ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿತ್ರದುರ್ಗದ ‘ಖಾಸ ಬೇಡರ ಪಡೆ’ ಕಲರವ

Date:

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಈ ಬಾರಿ ಕೋಟೆನಾಡು ಚಿತ್ರದುರ್ಗದ ಜಾನಪದ ಕಲೆಯ ವೈಭವ ಅನಾವರಣಗೊಳ್ಳಲಿದೆ. ಜಿಲ್ಲೆಯ ಹೆಮ್ಮೆಯ ‘ಖಾಸ ಬೇಡರ ಪಡೆ’ ಜಾನಪದ ಕಲಾತಂಡ ಜಂಬೂ ಸವಾರಿಯಲ್ಲಿ ಭಾಗವಹಿಸಲಿದ್ದು, ತಿಪ್ಪೇಸ್ವಾಮಿ ಚಲ್ಲೂರು ತಂಡವನ್ನು ಮುನ್ನಡೆಸಲಿದ್ದಾರೆ.

- Advertisement -

ಚಿತ್ರದುರ್ಗದ ಸಾಂಪ್ರದಾಯಿಕ ಕಲಾಪರಂಪರೆಯನ್ನು ರಾಜ್ಯದ ಸಾಂಸ್ಕೃತಿಕ ವೇದಿಕೆಯಲ್ಲಿ ಪರಿಚಯಿಸಲು ಸಜ್ಜಾಗಿರುವ ಈ ತಂಡದಲ್ಲಿ 40ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ. ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹೊಸ ಸಾಂಪ್ರದಾಯಿಕ ಉಡುಪುಗಳು ಹಾಗೂ ಅಗತ್ಯ ಪರಿಕರಗಳನ್ನು ಒದಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ ಮಾತನಾಡಿ, ಈ ಹಿಂದೆ ಜಂಬೂ ಸವಾರಿಯಲ್ಲಿ ಭಾಗವಹಿಸಲು 10ರಿಂದ 20 ಕಲಾವಿದರ ಸಣ್ಣ ತಂಡಗಳನ್ನು ಕಳುಹಿಸಲಾಗುತ್ತಿತ್ತು. ಆದರೆ ಈ ಬಾರಿ ಮುಖ್ಯಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ವಿಶೇಷ ಆಸಕ್ತಿಯಿಂದ ರಾಜ್ಯದ ಪ್ರತಿ ಕಲಾತಂಡದಲ್ಲೂ ಕನಿಷ್ಠ 40 ಕಲಾವಿದರು ಭಾಗವಹಿಸುವಂತೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಹೊಸ ಸಾಂಪ್ರದಾಯಿಕ ಉಡುಪುಗಳು ಮತ್ತು ಅಗತ್ಯ ಪರಿಕರಗಳೊಂದಿಗೆ ಸಜ್ಜಾಗಿರುವ ಚಿತ್ರದುರ್ಗದ ಕಲಾತಂಡವು ಜಂಬೂ ಸವಾರಿಯಲ್ಲಿ ಜಿಲ್ಲೆಯ ಜಾನಪದ ಪರಂಪರೆಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಜಂಬೂ ಸವಾರಿಯಲ್ಲಿ ಭಾಗವಹಿಸಲು ತೆರಳಿರುವ ಕಲಾತಂಡಕ್ಕೆ ಜಿಲ್ಲಾಧಿಕಾರಿ ಎಸ್. ರಮ್ಯಾ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ವಿಭಾಗೀಯ ಜಂಟಿ ನಿರ್ದೇಶಕ ಅಶೋಕ ಎನ್. ಚಲವಾದಿ ಹಾಗೂ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಓವರ್‌ಟೇಕ್ ವೇಳೆ ಶಾಲಾ ಬಸ್ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಕ್ಕದ...

ಚಿತ್ರದುರ್ಗ | ವೇದಾವತಿ ನದಿಯ ಸೇತುವೆ ಬಿರುಕು: ಗ್ರಾಮಸ್ಥರಲ್ಲಿ ಆತಂಕ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರನಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ...

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ...

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಒಲಿದ ಸಚಿವ ಸ್ಥಾನ

 ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ...