗುತ್ತಿದೆ. ನಮ್ಮ ಮಾತುಗಳು ಇತರರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಮನಸ್ಸನ್ನು ಪರಿಶುದ್ಧವಾಗಿಟ್ಟುಕೊಂಡು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ವೃತ್ತಿಪರ ತರಬೇತುದಾರ ಚಳ್ಳಕೆರೆ ಗಜೇಂದ್ರ ಮಾತನಾಡಿ, ಆಧುನಿಕ ಜೀವನಶೈಲಿ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಯುವಜನರು ಮಾನಸಿಕ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಪದವಿ ಹಂತದಲ್ಲಿಯೇ ವಿವಿಧ ಕೌಶಲಗಳನ್ನು ಬೆಳೆಸಿಕೊಂಡು ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.

ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ. ಬಿ.ಇ. ಜಗನ್ನಾಥ್ ಹಾಗೂ ಐಕ್ಯೂಎಸಿ ಸಂಚಾಲಕಿ ಪ್ರೊ. ಕೆ. ಲೀಲಾವತಿ ಮಾತನಾಡಿದರು.

ವಿದ್ಯಾರ್ಥಿನಿ ಸಂಗೀತಾ ಪ್ರದರ್ಶಿಸಿದ ಭರತನಾಟ್ಯ ಕಾರ್ಯಕ್ರಮದ ಗಮನ ಸೆಳೆಯಿತು. ಬಳಿಕ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ. ಹನುಮಂತಪ್ಪ, ರೆಡ್‌ಕ್ರಾಸ್ ಸಂಚಾಲಕ ಪ್ರೊ. ಪ್ರದೀಪ್ ಕುಮಾರ್, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ. ಎಸ್.ಬಿ. ಶಿವಪ್ರಸಾದ್, ಎನ್‌ಎಸ್‌ಎಸ್ ಅಧಿಕಾರಿಗಳಾದ ಪ್ರೊ. ಬಸವರಾಜ ಮತ್ತು ಪ್ರೊ. ಪ್ರಸಾದ್, ರೋವರ್ಸ್‌-ರೇಂಜರ್ಸ್ ಸಂಚಾಲಕಿ ಪ್ರೊ. ಬಿ. ಜಯಮ್ಮ, ಮುರಳೀಧರ, ಕ್ರೀಡಾಧಿಕಾರಿ ಪ್ರೊ. ಪ್ರಸನ್ನ ಕುಮಾರ್, ಎನ್‌ಸಿಸಿ ಅಧಿಕಾರಿ ಪ್ರೊ. ಮಂಜುನಾಥ್, ಪ್ರಾಧ್ಯಾಪಕರಾದ ಪ್ರೊ. ಮೇಘನಾ ಹಾಗೂ ಪ್ರೊ. ಸೌಮ್ಯ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ...

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಒಲಿದ ಸಚಿವ ಸ್ಥಾನ

 ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ...

ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ...