ಚಿತ್ರದುರ್ಗದಲ್ಲಿ ಅ.26ರಂದು ವಾಲ್ಮೀಕಿ ಜಯಂತಿ: ಸರಳ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ

Date:

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ಟೋಬರ್ 26ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್. ರಮ್ಯಾ, ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 26ರಂದು ಬೆಳಿಗ್ಗೆ 11ಕ್ಕೆ ಜಯಂತಿ ಕಾರ್ಯಕ್ರಮ ನಡೆಯಲಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನ್ವಯ ಕಾರ್ಯಕ್ರಮವನ್ನು ಸರಳವಾಗಿ ಆಯೋಜಿಸಬೇಕು. ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್. ದಿವಾಕರ್ ಮಾತನಾಡಿ, ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಜಯಂತಿ ಆಚರಣೆಗೆ ಅನುಮತಿ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ರಾಜಕೀಯ ಪ್ರಚಾರಕ್ಕೆ ಅವಕಾಶವಿಲ್ಲ. ರಾಜಕೀಯ ಮುಖಂಡರು ಹಾಗೂ ಜನಪ್ರತಿನಿಧಿಗಳ ಭಾವಚಿತ್ರಗಳು ಮತ್ತು ಬ್ಯಾನರ್‌ಗಳನ್ನು ಬಳಸುವಂತಿಲ್ಲ. ನೀತಿ ಸಂಹಿತೆಯ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದರು.

ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಈ ಬಾರಿ ಜಯಂತಿಯನ್ನು ಸರಳವಾಗಿ ಆಚರಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಸಮಾಜದ ಮುಖಂಡರು ತಿಳಿಸಿದರು. ಆದರೆ, ಮುಂದಿನ ದಿನಗಳಲ್ಲಿ ಸಮಾಜದ ವತಿಯಿಂದ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ, ಮುಖಂಡರಾದ ವೆಂಕಟೇಶ್, ಲಕ್ಷ್ಮಿಸಾಗರ ರಾಜಣ್ಣ, ನಿವೃತ್ತ ಪ್ರಾಂಶುಪಾಲ ಡಾ. ಎಚ್. ಗುಡ್ಡದೇಶ್ವರಪ್ಪ, ಸಿ.ಜಿ. ಶ್ರೀನಿವಾಸ್, ಓ.ಬಿ. ಬಸವರಾಜ್, ಮಂಜುನಾಥ್, ಎ.ಟಿ. ತಿಪ್ಪೇಸ್ವಾಮಿ, ದಿನೇಶ್ ಗೌಡಗೆರೆ, ದರ್ಶನ್ ಇಂಗಳದಾಳ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯೂರು | ನಾಗಭೂಷಣ ಡಿ. ಅವರಿಗೆ ‘ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್’

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ನಾಗಭೂಷಣ ಡಿ. ಅವರು...

ಚಿತ್ರದುರ್ಗ| 30ವರ್ಷದ ಹೋರಾಟದಿಂದ ಭದ್ರಾ ಮೇಲ್ದಂಡೆ ನೀರು: ಪಂಡಿತಾರಾಧ್ಯ ಶ್ರೀ ಅಭಿಮತ

30 ವರ್ಷಗಳ ಸುದೀರ್ಘ ಹೋರಾಟಕ್ಕೆ ಫಲವಾಗಿಭದ್ರಾ ಮೇಲ್ದಂಡೆ ನೀರು ಹೊಸದುರ್ಗ– ಹೊಳಲ್ಕೆರೆಗೆ...

ಚಿತ್ರದುರ್ಗ | ಓವರ್‌ಟೇಕ್ ವೇಳೆ ಶಾಲಾ ಬಸ್ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಕ್ಕದ...

ಚಿತ್ರದುರ್ಗ | ವೇದಾವತಿ ನದಿಯ ಸೇತುವೆ ಬಿರುಕು: ಗ್ರಾಮಸ್ಥರಲ್ಲಿ ಆತಂಕ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರನಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ...